Home News Puttur Stabbing: ಮುಸ್ಲಿಂ ವಿದ್ಯಾರ್ಥಿನಿಗೆ ಚೂರಿ ಇರಿದ ಅನ್ಯಧರ್ಮದ ವಿದ್ಯಾರ್ಥಿ: ಪುತ್ತೂರಿನಲ್ಲಿ ಪ್ರಕ್ಷುಬ್ಧ ವಾತಾವರಣ

Puttur Stabbing: ಮುಸ್ಲಿಂ ವಿದ್ಯಾರ್ಥಿನಿಗೆ ಚೂರಿ ಇರಿದ ಅನ್ಯಧರ್ಮದ ವಿದ್ಯಾರ್ಥಿ: ಪುತ್ತೂರಿನಲ್ಲಿ ಪ್ರಕ್ಷುಬ್ಧ ವಾತಾವರಣ

Hindu neighbor gifts plot of land

Hindu neighbour gifts land to Muslim journalist

Puttur Stabbing: ಪುತ್ತೂರಿನ ಕೊಂಬೆಟ್ಟುವಿನಲ್ಲಿರುವ ಸರಕಾರಿ ಕಾಲೇಜಿನಲ್ಲಿ ವಿದ್ಯಾರ್ಥಿಯೋರ್ವ ತನ್ನ ಸಹಪಾಠಿ ವಿದ್ಯಾರ್ಥಿನಿಗೆ ಚೂರಿ ಇರಿದಿರುವ ಘಟನೆ (Puttur Stabbing) ಇಂದು ನಡೆದಿದೆ. ಮುಸ್ಲಿಂ ಯುವತಿಗೆ ಅನ್ಯಧರ್ಮದ ಯುವಕನೋರ್ವ ಚೂರಿ ಇರಿದದ್ದಾನೆ ಎಂದು ಮಾಹಿತಿ ಲಭ್ಯವಾಗುತ್ತಿದ್ದು, ಗಾಯಗೊಂಡಿರುವ ವಿದ್ಯಾರ್ಥಿನಿಯನ್ನು ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಪುತ್ತೂರು ನಗರ ಠಾಣೆ ಪೊಲೀಸರು ಭೇಟಿ ನೀಡಿದ್ದು, ತನಿಖೆ ಕೈಗೊಂಡಿದ್ದಾರೆ.

ಈ ಘಟನೆ ಸಂಬಂಧ ಇದೀಗ ಆಸ್ಪತ್ರೆ ಮುಂದೆ ಯುವಕರು ಜಮಾವಣೆಗೊಂಡಿದ್ದು, ಪ್ರಕ್ಷುಬ್ದ ವಾತಾವರಣ ನಿರ್ಮಾಣಗೊಂಡಿದೆ. ಈ ಹಿನ್ನೆಲೆಯಲ್ಲಿ ಆಸ್ಪತ್ರೆ ಮುಂದೆ ಹೆಚ್ಚಿನ ಸಂಖ್ಯೆಯಲ್ಲಿ ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಈ ಮಧ್ಯೆ ಘಟನೆ ವೇಳೆ ಆರೋಪಿಯನ್ನು ರಕ್ಷಿಸಲು ಶಿಕ್ಷಕಿಯೊಬ್ಬರು ಪ್ರಯತ್ನಿಸಿದ್ದಾರೆ. ಅವರನ್ನು ಹಾಗೂ ಆರೋಪಿಯನ್ನು ಬಂಧಿಸುವಂತೆ ವಿದ್ಯಾರ್ಥಿಗಳು ಒತ್ತಾಯಿಸುತ್ತಿದ್ದಾರೆ. ಪೊಲೀಸರು ಈ ಬಗ್ಗೆ ಹೆಚ್ಚಿನ ತನಿಖೆ ಕೈಗೊಂಡು ಆರೋಪಿ ವಿರುದ್ಧ ಕೇಸ್‌ ದಾಖಲಿಸಲಾಗುವುದು ಎಂದು ಹೇಳಿದ್ದಾರೆ. ಹೆಚ್ಚಿನ ಮಾಹಿತಿ ಇನ್ನು ಲಭ್ಯವಾಗಬೇಕಿದೆ.