Congress : ಅಮೇಠಿಯಿಂದ ಕಿಶೋರಿ ಲಾಲ್ ಶರ್ಮಾ, ರಾಯ್‌ಬರೇಲಿಯಿಂದ ರಾಹುಲ್ ಗಾಂಧಿ ಕಣಕ್ಕೆ !!
Congress: ಭಾರೀ ಕುತೂಹಲಕ್ಕೆ ಕಾರಣವಾಗಿದ್ದ ರಾಯ್ ಬರೇಲಿ ಮತ್ತು ಅಮೇಠಿ ಕ್ಷೇತ್ರಗಳಿಗೆ ಕಾಂಗ್ರೆಸ್ ಕೊನೆಗೂ ತನ್ನ ಅಭ್ಯರ್ಥಿಗಳನ್ನು ಘೋಷಿಸಿದೆ. ರಾಯ್ ಬರೇಲಿ(Rae Bareli) ಕ್ಷೇತ್ರದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ(Rahul Gandhi) ಕಣಕ್ಕಿಳಿಯಲಿದ್ದು, ಅಮೇಠಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ(Sonia Gandhi) ಆಪ್ತ ಕಿಶೋರಿ ಲಾಲ್ ಶರ್ಮಾ(Kishori Lal Sharma) ಅವರನ್ನು ಕಾಂಗ್ರೆಸ್(Congress) ಕಣಕ್ಕಿಳಿಸಿದೆ.
ಮೇ 17ರಂದು ನಡೆಯುವ ಐದನೇ ಹಂತದ ಮತದಾನದ ಹಿನ್ನೆಲೆಯಲ್ಲಿ ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದ್ದು, ಕೊನೆಯ ಹಂತದಲ್ಲಿ ಕಾಂಗ್ರೆಸ್ ಬಾಕಿ ಇರಿಸಿದ್ದ ಅಮೇಠಿ ಮತ್ತು ರಾಯ್ ಬರೇಲಿ ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕಾಂಗ್ರೆಸ್ ತನ್ನ ಅಧಿಕೃತ ಎಕ್ಸ್ ಖಾತೆಯಲ್ಲಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಮಾಡಿದೆ.
ಇದನ್ನೂ ಓದಿ: Pendrive Case: ಅಶ್ಲೀಲ ವಿಡಿಯೋ ಡ್ರೈವರ್ ಕಾರ್ತಿಕ್ ಗೆ ದೊರಕಿದ್ದು ಹೇಗೆ?
ಅಂದಹಾಗೆ ಗಾಂಧಿ ಕುಟುಂಬದ ಭದ್ರಕೋಟೆಯಾಗಿದ್ದ ಎರಡು ಕ್ಷೇತ್ರಗಳಿಗೆ ಮೇ 20ರಂದು ಮತದಾನ ನಡೆಯಲಿದೆ. ಈ ವರ್ಷದ ಆರಂಭದಲ್ಲಿ ಸೋನಿಯಾ ಗಾಂಧಿ ಅವರು ರಾಜ್ಯಸಭೆಯ ಸದಸ್ಯರಾದ ನಂತರ ರಾಯ್ ಬರೇಲಿ ಸ್ಥಾನವನ್ನು ತೆರವು ಮಾಡಲಾಗಿತ್ತು. ರಾಹುಲ್ ಗಾಂಧಿ ಈಗಾಗಲೇ ಕೇರಳದ ವಯನಾಡಿನಲ್ಲಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸುತ್ತಿದ್ದಾರೆ.
ಅಂದಹಾಗೆ ದಿನೇಶ್ ಪ್ರತಾಪ್(Dinesh Pratap) ಕಳೆದ ಬಾರೀ ಸೋನಿಯಾ ಗಾಂದಿ ವಿರುದ್ಧ ಸ್ಪರ್ಧಿಸಿ ಸೋಲುಂಡಿದ್ದರು. ಅಮೇಠಿಯಲ್ಲಿ 2004, 2009, 2014ರವರೆಗೆ ರಾಹುಲ್ ಗಾಂಧಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದರೆ 2019ರಲ್ಲಿ ಬಿಜೆಪಿ ಸ್ಮೃತಿ ಇರಾನಿ ವಿರುದ್ಧ ಸೋಲನ್ನು ಅನುಭವಿಸಿದ್ದರು. ಈ ಬಾರಿ ಗಾಂಧಿ ಕುಟುಂಬದ ಆಪ್ತ ಕಿಶೋರಿ ಲಾಲ್ ಅವರನ್ನು ಅಮೇಠಿಯಲ್ಲಿ ಬಿಜೆಪಿಯ ಸ್ಮೃತಿ ಇರಾನಿ(Smrithi Irani) ವಿರುದ್ಧ ಕಣಕ್ಕಿಳಿಸಿ ಪಕ್ಷ ಅದೃಷ್ಟ ಪರೀಕ್ಷೆಗೆ ಮುಂದಾಗಿದೆ.