Yuvanidhi Plus: ಸರ್ಕಾರದಿಂದ ನಿರುದ್ಯೋಗಿಗಳಿಗೆ ಗುಡ್ ನ್ಯೂಸ್: ಯುವನಿಧಿ ಭತ್ಯೆ ಜೊತೆ ಯುವನಿಧಿ ಪ್ಲಸ್ ಉದ್ಯೋಗ!
Yuvanidhi Plus: ನಿರುದ್ಯೋಗಿಗಳಿಗೆ ಉದ್ಯೋಗ ಅವಕಾಶವನ್ನು ಕರ್ನಾಟಕ ಕಾಂಗ್ರೆಸ್ ಸರ್ಕಾರ ನೀಡಲಿದೆ. ಹೌದು, ಈಗಾಗಲೇ ಕರ್ನಾಟಕದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ (Guarantee Schemes) ಜೊತೆಗೆ ಕಾಂಗ್ರೆಸ್ ಸರ್ಕಾರ ಈಗ ಮತ್ತೊಂದು ಭಾಗ್ಯ ನೀಡಲು ಮುಂದಾಗಿದೆ. ಅಂದರೆ ನಿರುದ್ಯೋಗ ಯುವಕರಿಗೆ ಕೌಶಲ್ಯ ಹಾಗೂ ಉದ್ಯೋಗ ನೀಡುವ ನಿಟ್ಟಿನಲ್ಲಿ ಪಂಚ ಯೋಜನೆಗಳ ಪೈಕಿ ಯುವನಿಧಿ ಪ್ಲಸ್ (Yuvanidhi Plus) ಯೋಜನೆಯೊಂದನ್ನು ನೀಡಲು ರಾಜ್ಯ ಸರ್ಕಾರ ಮುಂದಾಗಿದೆ. ಆ ಮೂಲಕ ನಿರುದ್ಯೋಗಳಿಗೆ ಭತ್ಯೆ ಜೊತೆ ಉದ್ಯೋಗ ನೀಡುವ ಬಗ್ಗೆ ಚಿಂತನೆ ನಡೆಸಲಾಗುತ್ತಿದೆ.
ಹೌದು, ಯುವನಿಧಿ ಯೋಜನೆಯನ್ನ ಪರಿಷ್ಕರಣೆ ಮಾಡಿ ಯುವನಿಧಿ ಪ್ಲಸ್ ಮಾಡಲು ಸರ್ಕಾರ ಮುಂದಾಗಿದೆ. ನಿರುದ್ಯೋಗ ಯುವಕರಿಗೆ ಕೈಗಾರಿಕಾ ಕಂಪನಿ, ಐಟಿಬಿಟಿ , ಕಾರ್ಪೋರೇಟ್ ಕಂಪನಿಗಳ ಅನುಸಾರ ನಿರದ್ಯೋಗ ಯುವಕರಿಗೆ ತರಬೇತಿ ನೀಡಿ ಉದ್ಯೋಗ ದೊರಕುವಂತೆ ಮಾಡಲು ಸರ್ಕಾರ ಯುವನಿಧಿ ಪ್ಲಸ್ ಯೋಜನೆ ಜಾರಿಗೆ ಮುಂದಾಗಿದೆ.
ಈಗಾಗಲೇ ಸರ್ಕಾರದಿಂದ ಯುವನಿಧಿ ಯೋಜನೆಯಡಿ ಪದವೀಧರರಿಗೆ ಮಾಸಿಕ 3 ಸಾವಿರ ರೂ. ಮತ್ತು ಡಿಪ್ಲೊಮಾ ಪದವೀಧರರಿಗೆ 1500 ರೂ. ನೀಡಲಾಗುತ್ತಿದೆ. ಇದರ ಮುಂದುವರೆದ ಭಾಗವಾಗಿ ಯುವನಿಧಿ ಪ್ಲಸ್ ಜಾರಿ ಮಾಡಲಾಗುತ್ತಿದೆ. ಇದರಿಂದ ಯುವನಿಧಿ ಫಲಾನುಭವಿಗಳಿಗೆ ಉದ್ಯೋಗ ದೊರಕಿಸುವ ಉದ್ದೇಶವಾಗಿದೆ.