Bengaluru: ಲೇಡೀಸ್ PGಯಲ್ಲಿ ಯುವತಿ ಕೊಲೆ ಮಾಡಿ ಎಸ್ಕೇಪ್ ಆಗಿದ್ದ ಆರೋಪಿ ಅರೆಸ್ಟ್!

Share the Article

Bengaluru: ರಾಜಧಾನಿ ಬೆಂಗಳೂರಿನ (Bengaluru) ಕೋರಮಂಗಲದ ಲೇಡೀಸ್ ಪಿಜಿಯಲ್ಲಿ ಜುಲೈ 23ರ ರಾತ್ರಿ ಕೃತಿ ಕುಮಾರಿಯನ್ನು ಪ್ರಿಯಕರ ಅಭಿಷೇಕ್‌, ಚಾಕುವಿನಿಂದ ಮನಸೋ ಇಚ್ಛೆ ಚಾಕು ಇರಿದು ನಂತರ ಅಲ್ಲಿಂದ ಕೆಲವೇ ಕ್ಷಣಗಳಲ್ಲಿ ಎಸ್ಕೇಪ್ ಆಗಿದ್ದ. ಸದ್ಯ ಈ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದು, ಆರೋಪಿಯನ್ನು ಪತ್ತೆ ಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.

ಹೌದು, ಜುಲೈ 23ರ ರಾತ್ರಿ ಕೋರಮಂಗಲದ ಪಿಜಿಗೆ ನುಗ್ಗಿ ಚಾಕುವಿನಿಂದ ಇರಿದು ಕೃತಿ ಕುಮಾರಿಯನ್ನು ಹತ್ಯೆಗೈದಿದ್ದ ಅಭಿಷೇಕ್ ಕೊಲೆ ನಂತರ ಮಧ್ಯ ಪ್ರದೇಶಕ್ಕೆ ಹೋಗಿ ತಲೆ ಮರೆಸಿಕೊಂಡಿದ್ದ. ಸದ್ಯ ಪೊಲೀಸರು ಮಧ್ಯ ಪ್ರದೇಶದಲ್ಲೇ ಆರೋಪಿಯನ್ನು ಬಂಧಿಸಿದ್ದಾರೆ.

ಆರೋಪಿಯನ್ನು ಬಂಧಿಸಿದ ಬಳಿಕ ಸ್ಥಳೀಯ ಕೋರ್ಟ್‌ಗೆ ಹಾಜರುಪಡಿಸಿ, ಟ್ರಾನ್ಸಿಟ್ ವಾರೆಂಟ್ ಮೇಲೆ ಬೆಂಗಳೂರಿಗೆ ಕರೆತಂದಿದ್ದಾರೆ. ಹೆಚ್ಚಿನ ತನಿಖೆ ನಡೆಸಲಾಗುತ್ತಿದೆ. ಸಿಸಿಟಿವಿ ಫೂಟೇಜ್‌ಗಳು, ಪ್ರತ್ಯಕ್ಷದರ್ಶಿಗಳು ಹಾಗೂ ಆರೋಪಿಯ ಪ್ರೇಯಸಿಯ ಹೇಳಿಕೆಗಳ ಆಧಾರದಲ್ಲಿ ಆರೋಪಿಯನ್ನು ಬಂಧಿಸಲಾಗಿದ್ದು, ವಿಚಾರಣೆಗೆ ಒಳಪಡಿಸಲಾಗಿದೆ.

 

Leave A Reply