Prajwal Revanna: ಸಂಸದನ ನಡೆಯಲ್ಲಿ ಇನ್ನಷ್ಟು ಟ್ವಿಸ್ಟ್! ಅಷ್ಟಕ್ಕೂ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ?

Prajwal Revanna: ಹಾಸನದ ಸಂಸದ ಪ್ರಜ್ವಲ್‌ ರೇವಣ್ಣ ಅಶ್ಲೀಲ ಪೆನ್‌ಡ್ರೈವ್‌ ಪ್ರಕರಣದ ಆರೋಪಿ ಯಾಗಿದ್ದು, ಈತನ ಪತ್ತೆ ಗೆ ವಿಶೇಷ ತನಿಖಾ ತಂಡ (ಎಸ್‌ಐಟಿ) ನೇಮಿಸಲಾಗಿದ್ದರು ಸಹ ಆತನನ್ನು ವಶ ಪಡಿಸಿಕೊಳ್ಳುವುದು ದೊಡ್ಡ ಸವಾಲಾಗಿದೆ.

ಇದನ್ನೂ ಓದಿ: Vasishnavi Gowda: ಚಿತ್ರೀಕರಣದ ವೇಳೆ ನಟಿ ವೈಷ್ಣವಿ ಗೌಡರಿಂದ ಮಹಾ ಎಡವಟ್ಟು; ಬಿತ್ತು ಭಾರೀ ಟ್ರಾಫಿಕ್‌ ಫೈನ್‌

ಪ್ರಜ್ವಲ್ ಪ್ರಕರಣವು ಎಸ್‌ಐಟಿ ಕೈಗೆ ಬರುವ ಮುನ್ನವೇ ಪ್ರಜ್ವಲ್‌ (Prajwal Revanna) ಜರ್ಮನಿಗೆ ಹಾರಿದ್ದರು. ಈಗಾಗಲೇ ಎಸ್‌ಐಟಿ ಅಧಿಕಾರಿಗಳು ಪ್ರಜ್ವಲ್‌ ವಿದೇಶದಲ್ಲಿ ಇರುವ ಮಾಹಿತಿ ಮೇರೆಗೆ ಆತನಿರುವ ಪ್ರದೇಶವನ್ನು ಪತ್ತೆ ಹಚ್ಚಲು ಕೈ ಮೀರಿ ಪ್ರಯತ್ನಿಸುತ್ತಿದ್ದಾರೆ. ಸದ್ಯ ಅವರು ಯಾವ ದೇಶದಲ್ಲಿ ಇದ್ದಾರೆ ಎಂಬುದನ್ನು ನಿಖರವಾಗಿ ಪತ್ತೆ ಹಚ್ಚಲು ಎಸ್‌ಐಟಿಗೆ ಸಾಧ್ಯವಾಗುತ್ತಿಲ್ಲ. ಮತ್ತೊಂದೆಡೆ ಪ್ರಜ್ವಲ್‌ ಮೇ 15ರಂದು ಜರ್ಮನಿಯಿಂದ ಬೆಂಗಳೂರಿಗೆ ಬರುವ ವಿಮಾನದಲ್ಲಿ ಟಿಕೆಟ್‌ ಕಾಯ್ದಿರಿಸಿದ್ದರು ಎನ್ನಲಾಗಿದೆ. ಈಗ ದಿಢೀರ್‌ ಟಿಕೆಟ್‌ ರದ್ದುಗೊಳಿಸಿದ್ದಾರೆ. ಈ ಹಿಂದೆ ಮೇ 3ರ ವಿಮಾನದ ಟಿಕೆಟನ್ನು ಮೇ 15ಕ್ಕೆ ಮುಂದೂಡಿದ್ದರು. ಈಗ ಟಿಕೆಟ್‌ ದಿಢೀರ್‌ ರದ್ದುಗೊಳಿಸಿದ್ದಾರೆ. ಸದ್ಯಕ್ಕೆ ಎಸ್‌ಐಟಿಯನ್ನು ದಿಕ್ಕು ತಪ್ಪಿಸಲು ಪ್ರಜ್ವಲ್‌ ಈ ರೀತಿ ಮಾಡುತ್ತಿದ್ದಾರೆಯೇ ಎಂಬುದು ತಿಳಿದು ಬರಬೇಕಿದೆ.

ಇದನ್ನೂ ಓದಿ: Karnataka BJP: ರಾಜ್ಯ ಬಿಜೆಪಿಗೆ ಹೆಚ್ಚಿದ ಆತಂಕ – ಕರ್ನಾಟಕದಲ್ಲಿ ಬಿಜೆಪಿ ಗೆಲ್ಲೋದು ಖಾಲಿ ಇಷ್ಟೇ ಸೀಟಾ?!

ಈಗಾಗ್ಲೇ ಬ್ಲೂ ಕಾರ್ನರ್‌ ನೋಟಿಸ್‌ ಜಾರಿಗೊಳಿಸಿದ್ದರೂ ಪ್ರಜ್ವಲ್‌ ವಿಮಾನ, ಹಡಗಿನಲ್ಲಿ ಪ್ರಯಾಣಿಸಿದ ಹಿನ್ನೆಲೆಯಲ್ಲಿ ಅವರ ಬಗ್ಗೆ ಸಣ್ಣ ಸುಳಿವು ಕೂಡ ಎಸ್‌ಐಟಿಗೆ ಸಿಕ್ಕಿಲ್ಲ. ವಿದೇಶದಲ್ಲಿ ಇರುವುದರಿಂದ ಅವರನ್ನು ಪತ್ತೆ ಹಚ್ಚಿ ಬಂಧಿಸುವುದೇ ಎಸ್‌ಐಟಿಗೆ ಸವಾಲಾಗಿದೆ. ಎಲ್ಲಾ ಬೆಳವಣಿಗೆಯನ್ನು ಗಮನಿಸಿದಾಗ ಪ್ರಜ್ವಲ್‌ ಸದ್ಯ ಬೆಂಗಳೂರಿಗೆ ವಾಪಸಾಗುವುದು ಅನುಮಾನ ಎನ್ನಲಾಗುತ್ತಿದೆ.

Leave A Reply

Your email address will not be published.