Ramanagara : 25ರ ಯುವ ವಕೀಲೆ ನೇಣು ಬಿಗಿದು ಆತ್ಮಹತ್ಯೆ – ಕಾರಣ ನಿಗೂಢ !!

Share the Article

Ramanagara: ಇಂದಿನ ದಿನಗಳಲ್ಲಿ ಆತ್ಮಹತ್ಯೆಯ ಪ್ರಕರಣಗಳು ಯಥೇಚ್ಛವಾಗಿ ದಾಖಲಾಗುತ್ತಿವೆ. ಅಂತೆಯೇ ಇದೀಗ ರಾಮನಗರದಲ್ಲಿ ವಕೀಲೆಯೊಬ್ಬರು (Women lawyer) ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಕಿಗೆ ಬಂದಿದೆ.

ಹೌದು, ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದ ತಿರುಮಲೆ ಶ್ರೀರಂಗ ಬಡಾವಣೆಯಲ್ಲಿ ವಾಸುಕಿ ಎಂಬ 25 ವಕೀಲೆ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈಕೆ ಬೆಂಗಳೂರಿನಲ್ಲಿ (Bengaluru) ಕೆಲಸ ಮಾಡುತ್ತಿದ್ದು ಗುರುವಾರ (ಆ.22) ಸಂಜೆ ಮಾಗಡಿಯ ನಿವಾಸದಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.

ಸದ್ಯ ವಕೀಲೆ ವಾಸುಕಿ ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ. ಮರಣೋತ್ತರ ಪರೀಕ್ಷೆಗಾಗಿ ಮಾಗಡಿ ಸಾರ್ವಜನಿಕ ಆಸ್ಪತ್ರೆಗೆ ಮೃತದೇಹ ರವಾನೆ ಮಾಡಲಾಗಿದ್ದು ಮಾಗಡಿ ಪೊಲೀಸ್ ಠಾಣೆಯಲ್ಲಿ (Magadi Police Station) ಪ್ರಕರಣ ದಾಖಲಾಗಿದೆ.

Leave A Reply