Dakshina Kannada: ಉಳ್ಳಾಲ; ಟಿಪ್ಪರ್‌-ಸ್ಕೂಟರ್‌ ಅಪಘಾತ; ಚಿಕಿತ್ಸೆ ಫಲಕಾರಿಯಾಗದೆ ಸ್ಕೂಟರ್‌ ಸವಾರ ಸಾವು

Share the Article

Dakshina Kannada: ಟಿಪ್ಪರ್‌ ಮತ್ತು ಸ್ಕೂಟರ್‌ ನಡುವೆ ಸಮಭವಿಸಿದ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದು ಪಾವೂರು ಮಲಾರು ಅಕ್ಷರನಗರ ನಿವಾಸಿ ವಿಶ್ವನಾಥ್‌ ಆಚಾರ್ಯ ಎಂಬುವವರ ಪುತ್ರ ಗಣೇಶ್‌ ಆಚಾರ್ಯ (27) ಇಂದು ಚಿಕಿತ್ಸೆ ಫಲಕಾರಿಯಾಗದೆ ಸಾವಿಗೀಡಾಗಿದ್ದಾರೆ.

Rahul Gandhi: ಬರೆದಿಟ್ಟುಕೊಳ್ಳಿ, ಮುಂದಿನ ಚುನಾವಣೆಯಲ್ಲಿ ಗುಜರಾತ್‌ನಲ್ಲಿ ನಿಮ್ಮನ್ನು ಸೋಲಿಸುವೆ; ಬಿಜೆಪಿಗೆ ರಾಹುಲ್‌ ಗಾಂಧಿ ಬಹಿರಂಗ ಸವಾಲು

ಜೂ.28 ರಂದು ಬೆಳಿಗ್ಗೆ 11.50 ರ ಸುಮಾರಿಗೆ ಹರೇಕಳ ಗ್ರಾಮ ಪಂಚಾಯತ್‌ ಕಚೇರಿಯ ಎದುರುಗಡೆ ಈ ಭೀಕರ ಅಪಘಾತ ಸಂಭವಿಸಿದೆ. ಟಿಪ್ಪರ್‌ ವಾಹನ ಚಾಲಕನ ದುಡುಕುತನ ಹಾಗೂ ನಿರ್ಲಕ್ಷ್ಯತನದ ಚಾಲನೆ ಮಾಡಿದ್ದು, ಹಠಾತ್‌ ಬ್ರೇಕ್‌ ಹಾಕಿದ ಕಾರಣ ಹಿಂಬದಿಯಲ್ಲಿದ್ದ ಸ್ಕೂಟರ್‌ಗೆ ಡಿಕ್ಕಿ ಹೊಡೆದಿದ್ದು, ಸ್ಕೂಟರ್‌ ಸಮೇತ ಸವಾರ ರಸ್ತೆಗೆಸೆಯಲ್ಪಟ್ಟಿದ್ದು ಗಂಭೀರವಾಗಿ ಗಾಯಗೊಂಡಿದ್ದರು. ಕೂಡಲೇ ಟಿಪ್ಪರ್‌ ಚಾಲಕ ಸೇರಿ ಸ್ಥಳೀಯರು ಗಾಯಾಳುವನ್ನು ನಾಟೆಕಲ್‌ ಕಣಚೂರು ಆಸ್ಪತ್ರೆಗೆ ದಾಖಲು ಮಾಡಿದ್ದು, ನಂತರ ಅಡ್ಯಾರ್‌ ಫಸ್ಟ್‌ ನ್ಯೂರೋ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.

ಗಣೇಶ್‌ ಅವರು ಮನೆಯ ಹಿರಿಯ ಪುತ್ರನಾಗಿದ್ದು, ಎಸಿ ಮೆಕ್ಯಾನಿಕ್‌ ವೃತ್ತಿ ಮಾಡಿಕೊಂಡಿದ್ದರು. ಟಿಪ್ಪರ್‌ ಲಾರಿ ಚಾಲಕ ಮಹಮ್ಮದ್‌ ಹನೀಫ್‌ ಎಂಬುವವರ ವಿರುದ್ಧ ಪ್ರಕರಣ ದಾಖಲಾಗಿದೆ.ʼ

Belthangady: ಹಿರಿಯ ಸಾಹಿತಿ ನಿವೃತ್ತ ಕನ್ನಡ ಉಪನ್ಯಾಸಕ ಪ್ರೊ.ಎನ್. ಜಿ ಪಟವರ್ಧನ್ ನಿಧನ

Leave A Reply