Prajwal Revanna: ‘ಪೆನ್‌ಡ್ರೈವ್’ ಬಲೆಗೆ ಸಿಲುಕಿದ ಪ್ರಜ್ವಲ್ ರೇವಣ್ಣ – ಮತ್ತೊಂದು ಶಾಕ್ ಕೊಟ್ಟ ಸಿಎಂ ಸಿದ್ದರಾಮಯ್ಯ !!
Prajwal Revanna: ಹಾಸನ ಸಂಸದ ಪ್ರಜ್ವಲ್ ರೇವಣ್ಣ (Prajwal Revanna) ಇದೀಗ ರಾಜ್ಯದಲ್ಲಿ ಬೇರೊಂದು ವಿಚಾರವಾಗಿ ಸುದ್ದಿಯಾಗುತ್ತಿದ್ದಾರೆ. ಹೌದು, ಮಾಜಿ ಪ್ರಧಾನಿ ದೇವೇಗೌಡರ ಮೊಮ್ಮಗ ಲೈಂಗಿಕ ದೌರ್ಜನ್ಯ ವಿಚಾರದಲ್ಲಿ ‘ಪೆನ್‌ಡ್ರೈವ್’ ಸುಳಿಯಲ್ಲಿ ಸಿಲುಕಿದ್ದಾರೆ. ಈ ವಿಚಾರವಾಗಿಯೇ ಅಘಾತಗೊಂಡಿರುವ ಪ್ರಜ್ವಲ್ ಗೆ ಸಿಎಂ ಸಿದ್ದರಾಮಯ್ಯನವರು(CM Siddaramaiah) ಇದೀಗ ಮತ್ತೊಂದು ಶಾಕ್ ನೀಡಿದ್ದಾರೆ.
ಹೌದು, ಪ್ರಜ್ವಲ್ ರೇವಣ್ಣ ವಿರುದ್ಧ ಕೇಳಿಬಂದಿರುವ ಲೈಂಗಿಕ ದೌರ್ಜನ್ಯ ಆರೋಪದ ವೀಡಿಯೋ ಕುರಿತ ತನಿಖೆಗೆ ವಿಶೇಶ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯನವರು ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ. ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಅಧ್ಯಕ್ಷರು ಸರ್ಕಾರಕ್ಕೆ ಪತ್ರ ಬರೆದಿದ್ದರು. ಅವರ ಮನವಿಗೆ ಸ್ಪಂದಿಸಿ ಈ ನಿರ್ಣಯ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.
ಪ್ರಜ್ವಲ್ ರೇವಣ್ಣ ಅವರ ಅಶ್ಲೀಲ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ತೀರ್ಮಾನಿಸಿದೆ.
ಹಾಸನ ಜಿಲ್ಲೆಯಲ್ಲಿ ಅಶ್ಲೀಲ ವೀಡಿಯೋ ತುಣುಕುಗಳು ಹರಿದಾಡುತ್ತಿದ್ದು, ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದೆ.
ಈ ಹಿನ್ನೆಲೆಯಲ್ಲಿ ಎಸ್.ಐ.ಟಿ ತನಿಖೆ ನಡೆಸುವಂತೆ ಮಹಿಳಾ…— Siddaramaiah (@siddaramaiah) April 27, 2024
ಅಂದಹಾಗೆ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಗುರುವಾರ ಪತ್ರ ಬರೆದು, ಹಾಸನ ಜಿಲ್ಲೆಯ ಪ್ರಭಾವಿ ರಾಜಕಾರಣಿಯೊಬ್ಬ ನೂರಾರು ಮಹಿಳೆಯರ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿ, ಅದನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡು ಬೆದರಿಕೆ ಹಾಕುತ್ತಿರುವ ಆರೋಪದ ಬಗ್ಗೆ ತನಿಖೆ ನಡೆಸಲು ಎಸ್‌ಐಟಿ ರಚಿಸುವಂತೆ ಶಿಫಾರಸು ಮಾಡಿದ್ದರು.
BJP-JDS ಗೆ ಹೊಡೆತ
ಬಿಜೆಪಿ ಮತ್ತು ಜೆಡಿಎಸ್(BJP-JDS) ನಡುವೆ ರಾಜ್ಯದಲ್ಲಿ ಮೈತ್ರಿ ಆಗಿದ್ದು, ಲೋಕಸಭೆ ಚುನಾವಣೆಯ ಮೂಲಕ ಇಬ್ಬರೂ ಒಟ್ಟಿಗೆ ಚುನಾವಣೆ ಎದುರಿಸುತ್ತಿದ್ದಾರೆ. ಪರಿಸ್ಥಿತಿ ಹೀಗಿದ್ದಾಗ ಜೆಡಿಎಸ್‌ನ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ್ದು ಎಂದು ಆರೋಪ ಮಾಡಲಾಗುತ್ತಿರುವ ಖಾಸಗಿ ವಿಡಿಯೋಗಳು ಹರಿದಾಡುತ್ತಿರುವುದು ಸಂಚಲನ ಸೃಷ್ಟಿ ಮಾಡಿದೆ.