

Actor Darshan: ಕೊಲೆ ಪ್ರಕರಣದಲ್ಲಿ ನಟ ದರ್ಶನ್ಗೆ ಶಿಕ್ಷೆಯಾಗಲಿ ಎಂದು ನಟಿ ರಮ್ಯಾ ತಮ್ಮ ಅನಿಸಿಕೆಯನ್ನು ವ್ಯಕ್ತಪಡಿಸಿದ್ದಾರೆ. ಕೊಲೆ ಪ್ರಕರಣದ ಕುರಿತು ಎಕ್ಸ್ನಲ್ಲಿ ಪೋಸ್ಟ್ ಮಾಡಿದ ರಮ್ಯಾ ಅವರು ಐಪಿಸಿ ಸೆಕ್ಷನ್ 302 ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ನಟಿ ರಮ್ಯಾ ಅವರು ದರ್ಶನ್ಗೆ ಇಂಡಿಯನ್ ಪಿನಲ್ ಕೋಡ್ 302 ರ ಪ್ರಕಾರ ಯಾವ ಪ್ರಕರಣದ ಶಿಕ್ಷೆಯಾಗುತ್ತದೆ ಎಂಬ ಬಗ್ಗೆ ಟ್ವೀಟ್ ಮಾಡಿದ್ದಾರೆ. 302 ರಲ್ಲಿ ಕೊಲೆ ಆರೋಪ ಸಾಬೀತಾದರೆ ಅವರಿಗೆ ಮರಣದಡನೆ ಅಥವಾ ಜೀವಾವಧಿ ಶಿಕ್ಷೆ ವಿಧಿಸಲಾಗುತ್ತದೆ ಎಂಬ ಮಾಹಿತಿ ಇರುವ ಪೋಸ್ಟನ್ನು ರಮ್ಯಾ ರೀಟ್ವೀಟ್ ಮಾಡಿದ್ದಾರೆ.
https://twitter.com/Karnatakaa_BO/status/1800410187347738894













