Mutalik: ಬಾಂಗ್ಲಾ ದೇಶದ ಹಿಂದುಗಳ ರಕ್ಷಣೆಗೆ ಮುಂದಾಗಿ : ಕೇಂದ್ರಕ್ಕೆ ಮುತಾಲಿಕ್ ಮನವಿ : ಬಿಜೆಪಿ ಕಚೇರಿ ಮುಂದೆ ಪ್ರತಿಭಟನೆ

Share the Article

Mutalik: ಬಾಂಗ್ಲಾದಲ್ಲಿ ನಡೆಯುತ್ತಿರುವ ಅರಾಜಕತೆಯಿಂದ ಅಲ್ಲಿನ ಹಿಂದುಗಳಿಗೆ ರಕ್ಷಣೆ ಇಲ್ಲದಂತಾಗಿದೆ. ಈ ಹಿನ್ನೆಲೆಯಲ್ಲಿ ಹಿಂದುಗಳ ರಕ್ಷಣೆಯ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ತೆಗೆದುಕೊಳ್ಳಬೇಕೆಂದು ಶ್ರೀರಾಮಮ ಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್‌ ಆಗ್ರಹಿಸಿದ್ದರಾರೆ. ಬೆಂಗಳರಿನ ಮಲ್ಲೇಶ್ವರಂನಲ್ಲಿರುವ ಬೀಜೆಪಿ ಕಚೇರಿಗೆ ಆಗಮಿಸಿ ಪ್ರಮೋದ್ ಮುತಾಲಿಕ್ ಬಿಜೆಪಿ ರಾಜ್ಯಾಧ್ಯಕ್ಷರಿಗೆ ಮನವಿ ನೀಡಲಿದ್ದಾರೆ.

ಬಾಂಗ್ಲಾ ದೇಶದಲ್ಲಿ ಹಿಂದುಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗುತ್ತಿಲ್ಲ ಎಂದು ಆಕ್ಷೇಪ‌ ವ್ಯಕ್ತಪಡಿಸಿದ ಮುತಾಲಿಕ್‌ ಅವರನ್ನೆಲ್ಲಾ ಭಾರತಕ್ಕೆ ಕರೆ ತರುವ ವ್ಯವಸ್ಥೆಯನ್ನು ಕೇಂದ್ರ ಸರ್ಕಾರ ಮಾಡಬೇಕೆಂದು ಮನವಿ ಸಲ್ಲಿಸಲಿದ್ದಾರೆ. ಮುತಾಲಿಕ್ ಆಗಮನ ಹಿನ್ನಲೆ ಬಿಜೆಪಿ ಕಚೇರಿಗೆ ಬಿಗಿ ಪೊಲೀಸ್ ಭದ್ರತೆ ನೀಡಲಾಗಿದ್ದು, ಹೆಚ್ಚುವರಿ ಪೊಲೀಸ್ ಸಿಬ್ಬಂದಿ ನಿಯೋಜನೆ ಮಾಡಲಾಗಿದೆ. ಕಚೇರಿ ಮುಂದೆ ಬ್ಯಾರಿಕೇಡ್ ಹಾಕಿ ಭದ್ರತೆ ಮಾಡಲಾಗಿದೆ.

ಅದಕ್ಕೂ ಮುನ್ನ ಕಾಡು ಮಲ್ಲೇಶ್ವರ ದೇವಸ್ಥಾನಕ್ಕೆ ಭೇಟಿ‌ ನೀಡಿ ಅಲ್ಲಿಂದ ಪ್ರತಿಭಟನೆ ಮೆರವಣಿಗೆ ಮೂಲಕ ಮುತಾಲಿಕ್‌ ಬಿಜೆಪಿ ಕಚೇರಿಗೆ ಆಗಮಿಸಿದರು. ಅಲ್ಲೇ ರಸ್ತೆಯಲ್ಲೇ ಕುಳಿತು ಮುತಾಲಿಕ್ ನೇತೃತ್ವದಲ್ಲಿ ಪ್ರತಿಭಟನೆ ಮಾಡಿ ಬಿಜೆಪಿ ವಿರುದ್ಧ ಘೋಷಣೆ ಕೂಗಲಾಯಿತು.

Leave A Reply