PM Modi: ಮೋದಿಗೆ 6 ವರ್ಷ ಚುನಾವಣೆ ನಿಷೇಧ ಕೋರಿ ಸಲ್ಲಿಸಿದ್ದ ಅರ್ಜಿ ವಜಾ !!
PM Modi: ಪ್ರಧಾನಿ ಮೋದಿ(PM Modi)ಯವರನ್ನು 6 ವರ್ಷ ಚುನಾವಣೆಯಿಂದ ನಿಷೇಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
ಹೌದು, ಪ್ರಧಾನಿ ನರೇಂದ್ರ ಮೋದಿ(Narendra Modi) ಚುನಾವಣಾ ಪ್ರಚಾರ ಕಾರ್ಯಕ್ರಮದಲ್ಲಿ ನೀತಿ ಸಂಹಿತೆ ಉಲ್ಲಂಘನೆ(Code of conduct) ಮಾಡಿದ್ದಾರೆ. ಹೀಗಾಗಿ ಅವರನ್ನು ಚುನಾವಣೆಯಿಂದ 6 ವರ್ಷ ಅನರ್ಹಗೊಳಿಸಬೇಕಂದು ಮನವಿ ಮಾಡಿ ಸಲ್ಲಿಸಲಾಗಿದ್ದ ಅರ್ಜಿಯನ್ನು ದಿಲ್ಲಿ ಕೋರ್ಟ್ ವಜಾ ಮಾಡಿದೆ.
ಅಷ್ಟಕ್ಕೂ ಆಗಿದ್ದೇನು?
ವಕೀಲ ಆನಂದ್ ಎಸ್ ಜೊಂಧಳೆ(Anand S Jondhale) ಅವರು ಉತ್ತರಪ್ರದೇಶದ ಪಿಲಿಬಿತ್‌ನಲ್ಲಿ ಏ.6ರಂದು ನಡೆದ ಚುನಾವಣಾ ರ್ಯಾಲಿಯಲ್ಲಿ ಪ್ರಧಾನಿ ಮೋದಿ ಸಿಖ್ ಮತ್ತು ಹಿಂದೂ ಭಕ್ತರ ಭಕ್ತ ಬಗ್ಗೆ ಉಲ್ಲೇಖಸಿದ್ದರು ಆ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ್ದರು ಎಂದು ಅರ್ಜಿಯಲ್ಲಿ ತಿಳಿಸಿದ್ದರು.
ಅಲ್ಲದೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 153 ಎ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲು ಮತ್ತು ಪ್ರಜಾಪ್ರತಿನಿಧಿ ಕಾಯ್ದೆ 1951ರ ಅಡಿಯಲ್ಲಿ ಆರು ವರ್ಷಗಳ ಕಾಲ ಚುನಾವಣೆಯಿಂದ ಅನರ್ಹಗೊಳಿಸುವಂತೆ ಚುನಾವಣೆ ಆಯೋಗಕ್ಕೆ ನಿರ್ದೇಶನ ನೀಡಲು ಮನವಿ ಮಾಡಲಾಗಿತ್ತು
ನ್ಯಾಯಾಲಯ ಹೇಳಿದ್ದೇನು?
ಅರ್ಜಿ ವಿಚಾರಣೆ ನಡೆಸಿದ ನ್ಯಾ.ಸಚಿನ್ ದತ್ತಾ ನೇತೃತ್ವದ ಪೀಠ ಅರ್ಜಿದಾರರು ನೀತಿ ಸಂಹಿತೆಯ ಉಲ್ಲಂಘನೆಯಾಗಿದೆ ಎಂದು ಊಹಿಸಿರುವುದರಿಂದ ಅರ್ಜಿಯನ್ನು ಸಂಪೂರ್ಣವಾಗಿ ತಪ್ಪಾಗಿ ಗ್ರಹಿಸಲಾಗಿದೆ ಎಂದು ಗಮನಿಸಿ ಯಾವುದೇ ದೂರಿನ ಬಗ್ಗೆ ನಿರ್ದಿಷ್ಟ ಕ್ರಮ ತೆಗೆದುಕೊಳ್ಳುವಂತೆ ಆಯೋಗಕ್ಕೆ ಸೂಚಿಸಲು ಸಾಧ್ಯವಿಲ್ಲ ಎಂದರು.