Narendra Modi Election: ವಾರಣಾಸಿಯಲ್ಲಿ ಮೋದಿ ವಿರುದ್ಧ ಕಾಮಿಡಿಯನ್ ಪೈಪೋಟಿ : ದೇಶದಲ್ಲಿ ಹಾಟ್ ಟಾಪಿಕ್ ಆಗಿ ಶ್ಯಾಮ್ ರಂಗೀಲಾ
Narendra Modi Election: ಪ್ರಧಾನಿ ನರೇಂದ್ರ ಮೋದಿ ಅವರನ್ನು ಅನುಕರಿಸುವ ಮೂಲಕ ಜನಪ್ರಿಯರಾದ ಖ್ಯಾತ ಹಾಸ್ಯನಟ ಶ್ಯಾಮ್ ರಂಗೀಲಾ ಅವರು ಇದೀಗ ಲೋಕಸಭೆ ಚುನಾವಣೆಯಲ್ಲಿ ಮೋದಿ ಅವರ ವಿರುದ್ಧವೇ ಸ್ಪರ್ಧಿಸಲು ಸಿದ್ಧರಾಗಿದ್ದಾರೆ. ವಾರಾಣಸಿಯಲ್ಲಿ ಮೋದಿ ವಿರುದ್ಧ ಸ್ಪರ್ಧಿಸುತ್ತಿದ್ದು. ಸ್ವತಂತ್ರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯುತ್ತಿದ್ದೇನೆ ಎಂದು ಇತ್ತೀಚೆಗೆ ಟ್ವಿಟರ್‌ನಲ್ಲಿ ಪ್ರಕಟಿಸಿದ್ದಾರೆ.
ಇದನ್ನೂ ಓದಿ: women skin care: ಹುಡುಗಿಯರನ್ನು ಹೆಚ್ಚು ಕಾಡುವ ತ್ವಚೆಯ ಸಮಸ್ಯೆಗಳಿವು : ಈ ಸಮಸ್ಯೆಗಳಿಗೆ ಪರಿಹಾರ ಇಲ್ಲಿ ತಿಳಿಯಿರಿ
ಲೋಕಸಭಾ ಚುನಾವಣೆಯಲ್ಲಿ ವಾರಣಾಸಿಯಿಂದ ಸ್ಪರ್ಧಿಸುವುದಾಗಿ ಘೋಷಿಸಿದ ನಂತರ -ನಿಮ್ಮೆಲ್ಲರಿಂದ ನನಗೆ ಸಿಗುತ್ತಿರುವ ಪ್ರೀತಿಯನ್ನು ನೋಡಿ ನನಗೆ ಸಂತೋಷವಾಗಿದೆ. ವಾರಣಾಸಿ -ತಲುಪಿದ ನಂತರ, ನನ್ನ ನಾಮನಿರ್ದೇಶನ ಮತ್ತು ಚುನಾವಣೆಗೆ ಸ್ಪರ್ಧಿಸುವ ಬಗ್ಗೆ ನನ್ನ ಅಭಿಪ್ರಾಯಗಳನ್ನು ವೀಡಿಯೊ ಮೂಲಕ ಶೀಘ್ರದಲ್ಲೇ ತಿಳಿಸುತ್ತೇನೆ, ಎಂದು ಅವರು ಹೇಳಿದರು. ಈ ಹಿಂದೆ ಮೋದಿ ಪರ ಪ್ರಚಾರ ಮಾಡಿದ್ದೆ, ಆದರೆ ಈಗ ಪರಿಸ್ಥಿತಿ ಬದಲಾಗಿದೆ ಎಂದಿದ್ದಾರೆ.
ಮಾಧ್ಯಮಗಳೊಂದಿಗೆ ಶ್ಯಾಮ್ ರಂಗೀಲಾ ಹೇಳಿದ್ದು :
ನಾನು 2014ರಲ್ಲಿ ಪ್ರಧಾನಿ ನರೇಂದ್ರ
ಮೋದಿ ಅವರ ಅನುಯಾಯಿಯಾಗಿದ್ದೆ. ಅವರಿಗೆ ಬೆಂಬಲವಾಗಿ ಹಲವು ವಿಡಿಯೋಗಳನ್ನು ಶೇರ್ ಮಾಡಿದ್ದೇನೆ. ನಾನು ರಾಹುಲ್ ಗಾಂಧಿ ಮತ್ತು ಅರವಿಂದ್ ಕೇಜಿವಾಲ್ ವಿರುದ್ಧವೂ ವೀಡಿಯೊಗಳನ್ನು ಮಾಡಿದ್ದೇನೆ. ಆ ವೀಡಿಯೋಗಳನ್ನು ನೋಡಿದ ಯಾರಾದರೂ ನಾನು ಮುಂದಿನ 70 ವರ್ಷಗಳ ಕಾಲ ಭಾರತೀಯ ಜನತಾ ಪಕ್ಷಕ್ಕೆ ಮಾತ್ರ ಮತ ಹಾಕುತ್ತೇನೆ ಎಂದು ಭಾವಿಸುತ್ತಾರೆ. ಆದರೆ ಕಳೆದ 10 ವರ್ಷಗಳಲ್ಲಿ ಪರಿಸ್ಥಿತಿ ಬದಲಾಗಿದೆ. ಈಗ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ವಿರುದ್ಧ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತೇನೆ. ಸೂರತ್ ಮತ್ತು ಇಂದೋರ್‌ಗಿಂತ ಭಿನ್ನವಾಗಿ, ವಾರಣಾಸಿಯಲ್ಲಿ ಮತ ಚಲಾಯಿಸುವ ಜನರಿಗೆ ನಾನು ಮತ್ತೊಂದು ಆಯ್ಕೆಯಾಗುತ್ತೇನೆ. ಈ ವಾರ ವಾರಣಾಸಿಗೆ ತೆರಳಿ ಪ್ರಧಾನಿ ನರೇಂದ್ರ ಮೋದಿ -ವಿರುದ್ಧ ನಾಮಪತ್ರ ಸಲ್ಲಿಸಲಿದ್ದೇನೆ.
ಇಂದೋರ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕೊನೆಯ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರಿದ್ದಾರೆ. ಈ ಹಿನ್ನಲೆಯಲ್ಲಿ ಶ್ಯಾಮ್ ರಂಗೀಲಾ ಸ್ಪರ್ಧೆ ಭಾರೀ ಚರ್ಚೆಗೆ ಗ್ರಾಸವಾಗಿದೆ.