Mangaluru: ಮಣ್ಣು ಕುಸಿತ ಪ್ರಕರಣ; ಸಾವನ್ನಪ್ಪಿದ ಕಾರ್ಮಿಕನ ಕುಟುಂಬಕ್ಕೆ 4 ಲಕ್ಷ ರೂ ಪರಿಹಾರ

Share the Article

Mangaluru:ಕರಾವಳಿಯಲ್ಲಿ ಭಾರೀ ಮಳೆ ಸುರಿಯುತ್ತಿದ್ದು, ಈ ಕಾರಣದಿಂದ ನಿನ್ನೆ (ಬುಧವಾರ) ಮಂಗಳೂರಿನ ಬಲ್ಮಠದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿತ ಉಂಟಾಗಿ, ಮಣ್ಣಿನಡಿಯಲ್ಲಿ ಸಿಲುಕಿ ಸಾವಿಗೀಡದ ಕಾರ್ಮಿಕ ಚಂದನ್‌ ಕುಮಾರ್‌ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ನೀಡಿದೆ.

ಮೃತ ಕಾರ್ಮಿಕನ ಪತ್ನಿ ಕಿರಣ ದೇವಿ ಅವರಿಗೆ ಎರಡು ಲಕ್ಷ ರೂ. ಚೆಕ್‌ ಕಳುಹಿಸಿದೆ. ಇದರ ಜೊತೆಗೆ ಕಟ್ಟಡ ನಿರ್ಮಾಣದ ಗುತ್ತಿಗೆದಾರರೂ ಕೂಡಾ ಎರಡು ಲಕ್ಷ ರೂ. ಪರಿಹಾರ ನೀಡಿದ್ದಾರೆ. ಜೊತೆಗೆ ಕಾರ್ಮಿಕ ಪರಿಹಾರ ಕಾಯಿದೆಯಡಿಯಲ್ಲಿ ಕೂಡಾ ಮೃತ ಕಾರ್ಮಿಕನ ಕುಟುಂಬಕ್ಕೆ ವಿಮಾ ಮೊತ್ತ ದೊರಕಲಿದೆ ಎಂದು ಕಾರ್ಮಿಕ ಇಲಾಖೆ ತಿಳಿಸಿದೆ.

School Holiday: ಎಡೆಬಿಡದೆ ಸುರಿಯುತ್ತಿರುವ ಮಳೆ; ನಾಳೆ ಉಡುಪಿಯ 3 ತಾಲೂಕುಗಳಲ್ಲಿ ಪಿಯುಸಿವರೆಗೆ ರಜೆ ಘೋಷಣೆ

Leave A Reply