Narendra Modi: ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿದ ಮೋದಿ !!
Narendra Modi: ಪ್ರಧಾನಿ ಹುದ್ದೆಗೆ ನರೇಂದ್ರ ಮೋದಿ ಅವರು ರಾಜೀನಾಮೆ ನೀಡಿದ್ದು, ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿದ್ದಾರೆ.
ಜೂ. 4ರಂದು ಲೋಕಸಭೆ ಫಲಿತಾಂಶ ಪ್ರಕಟವಾದ ನಂತರ ಇಂದು ಬುಧವಾರ ದೆಹಲಿಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ(PM Modi) ಅಧ್ಯಕ್ಷತೆಯಲ್ಲಿ ಕೇಂದ್ರ ಸಚಿವ ಸಂಪುಟ ಸಭೆ ನಡೆದಿದ್ದು, 17ನೇ ಲೋಕಸಭೆಯನ್ನು ವಿಸರ್ಜಿಸಲು ಶಿಫಾರಸು ಮಾಡಲಾಗಿದೆ. ಹೀಗಾಗಿ 17ನೇ ಲೋಕಸಭಾ ಅವಧಿ ಅಂತ್ಯವಾದ ಹಿನ್ನೆಲೆ ನರೇಂದ್ರ ಮೋದಿ (Narendra Modi) ಪ್ರಧಾನ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಇದನ್ನೂ ಓದಿ: Vitla: ಹಳೆ ದ್ವೇಷದ ಹಿನ್ನೆಲೆ ; ಕೋಳಿಬಾಳ್‌ನಿಂದ ಹಲ್ಲೆಗೆ ಮುಂದಾದ ವ್ಯಕ್ತಿ; ಪ್ರಕರಣ ದಾಖಲು
ರಾಜೀನಾಮೆ ಸ್ವೀಕರಿಸಿದ ದ್ರೌಪದಿ ಮುರ್ಮು(Droupadi Murmu), ಮುಂದಿನ ಸರ್ಕಾರ ರಚನೆಯಾಗುವರೆಗೂ ಹಂಗಾಮಿ ಪ್ರಧಾನಿಗಳಾಗಿ ಮುಂದುವರಿಯುವಂತೆ ಸೂಚಿಸಿದ್ದಾರೆ. ಹೊಸ ಸರ್ಕಾರ ರಚನೆಯಾಗುವರೆಗೂ ನರೇಂದ್ರ ಮೋದಿ ಹಂಗಾಮಿ ಪ್ರಧಾನಿಯಾಗಿ ಮುಂದುವರಿಯುತ್ತಾರೆ. ನರೇಂದ್ರ ಮೋದಿಯವರ ಜೊತೆಯಲ್ಲಿ ಅವರ ಸಂಪುಟದ ಎಲ್ಲಾ ಸಚಿವರು ಸಹ ರಾಜೀನಾಮೆ ಸಲ್ಲಿಕೆ ಮಾಡಿದ್ದಾರೆ.
ಮೋದಿಯೇ ಮುಂದಿನ ಪ್ರಧಾನಿ:
ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ ಬಹುಮತ ಸಿಕ್ಕಿದ್ದು, ನರೇಂದ್ರ ಮೋದಿಯವರೇ ಮೂರನೇ ಬಾರಿಗೆ ಪ್ರಧಾನ ಮಂತ್ರಿಯಾಗಿ ಜೂನ್ 8ರ ಶನಿವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ.