Bengaluru: ನಮ್ಮ ಮೆಟ್ರೋ ಹಳಿಗೆ ಜಿಗಿದು ವ್ಯಕ್ತಿ ಆತ್ಮಹತ್ಯೆ !!

Share the Article

Bengaluru: ಬೆಂಗಳೂರಿನಲ್ಲಿ ನಮ್ಮ ಮೆಟ್ರೋದಲ್ಲಿನ(Namma Metro) ನಾಗಸಂದ್ರ-ರೇಷ್ಮೆ ಸಂಸ್ಥೆ ಹಸಿರು ಮಾರ್ಗದ ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ ಹಳಿಗೆ ಹಾರಿ ವ್ಯಕ್ತಿಯೋರ್ವ ಆತ್ಮಹತ್ಯೆಗೆ ಶರಣಾಗಿರೋ ಘಟನೆ ನಡೆದಿದೆ.

ಹೌದು, ನಿನ್ನೆ(ಆ.3) ಸಂಜೆ 5.41ರ ಸುಮಾರಿಗೆ 35 ವರ್ಷದ ನವೀನ್ ಕುಮಾರ್ ಅರೋರ ಮೆಟ್ರೋ ರೈಲು ನಿಲ್ದಾಣಕ್ಕೆ ಬರುತ್ತಿದ್ದಂತೆ ಹಳಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ರಾತ್ರಿ 7.30ರವರೆಗೂ ಮೃತರ ದೇಹವು ಹಳಿಗಳ ಮೇಲೆ ಬಿದ್ದಿತ್ತು ಎಂದು ಬಿಎಂಆರ್‌ಸಿಎಲ್‌ನ ಮೂಲಗಳು ತಿಳಿಸಿವೆ.

ಈ ಕುರಿತು ಪೋಸ್ಟ್ ಹಂಚಿಕೊಂಡಿರುವ ಬಿಎಂಆರ್‌ಸಿಎಲ್(BMRCL) ಪ್ರಾಥಮಿಕ ಮಾಹಿತಿಯ ಪ್ರಕಾರ, 35 ವರ್ಷದ ವ್ಯಕ್ತಿಯೊಬ್ಬರು ದೊಡ್ಡಕಲ್ಲಸಂದ್ರ ನಿಲ್ದಾಣದಲ್ಲಿ 5.45 ಗಂಟೆಗೆ ಸಮೀಪಿಸುತ್ತಿರುವ ರೈಲಿನ ಮುಂದೆ ಜಿಗಿದಿದ್ದಾರೆ. ಹಸಿರು ಮಾರ್ಗದಲ್ಲಿ ಯಲಚೇನಹಳ್ಳಿ ಮತ್ತು ಸಿಲ್ಕ್ ಇನ್‌ಸ್ಟಿಟ್ಯೂಟ್ ನಿಲ್ದಾಣಗಳ ನಡುವೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ, ಉಳಿದ ಮಾರ್ಗದಲ್ಲಿ ಸೇವೆಗಳು ಲಭ್ಯವಿದೆ” ಎಂದು ‘ಎಕ್ಸ್’ ಖಾತೆಯಲ್ಲಿ ಮಾಹಿತಿ ನೀಡಿದೆ.

ಅಂದಹಾಗೆ ನಮ್ಮ ಮೆಟ್ರೋ ಹಳಿಯಲ್ಲಿ ಈ ವರ್ಷ ಸಂಭವಿಸಿದ ಎರಡನೇ ಘಟನೆ ಇದಾಗಿದೆ. ಎರಡು ದಿನಗಳ ಹಿಂದೆ ಬೈಯಪ್ಪನಹಳ್ಳಿ ಮೆಟ್ರೋ ನಿಲ್ದಾಣದಲ್ಲಿ ಆಟವಾಡುತ್ತಿದ್ದ ನಾಲ್ಕು ವರ್ಷದ ಮಗು ಆಕಸ್ಮಿಕವಾಗಿ ಮೆಟ್ರೋ ಹಳಿ ಮೇಲೆ ಬಿದ್ದಿತ್ತು. ನಂತರ ಎಚ್ಚೆತ್ತ ಮೆಟ್ರೋ ಸಿಬ್ಬಂದಿ ಎಎಚ್‌ಡಿ ಹಳಿಗಳ ತುರ್ತು ಟ್ರಿಪ್ ಸಿಸ್ಟಮ್ ವಿದ್ಯುತ್ ಲೈನ್ ಅನ್ನು ಸ್ವಿಚ್ ಆಫ್ ಮಾಡಿ ಮಗುವನ್ನು ರಕ್ಷಿಸಿದ್ದರು.

Leave A Reply