Gas Leak: ಗ್ಯಾಸ್ ಸೋರಿಕೆ; ಕ್ಷಣದಲ್ಲಿ ಆಟೋ ಸುಟ್ಟು ಕರಕಲಾದ ವಿಡಿಯೋ ವೈರಲ್!

Share the Article

Gas Leak: ಗ್ಯಾಸ್ ಸೋರಿಕೆಯಾಗಿ ಆಂಧ್ರಪ್ರದೇಶದ ವಿಜಯವಾಡದಲ್ಲಿ ಆಟೋ ಸ್ಫೋಟಗೊಂಡಿದ್ದು, ಕ್ಷಣ ಮಾತ್ರದಲ್ಲಿ ಆಟೋ ಸಂಪೂರ್ಣವಾಗಿ ಸುಟ್ಟು ಕರಕಲಾಗಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್​​ ಆಗಿದೆ.

ಆಂಧ್ರಪ್ರದೇಶದ ವಿಜಯವಾಡದಲ್ಲಿ ಪಿವಿಪಿ ಮಾಲ್ ಎದುರು ನಿಂತಿದ್ದ ಆಟೋದಲ್ಲಿ ಗ್ಯಾಸ್ ಸೋರಿಕೆ (Gas Leak)ಕಾರಣಡಿನ ಭಾರೀ ಬೆಂಕಿ ಹೊತ್ತಿಕೊಂಡಿದ್ದು, ಕ್ಷಣ ಮಾತ್ರದಲ್ಲಿ ಆಟೋ ಸಂಪೂರ್ಣ ಸುಟ್ಟು ಕರಕಲಾಗಿದೆ. ಸದ್ಯ ಅಪಘಾತದಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಆಟೋ ದಲ್ಲಿ ಬೆಂಕಿ ಕಾಣಿಸಿದ ತಕ್ಷಣ ಪೊಲೀಸರು ಅಗ್ನಿಶಾಮಕ ಸಿಬ್ಬಂದಿಗೆ ಸ್ಥಳಕ್ಕೆ ಆಗಮಿಸಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಟೋ ಸ್ಫೋಟದ ಹಿಂದಿನ ಕಾರಣಗಳ ಬಗ್ಗೆ ತನಿಖೆ ನಡೆಸುತ್ತಿದ್ದಾರೆ. ಇದೀಗ ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ   ಎಲ್ಲೆಡೆ ಭಾರೀ ವೈರಲ್​​ ಆಗಿದೆ.

 

Leave A Reply