Home News HD Kumaraswamy: ವಿಧಾನ ಪರಿಷತ್ ಚುನಾವಣೆಯಲ್ಲೂ ಹಣ, ಗಿಫ್ಟ್ ಹಂಚುತ್ತಿದೆ ಕಾಂಗ್ರೆಸ್: ಹೆಚ್.ಡಿ.ಕುಮಾರಸ್ವಾಮಿ

HD Kumaraswamy: ವಿಧಾನ ಪರಿಷತ್ ಚುನಾವಣೆಯಲ್ಲೂ ಹಣ, ಗಿಫ್ಟ್ ಹಂಚುತ್ತಿದೆ ಕಾಂಗ್ರೆಸ್: ಹೆಚ್.ಡಿ.ಕುಮಾರಸ್ವಾಮಿ

HD Kumaraswamy

Hindu neighbor gifts plot of land

Hindu neighbour gifts land to Muslim journalist

HD Kumaraswamy: ವಿಧಾನಸಭೆ ಮತ್ತು ಲೋಕಸಭೆ ಚುನಾವಣೆಯಲ್ಲಿ ಮಾಡಿದಂತೆ ಪ್ರಸಕ್ತ ವಿಧಾನ ಪರಿಷತ್ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಪಕ್ಷ ಹಣ, ಗಿಫ್ಟ್ ಗಳನ್ನು ಹಂಚಿ ಗೆಲುವು ಸಾಧಿಸಲು ಹೊರಟಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಆರೋಪ ಮಾಡಿದರು.

ಇದನ್ನೂ ಓದಿ: Murugha Matt Seer POCSO: ಮುರುಘಾಶ್ರೀ ವಿರುದ್ಧ ಪೋಕ್ಸೋ ಪ್ರಕರಣ ದಾಖಲಿಸಿದ ಸಂತ್ರಸ್ತೆಗೆ ಕಿರುಕುಳ

ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ನಡೆದ ಬೆಂಗಳೂರು ಪದವೀಧರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆ ಕುರಿತ ಜೆಡಿಎಸ್ -ಬಿಜೆಪಿ ಸಮನ್ವಯ ಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು.

ಇದನ್ನೂ ಓದಿ: Pomegranate Benifits: ಖಾಲಿ ಹೊಟ್ಟೆಯಲ್ಲಿ ದಾಳಿಂಬೆ ತಿನ್ಬೇಕಂತೆ, ಯಾಕೆ ಗೊತ್ತಾ?

ಶಿಕ್ಷಕರು, ಪದವೀಧರರು ಮತ ಹಾಕುವ ಈ ಚುನಾವಣೆಯನ್ನು ಕಾಂಗ್ರೆಸ್ ಕಲುಷಿತಗೊಳಿಸುತ್ತಿದೆ. ಹಣ, ಗಿಫ್ಟ್, ಕೂಪನ್ ಹಂಚುವ ಕೆಲಸವನ್ನು ಯಥೇಚ್ಛವಾಗಿ ಮಾಡುತ್ತಿದೆ. ಈಗಾಗಲೇ ಅಧಿಕಾರಿಗಳು ಅನೇಕ ಕಡೆ ದಾಳಿ ನಡೆಸಿ ಕಾಂಗ್ರೆಸ್ ಅಭ್ಯರ್ಥಿ ಹಂಚುತ್ತಿದ್ದ ಗಿಫ್ಟ್ ಬಾಕ್ಸ್ ಗಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ ಎಂದು ಕುಮಾರಸ್ವಾಮಿ ಅವರು ಹೇಳಿದರು.

ಹಣದ ಆಮಿಷ ಒಡ್ಡಿ ಮತ ಪಡೆಯುವ ಕೆಲಸ ಮಾಡುತ್ತಿರುವ ಕಾಂಗ್ರೆಸ್ ಪಕ್ಷಕ್ಕೆ ವಿದ್ಯಾವಂತರಾದ ಪದವೀಧರರು ತಕ್ಕ ಪಾಠ ಕಲಿಸಬೇಕು. ಎರಡೂ ಪಕ್ಷಗಳ ಕಾರ್ಯಕರ್ತರು ಈ ಷಡ್ಯಂತ್ರಕನ್ನು ಒಗ್ಗಟ್ಟಿನಿಂದ ಎದುರಿಸಬೇಕು. ಎರಡು ಪಕ್ಷದ ಕಾರ್ಯಕರ್ತರು ಒಟ್ಟಾಗಿ ಎದುರಿಸಬೇಕು ಎಂದು ಮಾಜಿ ಮುಖ್ಯಮಂತ್ರಿಗಳು ಕರೆ ನೀಡಿದರು.

ಜೆಡಿಎಸ್ -ಬಿಜೆಪಿ ಮೈತ್ರಿ ಐತಿಹಾಸಿಕ. ಪ್ರಧಾನಿ ನರೇಂದ್ರ ಮೋದಿ ಹಾಗೂ ದೇವೆಗೌಡರ ನೇತೃತ್ವದಲ್ಲಿ ಆಗಿರುವ ಈ ಮೈತ್ರಿಯನ್ನು ಎರಡೂ ಪಕ್ಷಗಳ ಕಾರ್ಯಕರ್ತರು ಮುಕ್ತವಾಗಿ ಸ್ವಾಗತಿಸಿದ್ದಾರೆ. ಈ ಚುನಾವಣೆಯಲ್ಲಿ ಒಳ್ಳೆಯ ಫಲಿತಾಂಶ ಬರುತ್ತದೆ. ಇದನ್ನು ಸಹಿಸಿಕೊಳ್ಳಲು ಕಾಂಗ್ರೆಸ್ ಗೆ ಆಗುತ್ತಿಲ್ಲ ಎಂದು ಕುಮಾರಸ್ವಾಮಿ ಅವರು ಕಿಡಿಕಾರಿದರು.