Dakshina Kannada Lokasabha: ‘ಶೂದ್ರ ವರ್ಗ ನಮ್ಮನ್ನು ಆಳಿದರೆ, ಬಂಟರು ಸಹಿಸುವುದಕ್ಕೆ ಸಾಧ್ಯವೇ?’: ಬಿಜೆಪಿಗೆ ಮತ ಹಾಕುವಂತೆ ಆಗ್ರಹಿಸಿ ಹೀಗೊಂದು ‘ಕರಪತ್ರ’ ವೈರಲ್ !!

Dakshina Kannada Lokasabha: ದೇಶದಲ್ಲಿ ಎರಡನೇ ಹಂತ ಹಾಗೂ ರಾಜ್ಯದಲ್ಲಿ ಮೊದಲನೇ ಹಂತದ ಚುನಾವಣೆ ಶುಕ್ರವಾರ ನಡೆಯಲಿದ್ದು, ಈ ಕ್ಷೇತ್ರಗಳಲ್ಲಿ ಹೈವೋಲ್ಟೇಜ್ ಅಖಾಡವಾದ ದ.ಕ. ಲೋಕಸಭಾ(Dakshina Kannada Lokasabha) ಕ್ಷೇತ್ರ ಕೂಡ ಒಂದು. ಇಲ್ಲಿ ಬಿಜೆಪಿ(BJP)  ಅಭ್ಯರ್ಥಿಯಾಗಿ ಬಂಟ ಸಮುದಾಯದ  ಕ್ಯಾಪ್ಟನ್ ಬ್ರಿಜೇಶ್ ಚೌಟ(Captain Brijesh Chowta) ಮತ್ತು ಕಾಂಗ್ರೆಸ್‌ ಅಭ್ಯರ್ಥಿಯಾಗಿ ಬಿಲ್ಲವ ಸಮುದಾಯದ ಪದ್ಮರಾಜ್ ಪೂಜಾರಿ(Padmaraj Poojari) ಕಣದಲ್ಲಿದ್ದಾರೆ. ಆದರೀಗ ಅಚ್ಚರಿ ಎನ್ನುವ ಹಾಗೆ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟಗೆ ಮತ ನೀಡಿ ಗೆಲ್ಲಿಸುವಂತೆ ಬಂಟರಲ್ಲಿ ಮನವಿ ಮಾಡಿರುವ ಪತ್ರವೊಂದು ವೈರಲ್ ಆಗುತ್ತಿದೆ‌.

ಹೌದು, ದಕ್ಷಿಣ ಕನ್ನಡದಲ್ಲಿ ಈ ಬಾರಿಯ ಲೋಕಸಭಾ ಚುನಾವಣಾ ಕಣ ಹಿಂದುತ್ವದಿಂದ ಜಾತಿ ತಿರುವು ಪಡೆದುಕೊಂಡು, ಬಿಲ್ಲವ vs ಬಂಟ ಎಂಬ ಜಿದ್ದಾಜಿದ್ದಿಗೆ ವಾತಾವರಣ ನಿರ್ಮಿಸಿಕೊಟ್ಟಿದೆ. ಒಂದೆಡೆ, ಬಿಲ್ಲವ ಅಭ್ಯರ್ಥಿ ಪದ್ಮರಾಜ್‌ ರಾಮಯ್ಯ ಅವರನ್ನು ಕಾಂಗ್ರೆಸ್‌ ಕಣಕ್ಕಿಳಿಸಿದರೆ, ಬಂಟ ಸಮುದಾಯದ ಬ್ರಿಜೇಶ್‌ ಚೌಟರನ್ನು ಬಿಜೆಪಿ ತನ್ನ ಅಭ್ಯರ್ಥಿಯಾಗಿ ಕಣಕ್ಕಿಳಿಸಿದೆ. ಜನಸಂಖ್ಯೆ ಬಲದಿಂದ ಬಿಲ್ಲವರಿಗೆ ಅಧಿಕಾರದಲ್ಲಿ ಸೂಕ್ತ ಪ್ರಾತಿನಿಧ್ಯ ಸಿಗಲಿಲ್ಲ ಎಂಬ ಆರೋಪಗಳ ನಡುವೆ ಕಾಂಗ್ರೆಸ್‌ ಬಿಲ್ಲವ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಈ ನಡುವೆ, ಎರಡು ಜಾತಿಗಳ ನಡುವೆ ವೈಷಮ್ಯ ಹುಟ್ಟಿಸುವಂತಹ ಕರಪತ್ರವೊಂದು ಸಾಮಾಜಿಕ ಮಾಧ್ಯಮದಲ್ಲಿ ಹರಿದಾಡುತ್ತಿದ್ದು ನಮ್ಮ ಸಮುದಾಯದ ಬ್ರಿಜೇಶ್‌ ಚೌಟರನ್ನು ಗೆಲ್ಲಿಸಲು ಬಂಟ ಮತದಾರರಿಗೆ ಮನವಿ’ ಎಂಬ ಶೀರ್ಷಿಕೆಯ ಕರಪತ್ರದಲ್ಲಿ ‘ಶೂದ್ರ ವರ್ಗದ ಜನರು ನಮ್ಮನ್ನು ಆಳಲು ಹೊರಟರೆ ಅದನ್ನು ಸ್ವಾಭಿಮಾನಿಗಳಾದ ನಾವು ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ?’ಎಂದು ಉಲ್ಲೇಖಿಸಲಾಗಿದೆ.

ವೈರಲ್‌ ಆದ ಕರಪತ್ರದಲ್ಲಿ ಏನೇನಿದೆ?

ಪ್ರೀತಿಯ ಸ್ವಜಾತಿ ಬಾಂಧವರೇ, ಚುನಾವಣೆಯ ಅಂತಿಮ ಘಟ್ಟದಲ್ಲಿ ನಾವಿದ್ದೇವೆ. ನಮ್ಮ ಸಮಾಜಕ್ಕೆ ಸೇರಿದ ಬ್ರಿಜೇಶ್ ಚೌಟರವರು ಭಾರತೀಯ ಜನತಾ ಪಕ್ಷದಿಂದ ಅಭ್ಯರ್ಥಿಯಾಗಿ ಕಾಂಗ್ರೆಸ್ ಪಕ್ಷಕ್ಕೆ ಎದುರಾಳಿಯಾಗಿದ್ದಾರೆ. ಒಂದು ಕಾಲದಲ್ಲಿ ಬಂಟ ನಾಯಕರನ್ನು ಮೂಲೆಗೆ ಸರಿಸಿ ಬಿಲ್ಲವರು ಮೆರೆದಾಡಿದ್ದ ಕ್ಷೇತ್ರ ನಂತರದ ದಿನದಲ್ಲಿ ನಮ್ಮ ಬಂಟರ ತೆಕ್ಕೆಗೆ ಬಂದಿದೆ. ನಳಿನ್ ಕುಮಾರ್ ಕಟೀಲ್ ಸತತ ಮೂರು ಬಾರಿ ಗೆಲ್ಲುವ ಮೂಲಕ ನಾವು ನಮ್ಮ ಒಗ್ಗಟ್ಟನ್ನು ಸಾಬೀತುಪಡಿಸಿದ್ದೇವೆ.

ಆದರೆ ಒಂದು ಕಾಲದಲ್ಲಿ ನಮ್ಮ ಒಕ್ಕಲಿನಲ್ಲಿದ್ದ ಬಿಲ್ಲವರು, ಜನಾರ್ದನ ಪೂಜಾರಿಯವರು ಸಂಸದರಾದ ನಂತರ ದೊಡ್ಡ ದೊಡ್ಡ ಉದ್ಯಮದಲ್ಲಿ ತೊಡಗಿಸಿಕೊಂಡು ಊರಿಗೆ, ಜಿಲ್ಲೆಗೆ, ಪರ ಊರಿನಲ್ಲಿ ಪ್ರಭಾವಿಯಾಗಿದ್ದ ನಮ್ಮ ಸಮಾಜದವರ ಪ್ರಭಾವವನ್ನು ತಗ್ಗಿಸಿ ಮೆರೆದಾಡತೊಡಗಿದ್ದರು. ಇಂತಹ ಶೂದ್ರ ವರ್ಗದ ಜನರು ನಮ್ಮನ್ನು ಆಳಲು ಹೊರಟರೆ ಅದನ್ನು ಸ್ವಾಭಿಮಾನಿಗಳಾದ ನಾವು ಬಂಟರು ಸಹಿಸುವುದಕ್ಕೆ ಸಾಧ್ಯವಿದೆಯೇ? ಎನ್ನುವ ಪ್ರಶ್ನೆ ನಮ್ಮನ್ನು ಕಾಡುತ್ತಿದೆ. ಸೇಂದಿ ತೆಗೆದು, ಕೂಲಿ ನಾಲಿ ಮಾಡಿಕೊಂಡು ಬದುಕುತ್ತಿದ್ದವರು. ಇಂದು ನಮ್ಮ ಮೇಲೆ ಅಧಿಕಾರವನ್ನು ಚಲಾಯಿಸಲು ಹೊರಟರೆ ಅವರ ಕೈಕೆಳಗೆ ಬಾಳುವುದಕ್ಕೆ ನಮಗೆ ಸಾಧ್ಯವಿದೆಯೇ ಎನ್ನುವುದನ್ನು ಸ್ವಾಭಿಮಾನಿಗಳಾದ ನಾವು ಆತ್ಮವಿಮರ್ಶೆ ಮಾಡಿಕೊಳ್ಳಬೇಕಾಗಿದೆ. ಜನಾರ್ದನ ಪೂಜಾರಿಯ ನಂತರ ಮತ್ತೊಮ್ಮೆ ಅವರ ಶಿಷ್ಯನಿಗೆ ಕಾಂಗ್ರೆಸ್ ಪಕ್ಷ ಟಿಕೆಟ್ ನೀಡುವ ಮೂಲಕ ನಮ್ಮ ಬಂಟ ಸಮಾಜಕ್ಕೆ ಸವಾಲನ್ನು ಎಸೆದಿದೆ. ಈ ಸವಾಲನ್ನು ನಾವು ಸ್ವೀಕರಿಸುವ ಮೂಲಕ ನಮ್ಮ ಸಮಾಜಕ್ಕೆ ಸೇರಿದ ಬ್ರಿಜೇಶ್ ಚೌಟರನ್ನು ಲಕ್ಷ ಲಕ್ಷ ಬಹುಮತದಿಂದ ಗೆಲ್ಲಿಸುವುದಕ್ಕೆ ರಾತ್ರಿ ಹಗಲೆನ್ನದೆ ದುಡಿಯಬೇಕಾಗಿದೆ

ಒಂದು ವೇಳೆ ಶೂದ್ರ ವರ್ಗಕ್ಕೆ ಸೇರಿದವ ಗೆದ್ದು ಬಂದರೆ ಮುಂದಿನ ದಿನದಲ್ಲಿ ಇತರ ಶೂದ್ರ ವರ್ಗಕ್ಕೆ ಸೇರಿದವರು ಗೌಡರು, ಕುಲಾಲ್, ಕೊಟ್ಟಾರಿ, ಗಾಣಿಗ, ಭಂಡಾರಿ, ನಾಯ್ಕ, ಎಸ್ಸಿ-ಎಸ್ಟಿಗಳು ಒಗ್ಗಟ್ಟಾಗಿ ನಮ್ಮನ್ನು ಆಳಲು ಹೊರಟರೆ, ಬೇರೆ ಬೇರೆ ಚುನಾವಣೆಗಳಲ್ಲಿ ಸ್ಪರ್ಧಿಸಿ ನಮ್ಮವರನ್ನು ಮೂಲೆಗುಂಪು ಮಾಡಿದರೆ ಅದನ್ನು ನಮಗೆ ಸಹಿಸುವುದಕ್ಕೆ ಸಾಧ್ಯವಿದೆಯೇ? ಊರಿಗೆ ಪಟೇಲರಾಗಿ ವಿವಿಧ ಸ್ಥರಗಳಲ್ಲಿ ಜನಪ್ರತಿನಿಧಿಗಳಾಗಿ ಮೆರೆದಿದ್ದ ನಮ್ಮ ಸಮಾಜ ಇಂತಹ ಸಮಾಜದ ಶೂದ್ರರ ಮುಂದೆ ಕೈಕಟ್ಟಿಕೊಂಡು ನಿಲ್ಲಬೇಕೆ?

ಒಂದು ಕಾಲದಲ್ಲಿ ಗರಡಿಗಳಿಗೆ, ದೇವಸ್ಥಾನಗಳಿಗೆ ಪ್ರವೇಶವೇ ಇಲ್ಲದ ಇಂತಹ ಶೂದ್ರ ಜಾತಿಯವರು ಜನಾರ್ದನ ಪೂಜಾರಿಗೆ ಅಧಿಕಾರ ಸಿಕ್ಕ ಮೇಲೆ ನಮ್ಮ ಗರಡಿಗಳ ಮೇಲೆ, ನಮ್ಮ ದೇವಸ್ಥಾನಗಳ ಮೇಲೆ ಯಾವ ರೀತಿಯ ಪಾರಮ್ಯ ಮೆರೆದು ದೇವಸ್ಥಾನಗಳಿಗೆ ಪ್ರವೇಶವನ್ನು ಗಿಟ್ಟಿಸಿಕೊಂಡಿದ್ದಾರೆ ಎನ್ನುವ ಸತ್ಯವನ್ನು ನಾವು ನಮ್ಮ ಮುಂದಿನ ಪೀಳಿಗೆಗೆ ತಿಳಿಸುವ ಕೆಲಸವನ್ನು ಮಾಡಬೇಕಾಗಿದೆ. ಜನಾರ್ದನ ಪೂಜಾರಿ ಗೆದ್ದ ನಂತರದ ಪರಿಸ್ಥಿತಿ ಅವರ ಶಿಷ್ಯ ಗೆದ್ದ ನಂತರ ನಮಗೆ ಬಾರದಿರಲಿ ಎನ್ನುವುದಾದರೆ ನಮ್ಮ ಸಮಾಜದ ಸೈನಿಕ ಬ್ರಿಜೇಶ್ ಚೌಟ ಗೆಲ್ಲಲೇಬೇಕು.

ಸತ್ಯಜಿತ್ ಸುರತ್ಕಲ್, ಬಿರುವೆರ್ ಕುಡ್ಲದ ಉದಯ ಪೂಜಾರಿ ಬಲ್ಲಾಲ್ ಭಾಗ್ ಇಂತಹವರು ವಿವಿಧ ಸಂಘಟನೆಗಳನ್ನು ಕಟ್ಟಿಕೊಂಡು ನಮ್ಮವರಿಗೆ ಯಾವ ರೀತಿಯಲ್ಲಿ ಮಗ್ಗುಲ ಮುಳ್ಳಾಗಿದ್ದಾರೆ ಎನ್ನುವುದನ್ನು ನಾವು ಮರೆಯಲಾಗುತ್ತದೆಯೇ?

ನಮ್ಮ ಸಮಾಜದ ಒಬ್ಬ ಯುವಕನನ್ನು ಗೆಲ್ಲಿಸುವುದಕ್ಕೆ ಬೇರೆ ಬೇರೆ ರೀತಿಯಲ್ಲಿ ನಮ್ಮ ಸಮಾಜದ ಹಿರಿಯರ ಸೂಚನೆಯಂತೆ ಕೆಲಸ ಮಾಡಲಾಗಿದೆ. ನಮ್ಮ ಅಭ್ಯರ್ಥಿಯಾದ ಚೌಟರಿಗೆ ದೊಡ್ಡ ಮೊತ್ತದ ಹಣದ ನೆರವನ್ನು ಕೂಡ ನೀಡಲಾಗಿದೆ. ಇದು ಸಾಲದು. ನಮ್ಮ ಕೃಷಿ ಕಾರ್ಯದಲ್ಲಿ, ನಮ್ಮ ಮನೆಯ ಕೂಲಿ ಕೆಲಸದಲ್ಲಿ, ನಮ್ಮ ಉದ್ಯಮಗಳಲ್ಲಿ, ನಮ್ಮಲ್ಲಿ ಒಕ್ಕಲು ಇರುವವರನ್ನು ನಮ್ಮ ಪ್ರಭಾವವನ್ನು ಬಳಸಿಕೊಂಡು ಚೌಟರಿಗೆ ಮತದಾನ ಮಾಡಿಸುವ ದೊಡ್ಡ ಜವಾಬ್ದಾರಿಯನ್ನು ನಮ್ಮ ಸಮಾಜದವರು ನಿರ್ವಹಣೆ ಮಾಡಿ, ಶೂದ್ರನೊಬ್ಬ ನಮ್ಮನ್ನು ಆಳದಂತೆ ಎಚ್ಚರಿಕೆಯ ಹೆಜ್ಜೆ ಇಡಬೇಕಾಗಿದೆ.

ನಿಮ್ಮ ವಾರ್ಡ್, ಗ್ರಾಮ ವ್ಯಾಪ್ತಿಯಲ್ಲಿ ಮತವನ್ನು ದುಡ್ಡು ನೀಡಿ ಖರೀದಿಸುವ ಆವಕಾಶ ಸಿಕ್ಕರೆ, ಮತದಾರರಿಗೆ ಆಮಿಷ ಒಡ್ಡಿಯಾದರೂ ಕಾಂಗ್ರೆಸ್ಸಿಗೆ ಬೀಳುವ ಮತವನ್ನು ಬಿಜೆಪಿಗೆ ಹಾಕಿಸುವ ಕೆಲಸ ಮಾಡುವ ಮೂಲಕ ನಮ್ಮ ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿ ತಮ್ಮಲ್ಲಿ ಕಳಕಳಿಯ ವಿನಂತಿಯನ್ನು ಮಾಡುತ್ತಿದ್ದೇವೆ. ಸಮಾಜಕ್ಕೆ ಶಕ್ತಿ ತುಂಬುವ ಕೆಲಸವನ್ನು ನಾವೆಲ್ಲರೂ ಮಾಡಬೇಕಾಗಿ ತಮ್ಮಲ್ಲಿ ಕಳಕಳಿಯ ವಿನಂತಿಯನ್ನು ಮಾಡುತ್ತಿದ್ದೇವೆ ಎಂದು ಕರಪತ್ರದಲ್ಲಿ ಬರೆಯಲಾಗಿದೆ.

ಆದರೆ ಈ ಪತ್ರ ವೈರಲ್ ಆಗುತ್ತಿದ್ದಂತೆ ದ.ಕದ ಬಿಜೆಪಿ ನಾಯಕರು ಎಚ್ಚೆತ್ತುಕೊಂಡಿದ್ದಾರೆ. ಇದು ನಕಲಿ ಎಂದು ಎಂದಿರುವ ಬಿಜೆಪಿ, ಕಾಂಗ್ರೆಸ್ ಅಭ್ಯರ್ಥಿಯ ವಿರುದ್ಧ ಕ್ರಮಕ್ಕೆ ಜಿಲ್ಲಾ ಚುನಾವಣಾಧಿಕಾರಿಗೆ ದೂರು ನೀಡಿದೆ.

ಬಿಜೆಪಿಯ ದೂರಿನಲ್ಲೇನಿದೆ?

ರಿಂದ,
ದೇವಿಪ್ರಸಾದ್ ಎ. ಸಾಮಾನಿ ಸಹಸಂಚಾಲಕರು, ಬಿಜೆಪಿ ಕಾನೂನು ಪ್ರಕೋಷ್ಠ ದಕ್ಷಿಣ ಕನ್ನಡ ಜಿಲ್ಲೆ : 8123452299

ರಿಗೆ,
ಜಿಲ್ಲಾ ಚುನಾವಣಾಧಿಕಾರಿಗಳು 17 ದಕ್ಷಿಣ ಕನ್ನಡ ಲೋಕಸಭಾಕ್ಷೇತ್ರ ಮಂಗಳೂರು.

ವಿಷಯ: ಬಂಟ ಬಿಗ್ರೇಡ್ ಎಂಬ ಹೆಸರಿನಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರವರ ಭಾವಚಿತ್ರ ಮತ್ತು ಆಕ್ಷೇಪಾರ್ಹ ಬರಹಗಳನ್ನು ಮುದ್ರಿಸಿ ಸಾಮಾಜಿಕ ಜಾಲತಾಣ ಹಾಗೂ ಕರಪತ್ರಗಳ ಮೂಲಕ ಪಸರಿಸಿ ಜಾತಿಜಾತಿಗಳ ನಡುವೆ ದ್ವೇಷ ಹುಟ್ಟುವಂತೆ ಮಾಡಿ ಕಾಂಗ್ರೆಸ್ ಅಭ್ಯರ್ಥಿ ದುರ್ಲಾಭ ಪಡೆಯುತ್ತಿರುವ ಬಗ್ಗೆ.

ಮಾನ್ಯರೇ,
ನಾನು ಬಿಜೆಪಿ ಕಾನೂನು ಪ್ರಕೋಷ್ಠದ ದಕ್ಷಿಣ ಕನ್ನಡ ಜಿಲ್ಲೆಯ ಸಹಸಂಚಾಲಕನಾಗಿರುತ್ತೇನೆ. ದಕ್ಷಿಣ ಕನ್ನಡ ಜಿಲ್ಲೆಯ ಲೋಕಸಭಾ ಚುನಾವಣೆಗೆ 2 ದಿನಗಳು ಬಾಕಿ ಇರುವ ಸಮಯದಲ್ಲಿ ಬಂಟ ಬಿಗ್ರೇಡ್ ಎಂಬ ಶೀರ್ಷಿಕೆಯ ಅಡಿಯಲ್ಲಿ ಕರಪತ್ರವನ್ನು ಮುದ್ರಿಸಿ ಸದ್ರಿ ಕರಪತ್ರದಲ್ಲಿ ಬಿಜೆಪಿ ಅಭ್ಯರ್ಥಿ ಕ್ಯಾ. ಬ್ರಿಜೇಶ್ ಚೌಟರವರ ಭಾವಚಿತ್ರ, ಹೆಸರು ಹಾಗೂ ಆಕ್ಷೇಪಾರ್ಹ ಬರಹಗಳನ್ನು ಮುದ್ರಿಸಿ ಸಾಮಾಜಿಕ ಜಾಲತಾಣಗಳ ಮೂಲಕ ಪಸರಿಸಿ ಜಾತಿ ಜಾತಿಗಳ ದ್ವೇಷ ಬರುವಂತೆ ಮಾಡಿ ಅದರ ದುರ್ಲಾಭವನ್ನು ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯು ಪಡೆಯುತ್ತಿದ್ದಾರೆ. ಕರಪತ್ರದಲ್ಲಿರುವ ಬಂಟ ಬ್ರಿಗೇಡ್ ಎಂಬ ಯಾವುದೇ ಸಂಸ್ಥೆಯು ಅಸ್ತಿತ್ವದಲ್ಲಿರುವುದಿಲ್ಲ, ಹಾಗೂ ಯಾವುದೇ ಕಾರ್ಯಚಟುವಟಿಕೆಯನ್ನು ಮಾಡುವುದು ಕಂಡು ಬರುವುದಿಲ್ಲ.

ಚುನಾವಣೆಗೆ 2 ದಿನಗಳು ಬಾಕಿಯಿರುವ ಸಂದರ್ಭದಲ್ಲಿ ಮತದಾರರಿಗೆ ಪ್ರಭಾವ ಬೀರುವ ಉದ್ದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯು ಈ ರೀತಿಯಾದ ವಿಚಾರಗಳನ್ನು ಪಸರಿಸಿ ದುರ್ಲಾಭ ಪಡೆಯುತ್ತಿದ್ದು ಇದರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಾಗಿ ಈ ಮೂಲಕ ವಿನಂತಿಸಿಕೊಳ್ಳುತ್ತೇನೆ.

Leave A Reply

Your email address will not be published.