Home News Puttur: ಗ್ಯಾಸ್‌ ಏಜೆನ್ಸಿಯ ಉದ್ಯೋಗಿ ನೇಣಿಗೆ ಶರಣು

Puttur: ಗ್ಯಾಸ್‌ ಏಜೆನ್ಸಿಯ ಉದ್ಯೋಗಿ ನೇಣಿಗೆ ಶರಣು

Puttur

Hindu neighbor gifts plot of land

Hindu neighbour gifts land to Muslim journalist

Puttur: ಖಾಸಗಿ ಗ್ಯಾಸ್‌ ಕಂಪನಿಯಲ್ಲಿ ಡೆಲಿವರಿ ಬಾಯ್‌ ಆಗಿ ದುಡಿಯುತ್ತಿದ್ದ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆಯೊಂದು ಪುತ್ತೂರು ತಾಲೂಕಿನ ಬನ್ನೂರು ಎಂಬಲ್ಲಿ ನಡೆದಿದೆ. ಈ ಘಟನೆ ಭಾನುವಾರ ನಡೆದಿದ್ದು, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಇದನ್ನೂ ಓದಿ:  KCET 2024 : ಸಿಇಟಿ ಕೀ ಉತ್ತರಗಳನ್ನು ನೋಡುವುದು ಮತ್ತು ಅದರ ಮೇಲೆ ಆಕ್ಷೇಪಣೆ ಸಲ್ಲಿಸುವುದು ಹೇಗೆ? ಇಲ್ಲಿದೆ ವಿಧಾನ !

ಬನ್ನೂರಿನ ಮೇಲ್ಮಜಲು ನಿವಾಸಿ ಸೀತಾರಾಮ ಶೆಟ್ಟಿ (55ವರ್ಷ) ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡವರು.

ಸುಳ್ಯ ಭಾಗದಲ್ಲಿ ಇವರು ಸಿಲಿಂಡರ್‌ ಪೂರೈಕೆ ಮಾಡುತ್ತಿದ್ದು, ಖಾಸಗಿ ಗ್ಯಾಸ್‌ ಕಂಪನಿಯ ನೌಕರರಾಗಿದ್ದು, ಹಲವರು ವರ್ಷಗಳಿಂದ ಅಲ್ಲಿ ಕೆಲಸ ಮಾಡುತ್ತಿದ್ದರು. ಭಾನುವಾರಂದು ತಮ್ಮ ಮನೆಯ ಒಳಗಡೆ ಫ್ಯಾನ್‌ಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿದ್ದಾರೆ.

ಇದನ್ನೂ ಓದಿ:  UGC-NET: ಯುಜಿಸಿ-ನೆಟ್ ಪರೀಕ್ಷೆ ಜೂ.18 ಕ್ಕೆ

ಕೆ.ಎಸ್‌.ಹೆಗ್ಡೆ ಆಸ್ಪತ್ರೆಯಲ್ಲಿ ಪೋಸ್ಟ್‌ ಮಾರ್ಟಂ ಮಾಡಲಾಗಿದ್ದು, ಈ ಘಟನೆ ಸಂಬಂಧ ಪುತ್ತೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.