Karnataka SSLC Exam-2: ಕರ್ನಾಟಕ ʼSSLC ಪರೀಕ್ಷೆ-2′ ರ ಪರಿಷ್ಕೃತ ವೇಳಾಪಟ್ಟಿ ಪ್ರಕಟ

Karnataka SSLC Exam-2: ಎಸ್‌ಎಸ್‌ಎಲ್‌ಸಿ-2 ಪರೀಕ್ಷೆಯ ಪರಿಷ್ಕೃತ ವೇಳಾಪಟ್ಟಿ ಶನಿವಾರ ಪ್ರಕಟವಾಗಿದೆ. ಜೂನ್ 14 ರಿಂದ ಜೂನ್‌ 26 ರವರೆಗೆ ಪರೀಕ್ಷೆ ನಡೆಯಲಿದೆ. ಈ ಕುರಿತು ಕರ್ನಾಟಕ ಶಾಲಾ ಪರೀಕ್ಷೆ ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ.

ಎಲ್ಲಾ ಪ್ರೌಢಶಾಲಾ ಮುಖ್ಯ ಶಿಕ್ಷಕರು ಎಸ್‌ಎಸ್‌ಎಲ್‌ಸಿ ಪರೀಕ್ಷೆ-2 ರ ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣ www.kseab.karnataka.gov.in ದಿಂದ ಪಡೆದು ತಮ್ಮ ಶಾಲಾ ಸೂಚನಾ ಫಲಕದಲ್ಲಿ ಪ್ರಕಟಿಸಲು ಹಾಗೂ ಎಲ್ಲಾ ವಿದ್ಯಾರ್ಥಿಗಳಿಗೆ ಮಾಹಿತಿ ನೀಡುವ ಕುರಿತು ಜಿಲ್ಲಾ ಉಪನಿರ್ದೇಶಕರು (ಆಡಳಿತ) ರವರು ಕ್ರಮವಹಿಸಲು ತಿಳಿಸಿದೆ.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್‌ ಕ್ಲಿಕ್‌ ಮಾಡಿ

ಇದನ್ನೂ ಓದಿ: ಆಹಾರದ ಮೊದಲು ಅಥವಾ ನಂತರ ಚಹಾ-ಕಾಫಿ ಕುಡಿಯುವುದು ಆರೋಗ್ಯಕ್ಕೆ ಅಪಾಯಕಾರಿ ; ಐಸಿಎಂಆರ್ ಎಚ್ಚರಿಕೆ

Leave A Reply

Your email address will not be published.