School Holiday Today: ಇಂದು ರಾಜ್ಯದ ಈ ತಾಲೂಕುಗಳ ಪ್ರಾಥಮಿಕ-ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

Share the Article

School Holiday Today: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಬೆಳಗ್ಗೆಯಿಂದಲೇ ಭಾರೀ ಮಳೆಯಾಗುತ್ತಿದ್ದು, ಈ ಕಾರಣದಿಂದ ಬಂಟ್ವಾಳ ಮತ್ತು ಬೆಳ್ತಂಗಡಿ ತಾಲೂಕಿನಲ್ಲಿ ನಿರಂತರ ಮಳೆಯಾಗುತ್ತಿರುವುದರಿಂದ ಇಂದು ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ನದಿ, ತೊರೆ, ಕೆರೆ, ಹಳ್ಳಗಳು ತುಂಬಿ ತುಳುಕುತ್ತಿದ್ದು, ಪ್ರವಾಹ ಉಂಟಾಗುವ ಸಾಧ್ಯತೆ ಇರುವುದಾಗಿ ವರದಿಯಾಗಿದೆ. ಹಾಗಾಗಿ ಭಾರೀ ಮಳೆಯ ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬಂಟ್ವಾಳ ಮತ್ತು ಬೆಳ್ತಂಗಡಿ ತಹಶೀಲ್ದಾರ್‌ ಮತ್ತು ಕ್ಷೇತ್ರ ಶಿಕ್ಷಣಾಧಿಕಾರಿಯವರು ರಜೆ ಘೋಷಣೆ ಮಾಡಿದ್ದಾರೆ.

Leave A Reply