Puttur: ಮುಸ್ಲಿಂ ವಿದ್ಯಾರ್ಥಿನಿಗೆ ಹಿಂದೂ ಯುವಕ ಚೂರಿ ಇರಿತ; ನಿಜಕ್ಕೂ ಅಲ್ಲಿ ನಡೆದದ್ದೇನು? ಇಲ್ಲಿದೆ ಮಾಹಿತಿ

Puttur: ಪುತ್ತೂರಿನಲ್ಲಿ (Puttur) ಹಿಂದೂ ಯುವಕ ತನಗೆ ಚೂರಿ ಇರಿದಿದ್ದಾನೆ ಎಂದು ಮುಸ್ಲಿಂ ವಿದ್ಯಾರ್ಥಿನಿಯೋರ್ವಳು ಆರೋಪಿಸಿ ಆಸ್ಪತ್ರೆಗೆ ದಾಖಲಾದ ಘಟನೆ ನಡೆದಿದ್ದು, ಈ ಪ್ರಕರಣ ಸತ್ಯಾ ಸತ್ಯತೆ ಬೇರೆಯೇ ಇದೆ. ಈಗಾಗಲೇ ಪೊಲೀಸರು ಸತ್ಯಾಸತ್ಯತೆಗಳ ಬಗ್ಗೆ ತನಿಖೆ ಆರಂಭಿಸಿದ್ದಾರೆ.

ಹೌದು, ಪುತ್ತೂರಿನ ಕೊಂಬೆಟ್ಟು ಸರಕಾರಿ ಕಾಲೇಜಿನ ಮುಸ್ಲಿಂ ವಿದ್ಯಾರ್ಥಿನಿಯೊಬ್ಬಳು ತನಗೆ ಅದೇ ಕಾಲೇಜಿನ ಹಿಂದೂ ವಿದ್ಯಾರ್ಥಿಯೊಬ್ಬ ಚೂರಿಯಿಂದ ಇರಿದಿರುವುದಾಗಿ ಆರೋಪಿಸಿ ಪುತ್ತೂರು ಸರಕಾರಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾಳೆ. ಆದರೆ ಅವಳ ಕೈಯಲ್ಲಿ ಕೇವಲ ಗೀರಿದ ಗುರುತು ಕಂಡು ಬಂದಿದೆ.

ಆದರೆ ಮಾಹಿತಿ ಪ್ರಕಾರ, ಕೊಂಬೆಟ್ಟು ಕಾಲೇಜಿನಿಂದ ಪುತ್ತೂರು ಮುಖ್ಯ ಆಂಚೆ ಕಚೇರಿಯನ್ನು ಸಂಪರ್ಕಿಸುವ ರಸ್ತೆಯಲ್ಲಿ ಮುಸ್ಲಿಂ ವಿದ್ಯಾರ್ಥಿನಿ ಹಾಗು ಹಿಂದೂ ವಿದ್ಯಾರ್ಥಿಯ ಮಧ್ಯೆ ಕ್ಷುಲ್ಲಕ ವಿಷಯಕ್ಕೆ ಜಗಳವಾಗಿದೆ. ಈ ವೇಳೆ ವಿದ್ಯಾರ್ಥಿಯೂ ವಿದ್ಯಾರ್ಥಿನಿಗೆ ಅವಾಚ್ಯ ಶಬ್ದಗಳಿಂದ ಬೈದಿದ್ದಾನೆ ಎಂದು ಹೇಳಲಾಗುತ್ತಿದೆ. ಅಷ್ಟಕ್ಕೇ ವಿದ್ಯಾರ್ಥಿನಿ ಹೈ ಡ್ರಾಮಾ ಮಾಡಿ ಸರಕಾರಿ ಆಸ್ಪತ್ರೆಯಲ್ಲಿ ಆಡ್ಮಿಟ್ ಆಗಿದ್ದಾಳೆ. ಸದ್ಯ ಪೊಲೀಸರು ಘಟನೆ ನಡೆದ ಸ್ಥಳದ ಸಿಸಿಟಿವಿ ವಿಡಿಯೋ ಪರಿಶೀಲಿಸುತ್ತಿದ್ದು. ಆಕೆಯ ಜತೆಗಿದ್ದ ಬೇರೆ ವಿದ್ಯಾರ್ಥಿಗಳ ಬಳಿಯೂ ಮಾಹಿತಿ ಕಲೆ ಹಾಕುತ್ತಿದ್ದಾರೆ. ಸದ್ಯ ವಿದ್ಯಾರ್ಥಿನಿ ಮಾಡಿದ ಹೈಡ್ರಾಮದ ಕುರಿತು ಪೊಲೀಸ್ ವಿಚಾರಣೆ ನಡೆಯುತ್ತಿದೆ.