Home News Electric Bike Taxi Ban: ವಾಹನ ಸವಾರರೇ ಇತ್ತ ಗಮನಿಸಿ; ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್‌ ಬೈಕ್‌,...

Electric Bike Taxi Ban: ವಾಹನ ಸವಾರರೇ ಇತ್ತ ಗಮನಿಸಿ; ಇಂದಿನಿಂದ ರಾಜ್ಯದಲ್ಲಿ ಎಲೆಕ್ಟ್ರಿಕ್‌ ಬೈಕ್‌, ಟ್ಯಾಕ್ಸಿ ನಿಷೇಧ- ರಾಜ್ಯ ಸರಕಾರದಿಂದ ಖಡಕ್‌ ಆದೇಶ

Electric Bike Taxi Ban

Hindu neighbor gifts plot of land

Hindu neighbour gifts land to Muslim journalist

Electric Bike Taxi Ban: ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿ ನಿಷೇಧ ಮಾಡಿ ರಾಜ್ಯಸರಕಾರ ಆದೇಶ ಹೊರಡಿಸಿದೆ. ಹಾಗಾಗಿ ಇಂದಿನಿಂದ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿಗಳ ಬಳಕೆ ಇನ್ನು ಮುಂದೆ ಇರುವುದಿಲ್ಲ.

Mangaluru Landslide: ಮಂಗಳೂರು ಮಣ್ಣು ಕುಸಿತ ಪ್ರಕರಣ; ಮೂವರ ವಿರುದ್ಧ ಎಫ್‌ಐಆರ್‌ ದಾಖಲು

ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿಗಳ ಸಂಚಾರವನ್ನು ನಿಷೇಧ ಮಾಡಬೇಕೆಂದು ಕಳೆದ ವರ್ಷ ದೊಡ್ಡ ಮಟ್ಟದಲ್ಲೇ ಪ್ರತಿಭಟನೆ ಮಾಡಲಾಗಿತ್ತು. ಆ ಸಂದರ್ಭದಲ್ಲಿ ಸರಕಾರ ಎಲ್ಲಾ ಮಾದರಿಯ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿಗಳ ಸಂಚಾರ ನಿಷೇಧ ಮಾಡಲಾಗಿತ್ತು.  ಆದರೂ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿಗಳ ಸಂಚಾರ ಆಗುತ್ತಿತ್ತು. ಇದನ್ನು ನಿಷೇಧ ಮಾಡುವಂತೆ ಸಾರಿಗೆ ಸಂಘಟನೆಗಳು ಸರಕಾರಕ್ಕೆ ಒತ್ತಾಯ ಮಾಡಿತ್ತು. ಇದೀಗ ಸಾರಿಗೆ ಸಂಘಟನೆಗಳ ಒತ್ತಾಯದ ಬೆನ್ನಲ್ಲೇ ಅನಧಿಕೃತ ಎಲೆಕ್ಟ್ರಿಕ್‌ ಟ್ಯಾಕ್ಸಿ ವಿರುದ್ಧ ಕ್ರಮಕ್ಕೆ ಮುಂದಾಗಿದೆ.

ಎಲೆಕ್ಟ್ರಿಕ್‌ ಬೈಕ್‌ ಸೀಜ್‌ ಮಾಡಲು ಸಾರಿಗೆ ಅಧಿಕಾರಿಗಳು ಮುಂದಾಗಿದ್ದಾರೆ. 11 ತಂಡವನ್ನು ರಚಿಸಿ ಆರ್‌ಟಿಓ ಅಧಿಕಾರಿಗಳ ನೇತೃತ್ವದಲ್ಲಿ ಸೀಜ್‌ ಕೆಲಸ ನಡೆಯಲಿದೆ.

ಜು 5 ರಂದು ಕಡ್ಡಾಯವಾಗಿ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿಗಳ ಸಂಚಾರ ನಿಷೇಧ ಮಾಡಲಾಗಿದ್ದು, ಎಲ್ಲಾದರೂ ಒಂದು ವೇಳೆ ಎಲೆಕ್ಟ್ರಿಕ್‌ ಬೈಕ್‌ ಟ್ಯಾಕ್ಸಿಗಳ ಕಾರ್ಯಾಚರಣೆ ಕಂಡರೆ ಕೂಡಲೇ ಅವುಗಳನ್ನು ಜಪ್ತಿ ಮಾಡಲಾಗುವುದು, ಹಾಗೂ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಸಾರಿಗೆ ಇಲಾಖೆ ಆದೇಶ ಹೊರಡಿಸಿದೆ.

Child Assault: 3 ವರ್ಷದ ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಶಿಕ್ಷಕಿ