Rahul Gandhi: ಸದ್ಯದಲ್ಲೇ ಸಂಸದ ಸ್ಥಾನಕ್ಕೆ ರಾಹುಲ್ ಗಾಂಧಿ ರಾಜೀನಾಮೆ !!

Rahul Gandhi: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಲೋಕಸಭಾ ಚುನಾವಣೆಯಲ್ಲಿ ರಾಯ್ಬರೇಲಿ(Raybareli) ಹಾಗೂ ಕೇರಳದ ವಯನಾಡು(Vayanadu) ಲೋಕಸಭಾ ಕ್ಷೇತ್ರದಿಂದ ಸ್ಪರ್ಧಿಸಿ ಎರಡೂ ಕ್ಷೇತ್ರಗಳಲ್ಲಿ ಅಭೂತಪೂರ್ವ ಜಯ ಸಾಧಿಸಿದ್ದಾರೆ. ಆದರೀಗ ಈ ಎರಡರಲ್ಲಿ ಒಂದು ಕ್ಷೇತ್ರವನ್ನು ಬಿಟ್ಟುಕೊಟ್ಟು ರಾಜಿನಾಮೆ ನೀಡಲಿದ್ದಾರೆ.

 

ಮೋದಿ ಸಂಪುಟದ ಸಂಭಾವ್ಯ ಸಚಿವರು ಯಾರ್ಯಾರು ?! ಕರ್ನಾಟಕದಿಂದ ಯಾರಾಗ್ತಾರೆ ಮಂತ್ರಿ? ಇಲ್ಲಿದೆ ಪಟ್ಟಿ

ಹೌದು, ರಾಹುಲ್(Rahul Gandhi) ಅವರು ಈ ಸಲ ರಾಯ್‌ಬರೇಲಿ ಮತ್ತು ವಯನಾಡು ಕ್ಷೇತ್ರಗಳಲ್ಲಿ ಭಾರೀ ಮತಗಳ ಅಂತರದಿಂದ ಜಯ ಗಳಿಸಿದ್ದಾರೆ. ಆದರೆ, ಮುಂದೆ ಒಂದು ಕ್ಷೇತ್ರದಲ್ಲಿ ಮಾತ್ರ ಅವರು ಸಂಸದರಾಗಿ ಮುಂದುವರಿಯಲು ಅವಕಾಶವಿರುತ್ತದೆ. ಹೀಗಾಗಿ ಅವರು ಒಂದು ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಲೇಬೇಕು. ಆದರೆ ಸದ್ಯ ಅವರಿಗೆ ಈ ಎರಡು ಕ್ಷೇತ್ರಗಳಲ್ಲಿ ಯಾವುದನ್ನು ಉಳಿಸಿಕೊಳ್ಳುವುದು ಎನ್ನುವುದೇ ದೊಡ್ಡ ಪ್ರಶ್ನೆಯಾಗಿ ನಿಂತಿದೆ. ಈ ಬಗ್ಗೆ ರಾಹುಲ್‌ ಗಾಂಧಿ ಅವರು ತಾಯಿ ಸೋನಿಯಾ ಗಾಂಧಿ, ಸೋದರಿ ಪ್ರಿಯಾಂಕಾ ಸೇರಿ ಕಾಂಗ್ರೆಸ್‌ ಪಕ್ಷದ ಪ್ರಧಾನ ಕಾರ್ಯದರ್ಶಿ ಕೆಸಿ ವೇಣುಗೋಪಾಲ್‌ ಜತೆಗೂ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ.

ಕುಟುಂಬದ ಭದ್ರಕೋಟೆ ಅಮೇಠಿಯಲ್ಲಿ(Amethi) ಸೋತಾಗ ಕೈಹಿಡಿದು ಸಂಸತ್‌ಗೆ ಕಳುಹಿಸಿದ ಕೇರಳದ ವಯನಾಡು ಜನರ ವಿಶ್ವಾಸ ಕಾಪಾಡಿಕೊಳ್ಳುವುದೇ ಅಥವಾ ತಮ್ಮ ಕುಟುಂಬಸ್ಥರ ತವರು ಕ್ಷೇತ್ರವಾದ ರಾಯ್‌ಬರೇಲಿಯನ್ನು ಉಳಿಸಿಕೊಳ್ಳುವುದೇ ಎಂಬ ಇಕ್ಕಟ್ಟಿನಲ್ಲಿ ರಾಹುಲ್‌ ಗಾಂಧಿ ಇರುವುದಾಗಿ ಕಾಂಗ್ರೆಸ್‌ ಮೂಲಗಳು ತಿಳಿಸಿವೆ.

ರಾಯ್‌ಬರೇಲಿ ಉಳಿಸಿಕೊಳ್ತಾರಾ?:
ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ರಾಯ್‌ಬರೇಲಿ ಸ್ಥಾನವನ್ನು ಉಳಿಸಿಕೊಳ್ಳುವ ಸಾಧ್ಯತೆಗಳಿವೆ ಎಂಬ ಮಾತುಗಳು ಕೇಳಿ ಬರುತ್ತಿವೆ. ರಾಯ್‌ಬರೇಲಿ ಕ್ಷೇತ್ರವನ್ನು ಉಳಿಸಿಕೊಳ್ಳಲು ಮುಂದಾಗಿರುವ ರಾಹುಲ್ ಗಾಂಧಿ, ವಯನಾಡು ಸಂಸದ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಬೇಕಾಗುತ್ತದೆ. ರಾಹುಲ್ ಗಾಂಧಿ ರಾಜೀನಾಮೆಯ ನಂತರ ವಯನಾಡು ಕ್ಷೇತ್ರಕ್ಕೆ ಉಪ ಚುನಾವಣೆ ನಡೆಯುತ್ತದೆ. ಹಾಗಾದ್ರೆ ಯಾರು ವಯನಾಡು ಕ್ಷೇತ್ರದ ಅಭ್ಯರ್ಥಿ ಯಾರಾಗ್ತಾರೆ ಅನ್ನೋ ಚರ್ಚೆ ಶುರುವಾಗಿವೆ.

ಪ್ರಿಯಾಂಕ ಸ್ಪರ್ಧೆಗೆ ಒತ್ತಾಯ:
ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಯಾಗಿರುವ ಪ್ರಿಯಾಂಕಾ ಗಾಂಧಿ(Priyanka Gandhi) ಹೆಸರು ವಯನಾಡು ಕ್ಷೇತ್ರಕ್ಕೆ ಕೇಳಿ ಬರುತ್ತಿದೆ. ಲೋಕಸಭಾ ಚುನಾವಣೆಯಲ್ಲಿ ಭರ್ಜರಿ ಪ್ರಚಾರ ನಡೆಸಿರುವ ಪ್ರಿಯಾಂಕಾ ಗಾಂಧಿ ಯಾವುದೇ ಕ್ಷೇತ್ರದಿಂದ ಸ್ಪರ್ಧೆ ಮಾಡಿಲ್ಲ. ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ ಮಾಡಲಿ ಅನ್ನೋದು ಕಾಂಗ್ರೆಸ್ ಕಾರ್ಯಕರ್ತರ ಒತ್ತಾಸೆಯಾಗಿದೆ ಎನ್ನಲಾಗಿದೆ. ಒಟ್ಟಿನಲ್ಲಿ ಮುಂದಿನ ವಾರ ಎರಡು ಕ್ಷೇತ್ರಕ್ಕೆ ರಾಹುಲ್ ಗಾಂಧಿ ಭೇಟಿ ನೀಡಲಿದ್ದಾರೆ. ಪ್ರವಾಸದ ವೇಳೆ ಸೋನಿಯಾ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ಜೊತೆಯಲ್ಲಿರಲಿದ್ದಾರೆ.

JEE Advanced ಫಲಿತಾಂಶ 2024 ಪ್ರಕಟ: ದಾಖಲೆ 48,248 ಅಭ್ಯರ್ಥಿಗಳು ಅರ್ಹತೆ, ದೆಹಲಿಯ ವೇದ್ ಲಹೋಟಿ ಟಾಪರ್ !

Leave A Reply

Your email address will not be published.