Budget 2024: ಬಜೆಟ್ ಗುಡ್ ನ್ಯೂಸ್! ಇನ್ಮುಂದೆ 300 ಯೂನಿಟ್‌ವರೆಗೆ ಉಚಿತ ವಿದ್ಯುತ್!
Budget 2024: ಕೇಂದ್ರ ಸರ್ಕಾರದ 2024 ರ ಬಜೆಟ್ ನಿರೀಕ್ಷೆಯಂತೆ ಹಲವಾರು ಬಂಪರ್ ಆಫರ್ ಜನತೆಗೆ ನೀಡಲಾಗಿದೆ. ಅಂತೆಯೇ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ (Nirmala Sitharaman) ಮೋದಿ (Modi) ಸರ್ಕಾರ ಮೂರನೇ ಬಾರಿ ಅಧಿಕಾರಕ್ಕೆ ಬಂದಮೇಲೆ ಮೊದಲನೇ ಬಜೆಟ್ (Budget 2024) ಪ್ರಕಾರ , ಪಿಎಂ ಸೂರ್ಯಘರ್ ಯೋಜನೆಯಡಿಯಲ್ಲಿ ಉಚಿತ ವಿದ್ಯುತ್ ಯೋಜನೆಯನ್ನು ಜಾರಿಗೊಳಿಸಲಾಗಿದೆ. ಇದರಲ್ಲಿ 1 ಕೋಟಿ ಮನೆಗಳಿಗೆ 300 ಯೂನಿಟ್‌ಗಳವರೆಗೆ ಉಚಿತ ವಿದ್ಯುತ್ ನೀಡುವುದಾಗಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿದ್ದಾರೆ.
ಹೌದು, ಕೇಂದ್ರ ಸರ್ಕಾರವು ಪ್ರಧಾನ ಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆಯೊಂದಿಗೆ (Solar Scheme) ಸೌರಶಕ್ತಿಯನ್ನು ಜನಪ್ರಿಯಗೊಳಿಸುತ್ತಿದೆ. ಈಗಾಗಲೇ ಪ್ರಧಾನಮಂತ್ರಿ ಸೂರ್ಯ ಘರ್ ಮುಫ್ತ್ ಬಿಜ್ಲಿ ಯೋಜನೆ ಅಡಿಯಲ್ಲಿ 1.28 ಕೋಟಿಗೂ ಹೆಚ್ಚು ನೋಂದಣಿಗಳು ಮತ್ತು 14 ಲಕ್ಷ ಅರ್ಜಿಗಳನ್ನು ಸ್ವೀಕರಿಸಲಾಗಿದೆ.
ಈ ಯೋಜನೆಯಿಂದ ವಿದ್ಯುತ್ ಸಂಗ್ರಹಣೆ ಮತ್ತು ಒಟ್ಟಾರೆ ಶಕ್ತಿ ಮಿಶ್ರಣದಲ್ಲಿ ನವೀಕರಿಸಬಹುದಾದ ಶಕ್ತಿಯ ಸುಗಮ ಏಕೀಕರಣಕ್ಕಾಗಿ ಪಂಪ್ಡ್ ಸ್ಟೋರೇಜ್ ನೀತಿಯನ್ನು ಹೊರತರಲಾಗುವುದು ಎಂದು ಬಜೆಟ್‌ನಲ್ಲಿ ತಿಳಿಸಲಾಗಿದೆ. ಅಲ್ಲದೆ AUSC ತಂತ್ರಜ್ಞಾನವನ್ನು ಬಳಸಿಕೊಂಡು ಪೂರ್ಣ ಪ್ರಮಾಣದ 800 MW ವಾಣಿಜ್ಯ ಉಷ್ಣ ಸ್ಥಾವರವನ್ನು ಸ್ಥಾಪಿಸುವುದಾಗಿ ಮೋದಿ ಸರ್ಕಾರ ತಿಳಿಸಿದೆ.
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್, ‘ಪ್ರಧಾನ ಮಂತ್ರಿ ಸೂರ್ಯಘರ್ ಉಚಿತ ವಿದ್ಯುತ್ ಯೋಜನೆ’ಯನ್ನು ಪ್ರಾರಂಭಿಸಲಾಗಿದೆ ಎಂದು ಹೇಳಿದ್ದು, ಇದರ ಅಡಿಯಲ್ಲಿ ಮೇಲ್ಛಾವಣಿಯ ಮೇಲೆ ಸೌರ ಫಲಕಗಳನ್ನು ಅಳವಡಿಸಲಾಗುವುದು. ಇದರಿಂದಾಗಿ 1 ಕೋಟಿ ಕುಟುಂಬಗಳು 300 ಯೂನಿಟ್ಗಳನ್ನು ಪಡೆಯಬಹುದಾಗಿದೆ.
Union Budget 2024: ಬಜೆಟ್‌ನಲ್ಲಿ ಆಂಧ್ರಪ್ರದೇಶಕ್ಕೆ ‘ದೊಡ್ಡ ಉಡುಗೊರೆ’