Railway: ರೈಲ್ವೆ ಇಲಾಖೆಯಿಂದ ಕನ್ನಡಿಗರಿಗೆ ಸಿಹಿ ಸುದ್ದಿ!

Railway: ಕನ್ನಡಿಗರಿಗೆ ರೈಲ್ವೆ (Railway) ಸಹಾಯಕ ಸಚಿವ ವಿ.ಸೋಮಣ್ಣ ಸಿಹಿಸುದ್ದಿ ನೀಡಿದ್ದಾರೆ. ಹೌದು, ನೈಋತ್ಯ ರೈಲ್ವೆ ಸಹಾಯಕ ಲೋಕೋ ಪೈಲಟ್ ಹುದ್ದೆ ಬಡ್ತಿಗಾಗಿ ಸಾಮಾನ್ಯ ವಿಭಾಗೀಯ ಸ್ಪರ್ಧಾತ್ಮಕ ಪರೀಕ್ಷೆಯನ್ನು (ಜಿಡಿಸಿಇ) ಇಂಗ್ಲಿಷ್/ಹಿಂದಿ ಭಾಷೆಯ ಜೊತೆಗೆ ಕನ್ನಡದಲ್ಲೂ ಬರೆಯಲು ಅವಕಾಶ ನೀಡುವಂತೆ ನೈಋತ್ಯ ರೈಲ್ವೆ ವಲಯ ಪ್ರಧಾನ ವ್ಯವಸ್ಥಾಪಕರಿಗೆ ರೈಲ್ವೆ ರಾಜ್ಯಖಾತೆ ಸಚಿವ ವಿ. ಸೋಮಣ್ಣ ಸೂಚಿಸಿದ್ದು, ಇನ್ನೆರಡು ದಿನದಲ್ಲಿ ಈ ಬಗ್ಗೆ ಅಧಿಕೃತ ಸುತ್ತೋಲೆ ಹೊರಡಿಸುವುದಾಗಿ ಭರವಸೆ ನೀಡಿದ್ದಾರೆ.

ಹೌದು, ಮುಂಬರುವ ದಿನಗಳಲ್ಲಿ ರೈಲ್ವೆ ಇಲಾಖೆಯ ಎಲ್ಲಾ ನೇಮಕ ಪರೀಕ್ಷೆಗಳನ್ನು ಕನ್ನಡದಲ್ಲಿ ಬರೆಯಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸುವಂತೆ ರೈಲ್ವೆ ಮಂಡಳಿ ವ್ಯವಸ್ಥಾಪಕರಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇಲಾಖೆಯಲ್ಲಿ ಮುಂಬಡ್ತಿ ನೀಡಲು ನಡೆಸುತ್ತಿದ್ದ ಸಾಮಾನ್ಯ ವಿಭಾಗ ಸ್ಪರ್ಧಾತ್ಮಕ ಪರೀಕ್ಷೆಯನ್ನು ಶೀಘ್ರವೇ ಕನ್ನಡದಲ್ಲಿಯೂ ಪರೀಕ್ಷೆ ಬರೆಯಲು ಅವಕಾಶ ನೀಡುವ ಆದೇಶ ಹೊರಬೀಳಲಿದೆ ಎಂದು ಹೇಳಿದ್ದಾರೆ.