Home News Kannada Board: ಕನ್ನಡದಲ್ಲಿ ನಾಮ ಫಲಕ ಕಡ್ಡಾಯ: ಸರ್ಕಾರದ ಎಲ್ಲಾ ಇಲಾಖೆಗಳು ಕನ್ನಡದಲ್ಲಿ ನಾಮಫಲಕ ಪ್ರದರ್ಶಿಸಲು...

Kannada Board: ಕನ್ನಡದಲ್ಲಿ ನಾಮ ಫಲಕ ಕಡ್ಡಾಯ: ಸರ್ಕಾರದ ಎಲ್ಲಾ ಇಲಾಖೆಗಳು ಕನ್ನಡದಲ್ಲಿ ನಾಮಫಲಕ ಪ್ರದರ್ಶಿಸಲು ಆದೇಶ

Kannada Board

Hindu neighbor gifts plot of land

Hindu neighbour gifts land to Muslim journalist

Kannada Board: ಕರ್ನಾಟಕ ರಾಜ್ಯದಲ್ಲಿ ಇನ್ನು ಮುಂದೆ ಎಲ್ಲಾ ಸರ್ಕಾರಿ ಕಚೇರಿಗಳ ನಾಮಫಲಕ ಕನ್ನಡದಲ್ಲೇ ಇರತಕ್ಕದ್ದು ಎಂಬ ಆದೇಶವನ್ನು ಸರ್ಕಾರದ ‌ಮುಖ್ಯ ಕಾರ್ಯದರ್ಶಿ ಡಾ. ಶಾಲಿನಿ ರಜನೀಶ್ ಹೊರಡಿಸಿದ್ದಾರೆ. ನಮ್ಮ ರಾಜ್ಯದಲ್ಲಿ ಕನ್ನಡವೇ ಆಡಳಿತ ಭಾಷೆಯಾಗಿರ ಬೇಖಾದ್ದು. ರಾಜ್ಯದಲ್ಲಿ ಕನ್ನಡ ಭಾಷೆಯ ಸಮಗ್ರ ಅಭಿವೃದ್ಧಿಗೆ, ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ಹಾಗೂ ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ (ತಿದ್ದುಪಡಿ) ಅಧಿನಿಯಮ, 2024ರಲ್ಲಿ ಜಾರಿಗೆ ತಂದಿದೆ. ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ ಅಧಿನಿಯಮ, 2022 ರನ್ವಯ ಕನ್ನಡ ಭಾಷೆಯು ರಾಜ್ಯದ ಹಾಗೂ ಸ್ಥಳೀಯ ಪ್ರಾಧಿಕಾರದ ಅಧಿಕೃತ ಭಾಷೆಯಾಗಿದೆ.

ಈ ಹಿನ್ನೆಲೆಯಲ್ಲಿ, ಸರ್ಕಾರದ ಎಲ್ಲಾ ಇಲಾಖೆಗಳಲ್ಲಿ ಇಲಾಖೆಗಳ ಅಧೀನದಲ್ಲಿ ಬರುವ ಎಲ್ಲಾ ಕ್ಷೇತ್ರ ಇಲಾಖೆಗಳಲ್ಲಿ, ಆಯುಕ್ತಾಲಯ, ನಿರ್ದೇಶನಾಲಯ, ನಿಗಮ, ಮಂಡಳಿ, ಪ್ರಾಧಿಕಾರಗಳ ಆವರಣಗಳಲ್ಲಿನ ಹೆಸರು, ಪದನಾಮ, ಸೇವಾ ಅವಧಿಯ ನಾಮಫಲಕಗಳು, ಮಾರ್ಗಗಳ ಸೂಚನಾ ಫಲಕಗಳು, ಇನ್ನಿತರೆ ಯಾವುದೇ ನಾಮಫಲಕಗಳನ್ನು ಕಡ್ಡಾಯವಾಗಿ ಕನ್ನಡದಲ್ಲಿಯೇ ಪ್ರದರ್ಶಿಸಬೇಕು ಎಂದು ಮುಖ್ಯ ಕಾರ್ಯದರ್ಶಿಗಳು ಆದೇಶ ನೀಡಿದ್ದಾರೆ.

ಪ್ರಕಟಣೆಯಲ್ಲಿ ಕೆಲವೊಂದು ಮಾರ್ಪಾಡಿಗೆ ಅನುಮತಿ ನೀಡಲಾಗಿದೆ. ತೀರಾ ಅನಿವಾರ್ಯವಾದಲ್ಲಿ ಮಾತ್ರ ಶೇಕಡ 60 ರಷ್ಟು ನಾಮಫಲಕದ ಮೇಲ್ಬಾಗದಲ್ಲಿ ಕಡ್ಡಾಯವಾಗಿ ಕನ್ನಡ ಭಾಷೆಯಲ್ಲಿ ಬರೆಯ ತಕ್ಕದ್ದು. ಶೇಕಡ 40 ರಷ್ಟು ಆಂಗ್ಲಭಾಷೆಯಲ್ಲಿ ಪ್ರದರ್ಶಿಸಲು ಅವಕಾಶವಿದೆ ಎಂದು ಡಾ. ಶಾಲಿನಿ ರಜನೀಶ್ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ.