Gruhalakshmi : ಯಜಮಾನಿಯರಿಗೆ ಗುಡ್ ನ್ಯೂಸ್, 2 ತಿಂಗಳ ಬಾಕಿ ಗೃಹಲಕ್ಷ್ಮೀ ದುಡ್ಡು ಈ ದಿನ ಖಾತೆಗೆ ಜಮಾ – ಲಕ್ಷ್ಮೀ ಹೆಬ್ಬಾಳ್ಕರ್ ಅನೌನ್ಸ್ !!
Gruhalakshmi : ರಾಜ್ಯ ಸರ್ಕಾರದ ಪಂಚ ಗ್ಯಾರಂಟಿಗಳ ಪೈಕಿ ಪ್ರಮುಖವಾಗಿರುವ ಯೋಜನೆ ‘ಗೃಹಲಕ್ಷ್ಮಿ ಯೋಜನೆ'(Gruhalakshmi Scheme). ಈ ಯೋಜನೆಯಡಿ ರಾಜ್ಯದ ಪ್ರತಿಯೊಂದು ಮನೆಯ ಯಜಮಾನಿಯರ ಖಾತೆಗೆ ಪ್ರತಿ ತಿಂಗಳು 2000 ರೂ ಹಣ ಜಮೆಯಾಗುತ್ತಿದೆ. ಆದರೆ ಕಳೆದ ಎರಡು ತಿಂಗಳಿಂದ ರಾಜ್ಯದಲ್ಲಿ ಯಾವ ಯಜಮಾನಿಯರ ಖಾತೆಗೂ ಹಣ ಜಮಾ ಆಗಿಲ್ಲ. ಹಣಕ್ಕಾಗಿ ಕಾದು ಕಾದು ಸುಸ್ತಾದ ಮಹಿಳೆಯರು ಇದೀಗ ಸರ್ಕಾರದ ವಿರುದ್ಧ ರೊಚ್ಚಿಗೆದ್ದಿದ್ದಾರೆ.
ಹೌದು, ಪ್ರತೀ ತಿಂಗಳು ನಾವು ಖಾತೆಗೆ ಹಣ ಹಾಕುತ್ತೇವೆ, ಯಾವ ತಿಂಗಳೂ ತಪ್ಪುವುದಿಲ್ಲ ಎಂದಿದ್ದ ಸರ್ಕಾರ ಇದೀಗ ಮಾತು ತಪ್ಪಿದೆ. ಕಳೆದೆರಡು ತಿಂಗಳಿಂದ ಯಜಮಾನಿಯರ ಖಾತೆಗೆ ಹಣವನ್ನೇ ಹಾಕಿಲ್ಲ. ಇವತ್ತು ಬರುತ್ತದೆ, ನಾಳೆ ಬರುತ್ತದೆ ಎಂದು ತಾಳ್ಮೆಯಿಂದ ಕಾದ ಮಹಿಳೆಯರು ಇದೀಗ ತಾಳ್ಮೆ ಕಳೆದುಕೊಂಡಿದ್ದಾರೆ. ಹೀಗಾಗಿ ಸರ್ಕಾರ ವಿರುದ್ಧ ರೊಚ್ಚಿಗೆದ್ದು, ಆಕ್ರೋಶ ಹೊರಹಾಕಿದ್ದಾರೆ.
ಮೈಸೂರಿನಲ್ಲಿ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಮಹಿಳೆಯರು ಗೃಹಲಕ್ಷ್ಮಿ ಹಣ ಬರುತ್ತೆ ಎಂಬ ನಿರೀಕ್ಷೆಯಲ್ಲಿದ್ದೆವು, : 2 ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬರ್ತಿಲ್ಲ , ಹಣ ಬರದೇ ಸಾಕಷ್ಟು ತೊಂದರೆಯಾಗಿದೆ. ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಗೌರವ ಸಿಗುತ್ತಿಲ್ಲ. ಗ್ಯಾರಂಟಿ ಯೋಜನೆಯಿಂದ ದಿನನಿತ್ಯ ವಸ್ತುಗಳ ಎಲ್ಲಾ ಬೆಲೆ ಏರಿಕೆಯಾಗಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈ ಬೆನ್ನಲ್ಲೇ ಎಚ್ಚೆತ್ತ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರು ಕೂಡಲೆ ನಾವು ಹಣ ಹಾಕುತ್ತೇವೆ ಎಂದು ಹಣ ಯಾವಾಗ ಬಿಡುಗಡೆ ಆಗುತ್ತೆ ಎಂಬುದನ್ನೂ ತಿಳಿಸಿದ್ದಾರೆ.
ಹೌದು, ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್(Lakshmi Hebbalkar) ಕಡೆಯಿಂದ ಯಜಮಾನಿಯರಿಗೆ ಗುಡ್ ನ್ಯೂಸ್ ಸಿಕ್ಕಿದ್ದು, ಇಂದು, ನಾಳೆ ಯಜಮಾನಿಯರ ಖಾತೆಗೆ ಜೂನ್ ತಿಂಗಳ ‘ಗೃಹಲಕ್ಷ್ಮಿ’ ಹಣ ಜಮಾ ಆಗಲಿದೆ ಎಂದು ತಿಳಿಸಿದ್ದಾರೆ. ಅಲ್ಲದೆ ಜೂನ್ ತಿಂಗಳ ಹಣ ಈಗಾಗಲೇ ಟ್ರೆಷರಿಗೆ ಹಾಕಿದ್ದೇವೆ, ಇಡೀ ರಾಜ್ಯದಲ್ಲಿ ಇಂದು ಮತ್ತು ನಾಳೆ ಖಾತೆಗೆ ಕ್ರೆಡಿಟ್ ಆಗಲಿದೆ ಎಂದಿದ್ದಾರೆ.
ಪ್ರತೀ ತಿಂಗಳು ಈ ದಿನ ಬರುತ್ತೆ ಗೃಹಲಕ್ಷ್ಮೀ ಹಣ:
ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳಕರ್ (Lakshmi Hebbalkar) ಅವರು ಇನ್ಮುಂದೆ ತಿಂಗಳ 21ರಿಂದ 26 ನೇ ತಾರೀಖಿನ ಒಳಗಾಗಿ ಗೃಹಲಕ್ಷ್ಮಿ ಯೋಜನೆಯ ಹಣ (Gruha Lakshmi Money) ಪ್ರತಿಯೊಬ್ಬರ ಖಾತೆಗೆ ವರ್ಗಾವಣೆ ಆಗುವಂತಹ ಕೆಲಸವನ್ನು ಮಾಡಲಾಗುತ್ತದೆ ಎಂಬುದಾಗಿ ಭರವಸೆಯನ್ನು ವ್ಯಕ್ತಪಡಿಸಿದ್ದಾರೆ.