Krishna Byre Gowda: ಪೋಡಿ ಅಭಿಯಾನ ಚಾಲನೆ ಬಗ್ಗೆ ಮಹತ್ವ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇ ಗೌಡ

Krishna Byre Gowda: ಕಂದಾಯ ಸಚಿವ ಕೃಷ್ಣ ಬೈರೇಗೌಡ (Krishna Byre Gowda) ಅವರು , ‘ಸೆಪ್ಟೆಂಬರ್ ತಿಂಗಳಿನಿಂದ ಪೋಡಿ ಅಭಿಯಾನಕ್ಕೆ ಚಾಲನೆ ನೀಡಲಾಗುವುದು’ ಎಂದು ಬೆಂಗಳೂರು ವಿಭಾಗದ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ,.

ಈಗಾಗಲೇ ‘ಸಾಗುವಳಿ ಮಾಡುವ ರೈತರಿಗೆ ಮಂಜೂರಾಗಿರುವ ಎಷ್ಟೋ ಪ್ರಕರಣಗಳಲ್ಲಿ ಹಲವು ವರ್ಷಗಳಿಂದ ಪೋಡಿ ದುರಸ್ತಿ ಆಗಿರುವುದಿಲ್ಲ. ಅದಕ್ಕಾಗಿ ಸಮಸ್ಯೆ ಬಗೆಹರಿಸಲು ಹೊಸ ತಂತ್ರಾಂಶ ಸಿದ್ಧಪಡಿಸಲಾಗಿದೆ’ ಎಂದರು. ಮುಖ್ಯವಾಗಿ ಡಿಜಿಟಲ್ ಆ್ಯಪ್ ಮೂಲಕ ಪೋಡಿ ದುರಸ್ತಿಗೆ ಚಾಲನೆ ನೀಡಲು ಉದ್ದೇಶಿಸಲಾಗಿದೆ. ಹಾಸನದಲ್ಲಿ ಈಗಾಗಲೇ ಪ್ರಾಯೋಗಿಕವಾಗಿ ಈ ಯೋಜನೆ ನಡೆಯುತ್ತಿದೆ’ ಎಂದರು.
‘ ಪೋಡಿ ಪ್ರಕರಣಗಳನ್ನು ಸರಿಪಡಿಸಲು ಕಾನೂನು ರೂಪಿಸಿದರೂ, ಅಧಿಕಾರಿಗಳು ತಮ್ಮ ಅನುಕೂಲಕ್ಕೆ ತಕ್ಕಂತೆ ಬಳಸಿಕೊಂಡು ಜನರಿಗೆ ಸರಿಯಾಗಿ ಸ್ಪಂದನೆ ನೀಡುತ್ತಿಲ್ಲ. ಅದಕ್ಕಾಗಿ ಕಾನೂನಿನ ಚೌಕಟ್ಟಿನಡಿ ಅರ್ಜಿಗಳನ್ನು ವಿಲೇವಾರಿ ಮಾಡದ ಅಧಿಕಾರಿಗಳ ಮೇಲೆ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಎಚ್ಚರಿಕೆ ನೀಡಿದರು.
ಸದ್ಯ ‘ಲ್ಯಾಂಡ್ ಬೀಟ್ ಆ್ಯಪ್ ಆಧರಿಸಿ ಸೆಪ್ಟೆಂಬರ್ ತಿಂಗಳಿನಿಂದ ಭೂ ಒತ್ತುವರಿ ತೆರವು ಕಾರ್ಯಾಚರಣೆಗೆ ಚಾಲನೆ ನೀಡಲಾಗುವುದು’ ಎಂದು ಸಚಿವರು ತಿಳಿಸಿದರು. ಈಗಾಗಲೇ ಲ್ಯಾಂಡ್ ಬೀಟ್ ಆ್ಯಪ್‌ನಿಂದ ‘ರಾಜ್ಯದಾದ್ಯಂತ 1.41 ಕೋಟಿ ಎಕರೆ ಸರ್ಕಾರಿ ಜಮೀನಿದೆ ತಿಳಿದು ಬಂದಿದ್ದು, ಗ್ರಾಮ ಆಡಳಿತಾಧಿಕಾರಿಗಳ ಮೂಲಕ ಸರ್ಕಾರಿ ಜಮೀನನ್ನು ಈ ಆ್ಯಪ್‌ನಲ್ಲಿ ಅಪ್ಲೋಡ್ ಮಾಡಲು ಸೂಚನೆ ನೀಡಿದ್ದು , ಅದು ಅಪ್ಲೋಡ್ ಆದ ಬಳಿಕ ಈ ಲೆಕ್ಕ ಸಿಕ್ಕಿದೆ. ಜಿಲ್ಲಾವಾರು, ತಾಲ್ಲೂಕುವಾರು ಹಾಗೂ ಗ್ರಾಮವಾರು ಸರ್ವೇ ನಂಬರ್, ಲೋಕೇಷನ್ ಮತ್ತು ವಿಸ್ತೀರ್ಣ ದ ಮಾಹಿತಿ ಈಗ ಲಭ್ಯವಿದೆ’ ಎಂದರು.