Hassan pen drive case: ಪ್ರಜ್ವಲ್‌ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ; ಎಸ್‌ಐಟಿಗೆ 18 ಸಿಬ್ಬಂದಿ ನೇಮಕ, ಅಶ್ಲೀಲ ವೀಡಿಯೋದಲ್ಲಿ ಇರುವ ಮಹಿಳೆಯರು ಯಾರು?

Hassan pen drive case: ಹಾಸನ ಸಂಸದ ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವೀಡಿಯೋ ಕುರಿತ ಪ್ರಕರಣವು ದಿನದಿಂದ ದಿನಕ್ಕೆ ರೋಚಕ ತಿರುವು ಪಡೆದುಕೊಳ್ಳುತ್ತಿದೆ. ಪೆನ್‌ಡ್ರೈವ್‌ ಪ್ರಕರಣ ಕುರಿತು ರಚಿಸಲಾಗಿರುವ ವಿಶೇಷ ತನಿಖಾ ತಂಡಕ್ಕೆ 18 ಸಿಬ್ಬಂದಿಯನ್ನು ನೇಮಕ ಮಾಡಲಾಗಿದೆ. ಸಿಬ್ಬಂದಿಯಲ್ಲಿ ಹೆಚ್ಚಿನ ಮಹಿಳಾ ಸಿಬ್ಬಂದಿಯಿದ್ದು, ವಿಡಿಯೋದಲ್ಲಿರುವ ಮಹಿಳೆಯರ ತನಿಖೆಗೆ ವಿಶೇಷ ಪ್ರಯತ್ನ ಮಾಡಲಾಗುತ್ತಿದೆ ಎಂದು ವರದಿಯಾಗಿದೆ.

ಇದನ್ನೂ ಓದಿ:  Hassan pen drive case: ಪ್ರಜ್ವಲ್‌ ರೇವಣ್ಣ ಅವರ ಅಶ್ಲೀಲ ವೀಡಿಯೋ ಪ್ರಕರಣ; ಮಾಜಿ ಕಾರು ಚಾಲಕನಿಂದ ಸ್ಫೋಟಕ ಹೇಳಿಕೆ

ವಿಡಿಯೋ ಪರಿಶೀಲನೆಗೆ ಪ್ರತ್ಯೇಕ ಟೀಂ ಮಾಡಲಾಗಿದೆ. ಪೆನ್‌ಡ್ರೈವ್‌ನಲ್ಲಿರುವ ಅಷ್ಟೂ ವೀಡಿಯೋ ಪರಿಶೀಲನೆ ಮಾಡಿ ಎಸ್‌ಐಟಿ ಮುಖ್ಯಸ್ಥರಿಗೆ ತಂಡ ವರದಿ ಕೊಡಲಿದೆ. ಪ್ರಾಥಮಿಕ ವರದಿಗಳ ಪ್ರಕಾರ, ವೀಡಿಯೋದಲ್ಲಿರುವ ಮಹಿಳೆಯರಲ್ಲಿ ಬಹುತೇಕರು ಸರಕಾರಿ ಅಧಿಕಾರಿಗಳು ಎಂಬ ಅಂಶ ಬೆಳಕಿಗೆ ಬಂದಿದೆ.

ಇದನ್ನೂ ಓದಿ:  Amith Shah: ಪ್ರಜ್ವಲ್‌ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣ; ಕೇಂದ್ರ ಸಚಿವ ಅಮಿತ್‌ ಶಾ ಮೊದಲ ಪ್ರತಿಕ್ರಿಯೆ

ಪಿಎಸ್‌ಐ, ಎಇ ಹೀಗೆ ವೀಡಿಯೋದಲ್ಲಿರುವ ಸುಮಾರು ಮಹಿಳೆಯರು ಸರಕಾರಿ ಮಹಿಳಾ ಅಧಿಕಾರಿಗಳು ಎಂಬ ಮಾಹಿತಿ ವರದಿಯಾಗಿದೆ. ಕೆಲಸ ಕೊಡಿಸುವ, ವರ್ಗಾವಣೆ ವಿಚಾರದಲ್ಲಿ ಈ ದಂಧೆ ನಡೆದಿದೆಯೇ ಎಂಬ ಅನುಮಾನ ವ್ಯಕ್ತವಾಗಿದೆ.

Leave A Reply

Your email address will not be published.