Belthangady: ಅಶ್ಲೀಲ ವಿಡಿಯೋ ತೋರಿಸಿ ಬಾಲಕಿಗೆ ಲೈಂಗಿಕ ಕಿರುಕುಳ- ಉಜಿರೆ ಶಾಲೆ ಶಿಕ್ಷಕ ಪೋಲೀಸ್ ವಶಕ್ಕೆ !!

Share the Article

Belthanagady: ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆ(Ujire) ಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ(SDM Primary School Ujire) ಲ್ಲಿ 6ನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿಯೋರ್ವಳಿಗೆ ಶಾಲೆಯ ಶಿಕ್ಷಕನೊಬ್ಬ ಅಶ್ಲೀಲ ವಿಡಿಯೋ ತೋರಿಸಿ ಲೈಂಗಿಕ ಕಿರುಕುಳ ನೀಡುತ್ತಿದ್ದ ಪಕ್ರರಣ ಬಯಲಿಗೆ ಬಂದಿದ್ದು, ಶಿಕ್ಷಕನನ್ನು ಬೆಳ್ತಂಗಡಿ(Belthangady) ಪೋಲೀಸರು ಬಂಧಿಸಿದ್ದಾರೆ.

ಇದನ್ನೂ ಓದಿ: Malaika Arora: ಮೇಕಪ್ ಇಲ್ಲದೆ ಕಾಣಿಸಿಕೊಂಡ ಹಾಟ್ ಬ್ಯೂಟಿ ಮಲೈಕಾ ಅರೋರಾ : 50 ವರ್ಷಗಳಲ್ಲಿ ಸ್ವಲ್ಪವೂ ಕಡಿಮೆಯಾಗದ ಫಿಟ್ನೆಸ್

ಶಿಕ್ಷಕ ವಿರಾಜ್ ಜೈನ್(Viraj Jain) ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ ಎಂದು ಗುರುತಿಸಲಾಗಿದೆ. ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸಿ, ನಿರಂತರ ಲೈಂಗಿಕ ಕಿರುಕುಳ ನೀಡುತ್ತಿದ್ದರೆಂದು ಠಾಣೆಯಲ್ಲಿ ಫೋಕ್ಸೋ ಪ್ರಕರಣ ದಾಖಲಾಗಿದೆ. ಸದ್ಯ ಕಾಮುಕನನ್ನು ಪೋಲೀಸರು ವಶಕ್ಕೆ ಪಡೆದಿದ್ದಾರೆ.

ಇದನ್ನೂ ಓದಿ: Indian Railway: ರೈಲ್ವೆ ಪ್ರಯಾಣಿಕರೆ ಗಮನಿಸಿ – ಟಿಕೆಟ್ ಬುಕ್ ಮಾಡಲು ಹೊಸ ರೂಲ್ಸ್ ಜಾರಿ !!

ಅಂದಹಾಗೆ ಮಾರ್ಚ್ 10 ರಂದು ವಿದ್ಯಾರ್ಥಿನಿ ಶಾಲೆಗೆ ಹೋಗುವುದಿಲ್ಲ ಎಂದು ಪೋಷಕರ ಮುಂದೆ ಹೇಳಿದ್ದಾಳೆ. ಆಗ ಪೋಷಕರು ಏನಾಯಿತು ಎಂದು ವಿಚಾರಿಸಿದ್ದಾರೆ. ಆಗ ವಿದ್ಯಾರ್ಥಿನಿ ಶಾಲೆಯ ಶಿಕ್ಷಕನಾದ ವಿರಾಜ್ ಜೈನ್ ಕಳೆದ ವರ್ಷ ಜೂನ್ನಿಂದ ದೂರು ದಾಖಲಾಗುವ ದಿನದವರೆಗೆ ವಿದ್ಯಾರ್ಥಿನಿಗೆ ಅಶ್ಲೀಲ ವಿಡಿಯೋ ತೋರಿಸುತ್ತಾ, ಲೈಂಗಿಕ ಕಿರುಕುಳ ನೀಡುತ್ತಾ ಬಂದಿದ್ದಾನೆ ಎಂದು ತಿಳಿಸಿದ್ದಾಳೆ. ನಂತರ ಪೋಷಕರು ಕಂಪ್ಲೇಂಟ್ ರಿಜಿಸ್ಟ್ರಾರ್ ಮಾಡಿದ್ದಾರೆ.

Leave A Reply