Home Crime Bengaluru: ಸುಂದರಾಂಗಿಯೇ ಬೇಕೆಂದು ಪ್ರೀತಿಸಿ ಮದುವೆಯಾದ – ಎಲ್ಲಾ ಆದ್ಮೇಲೆ ಕುರ್ಚಿಗೆ ಕಟ್ಟಿ ಚಿತ್ರಹಿಂಸೆ ಕೊಟ್ಟು...

Bengaluru: ಸುಂದರಾಂಗಿಯೇ ಬೇಕೆಂದು ಪ್ರೀತಿಸಿ ಮದುವೆಯಾದ – ಎಲ್ಲಾ ಆದ್ಮೇಲೆ ಕುರ್ಚಿಗೆ ಕಟ್ಟಿ ಚಿತ್ರಹಿಂಸೆ ಕೊಟ್ಟು ಕೊಂದೇ ಬಿಟ್ಟ !!

Hindu neighbor gifts plot of land

Hindu neighbour gifts land to Muslim journalist

Bengaluru: ಮೂರು ವರ್ಷಗಳ ಹಿಂದೆಯಷ್ಟೇ ತನಗೆ ಸುಂದರಾಂಗಿಯೇ ಬೇಕೆಂದು ಅರಸಿ, ಸುಂದರಿಯನ್ನೇ ಪ್ರೀತಿಸಿ (Love) ಮದುವೆಯಾಗಿದ್ದ ಪತ್ನಿಯನ್ನು ಆಕೆಯ ಪತಿಯೇ ಚಿತ್ರಹಿಂಸೆ ಕೊಟ್ಟು ಕೊಂದಿರುವ ಘಟನೆ ಬೆಂಗಳೂರಿ(Bengaluru) ನಲ್ಲಿ ನಡೆದಿದೆ.

ಹೌದು, ಬೆಂಗಳೂರಿನ ಕೆಂಗೇರಿಯ (Kengeri) ವಿಶ್ವೇಶ್ವರಯ್ಯ ಬಡಾವಣೆಯಲ್ಲಿ ಈ ಅಮಾನುಷ ಘಟನೆ ನಡೆದಿದ್ದು, ಕೊಲೆಯಾದವಳನ್ನು ನವ್ಯಾ (25) ಎಂದು ಗುರುತಿಸಲಾಗಿದೆ. ಕಿರಣ್ ಕೊಲೆ ಮಾಡಿದ ಪಾಪಿ ಪತಿ. ಕೊಲೆಯ ಜಾಡು ಹಿಡಿದು ಹೋದಾಗ ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ್ದಾನೆ ಎಂದು ಗೊತ್ತಾಗಿದೆ. ಬುಧವಾರ (ಆ.28) ಮಧ್ಯಾಹ್ನ 1:30 ರಿಂದ 3 ಗಂಟೆ ಸಮಯದಲ್ಲಿ ಕೊಲೆ ನಡೆದಿರುವುದಾಗಿ ಪೊಲೀಸರು (Kengeri Police) ಮಾಹಿತಿ ನೀಡಿದ್ದಾರೆ.

ಅಷ್ಟಕ್ಕೂ ಆಗಿದ್ದೇನು?
ಭದ್ರಾವತಿ ಮೂಲದ ನವ್ಯಾ, ಚಿಕ್ಕಬಳ್ಳಾಪುರ ಮೂಲದ ಕಿರಣ್‌ ಕಳೆದ ಮೂರು ವರ್ಷಗಳ ಹಿಂದೆಯಷ್ಟೇ ಪರಸ್ಪರ ಪ್ರೀತಿಸಿ ಮದುವೆಯಾಗಿದ್ದರು. ಪತಿ ಕಿರಣ್‌ ಕ್ಯಾಬ್ ಚಾಲಕನಾಗಿದ್ದ. ನವ್ಯಾ ಸಿನಿಮಾರಂಗದಲ್ಲಿ ಕೊರಿಯೋಗ್ರಾಫರ್ ಆಗಿ ಕೆಲಸ ಮಾಡುತ್ತಿದ್ದಳು. ಆದರೆ, ಸಿನಿಮಾ ಕ್ಷೇತ್ರದಲ್ಲಿ ಕೆಲಸ ಮಾಡುತ್ತಾ ಸಮಯಕ್ಕೆ ಸರಿಯಾಗಿ ಮನೆಗೆ ಬಾರದ ಹಿನ್ನೆಲೆಯಲ್ಲಿ ನವ್ಯಾ ಜೊತೆಗೆ ಆಗಾಗ್ಗೆ ಜಗಳ ತೆಗೆಯುತ್ತಿದ್ದ, ಶೀಲ ಶಂಕಿಸಿ ಗಲಾಟೆ ಮಾಡ್ತಿದ್ದ.

ಪ್ರೀತಿಸಿ ಮದುವೆ ಮಾಡಿಕೊಂಡ ಗಂಡನೇ ಈಗ ತನ್ನ ಮೇಲೆ ಅನುಮಾನ ಪಡುತ್ತಿದ್ದರೂ, ನವ್ಯಾಗೆ ಮನೆಯವರನ್ನು ಕರೆಸಿ ರಾಜಿ ಪಂಚಾಯಿತಿ ಮಾಡಿ ಎಂದು ಕೇಳುವ ನೈತಿಕತೆ ಉಳಿದಿರಲಿಲ್ಲ. ಆದ್ದರಿಂದ ಗಂಡ ಕಿರಣ್ ತನ್ನ ಶೀಲದ ಬಗ್ಗೆ ಅನುಮಾನ ವ್ಯಕ್ತಪಡಿಸಿ ಗಲಾಟೆ ಮಾಡುತ್ತಿದ್ದರೂ, ಅದನ್ನು ಸಹಿಸಿಕೊಂಡು ಹೊಂದಾಣಿಕೆಯಿಂದ ಹೋಗುತ್ತಿದ್ದಳು. ಆದರೆ ಬುಧವಾರ ಮಧ್ಯಾಹ್ನದ ವೇಳೆ ಇದೇ ವಿಚಾರಕ್ಕೆ ಗಲಾಟೆ ಮಾಡಿರುವ ಕಿರಣ್‌, ನಂತರ ನವ್ಯಾಳನ್ನ ಕುರ್ಚಿಗೆ ಕಟ್ಟಿಹಾಕಿ ಚಿತ್ರಹಿಂಸೆ ಕೊಟ್ಟು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.