Rain Alert: ನಾಳೆಯಿಂದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆ, IMD ಎಚ್ಚರಿಕೆ !

Rain Alert: ರಾಜ್ಯದಲ್ಲಿ ಮತ್ತೆ ನೈಋತ್ಯ ಮುಂಗಾರು ಮತ್ತೆ ಚುರುಕು ಪಡೆಯಲಿದೆ. ಕರಾವಳಿ ಕರ್ನಾಟಕ ಹಾಗೂ ಮಲೆನಾಡು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. (IMD warns heavy rain in karavali districts). ಇಂದಿನಿಂದ ಶುರುವಾಗಿ ವಾರಾಂತ್ಯದವರೆಗೆ ಉತ್ತರ ಒಳನಾಡು ಪ್ರದೇಶ ಹೊರತುಪಡಿಸಿ ಉಳಿದೆಡೆ ಉತ್ತಮ ಮಳೆಯಾಗಲಿದೆ ಎನ್ನುವ ಮುನ್ಸೂಚನೆ (Rain Alert)+ನೀಡಲಾಗಿದೆ.

ಇಂದು ಗುರುವಾರ ಮತ್ತು ಶುಕ್ರವಾರ ಅವಳಿ ನಗರಗಳಾದ ದಕ್ಷಿಣ ಕನ್ನಡ – ಉಡುಪಿ, ಚಿಕ್ಕಮಗಳೂರು, ಕೊಡಗು, ಹಾಸನ, ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆಗಳ ಹಲವೆಡೆ ಭಾರಿ ವರ್ಷಧಾರೆಯಾಗಲಿದೆ ಎನ್ನಲಾಗಿದೆ. ಇನ್ನು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣವಾಗಿ ಮಳೆಯಾಗಲಿದೆ. ರಾಷ್ಟ್ರ ರಾಜಧಾನಿ ಬೆಂಗಳೂರು ಹಾಗೂ ಸುತ್ತಲಿನ ಜಿಲ್ಲೆಗಳಲ್ಲಿ ಹಗುರ ಅಥವಾ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಕೇಂದ್ರದ ನಿರ್ದೇಶಕರು ತಿಳಿಸಿದ್ದಾರೆ.

Leave A Reply

Your email address will not be published.