Red Alert: ರೆಡ್ ಅಲರ್ಟ್ ಹಿನ್ನೆಲೆ: ಈ ಜಿಲ್ಲೆಯ ಏಳು ತಾಲೂಕಿನ ಶಾಲೆ- ಕಾಲೇಜುಗಳಿಗೆ ನಾಳೆ ಕೂಡಾ ರಜೆ ಘೋಷಣೆ
Red Alert: ಮಳೆ ಆರ್ಭಟ ನಿಲ್ಲುತ್ತಿಲ್ಲ. ಆಯಾ ಪ್ರಯುಕ್ತ ಉತ್ತರ ಕನ್ನಡ ಜಿಲ್ಲೆಯ ತಾಲೂಕುಗಳಲ್ಲಿ ಇನ್ನೂ ಹೆಚ್ಚಿನ ಮಳೆಯಾಗುತ್ತಿರುವುದರಿಂದ ಶಾಲಾ ಮಕ್ಕಳ ಹಿತದೃಷ್ಟಿಯಿಂದ ವಿಪತ್ತು ನಿರ್ವಹಣಾ ಕಾಯ್ದೆ 2005 ರಡಿ ಜಿಲ್ಲಾಧಿಕಾರಿ ಹಾಗೂ ಅಧ್ಯಕ್ಷರು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧಿಕಾರದ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಹಲವು ಕಡೆ ರಜೆ ಘೋಷಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೊನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕಿನಾದ್ಯಂತ ಎಲ್ಲಾ ಸರ್ಕಾರಿ, ಸರ್ಕಾರಿ ಅನುದಾನಿತ, ಅನುದಾನರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ, ಐ.ಟಿ.ಐ ಹಾಗೂ ದಿಪ್ಲೋಮಾ ಕಾಲೇಜುಗಳಿಗೆ ದಿನಾಂಕ: 02-08-2024 ರ ದಿನ ರಜೆ ಘೋಷಿಸಿ ಜಿಲ್ಲಾಧಿಕಾರಿಗಳು ಆದೇಶ ಮಾಡಿರುತ್ತಾರೆ.
ಹಾಗಾಗಿ ಉ. ಕನ್ನಡ ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಹೋನ್ನಾವರ, ಭಟ್ಕಳ, ಜೋಯಿಡಾ ಹಾಗೂ ದಾಂಡೇಲಿ ತಾಲ್ಲೂಕಿನಾದ್ಯಂತ ನಾಳೆ ರಜೆ ಘೋಷಿಸಲಾಗಿದೆ. ಅಲ್ಲಿನ ಎಲ್ಲಾ ಸರ್ಕಾರಿ, ಅನುದಾನಿತ, ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಿಗೆ, ಪದವಿ ಪೂರ್ವ,ಐ.ಟಿ.ಐ ಹಾಗೂ ಡಿಪ್ಲೋಮಾ ಕಾಲೇಜುಗಳಿಗೆ ಮುಂಜಾಗೃತ ಕ್ರಮ ಕೈಗೊಂಡು ನಾಳೆ 02-08-2024 ರಂದು ರಜೆ ಕೊಡಲಾಗಿದೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಕಾರವಾರ ಉಪನಿರ್ದೇಶಕರು, ಉಪನಿರ್ದೇಶಕರು, ಪದವಿಪೂರ್ವ ಶಿಕ್ಷಣ ಇಲಾಖೆ ಕಾರವಾರ ಹಾಗೂ ಉಪನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಕಾರವಾರರವರು ಈ ಆದೇಶವನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಹಾಗೂ ಈ ರಜಾ ಅವಧಿಯನ್ನು ಮುಂದಿನ ದಿನಗಳಲ್ಲಿ ಹೊಂದಾಣಿಕೆ ಮಾಡಿಕೊಳ್ಳುವುದು ಎಂದೂ ತಿಳಿಸಲಾಗಿದೆ. ಹಾಗಾಗಿ ಈ ರಜೆ ಕಂಪೆನ್ಸೆಟರಿ ಆಫ್. ಇವತ್ತಿನ ರಜವನ್ನು ಮುಂದೊಂದು ದಿನ ಮಕ್ಕಳು ಮತ್ತು ಶಿಕ್ಷಕರು ಡ್ಯೂಟಿ ಮಾಡಬೇಕಾಗಿದೆ.