PM Modi: ಶಿವಾಜಿ ಪ್ರತಿಮೆ ಕುಸಿತ ಪ್ರಕರಣ – ‘ದೇವರಿಗೆ ತಲೆಬಾಗಿ ವಂದಿಸಿ ಕ್ಷಮೆಯಾಚಿಸುತ್ತೇನೆ’ ಎಂದ ಪ್ರಧಾನಿ ಮೋದಿ

PM Modi: ಮಹಾರಾಷ್ಟ್ರದ(Maharastra) ಕರಾವಳಿ ಸಿಂಧುದುರ್ಗ ಜಿಲ್ಲೆಯಲ್ಲಿ ಕಳೆದ ವರ್ಷ ಪ್ರಧಾನಿ ಮೋದಿ ಉದ್ಘಾಟನೆ ಮಾಡಿದ್ದ ಛತ್ರಪತಿ ಶಿವಾಜಿ ಮಹಾರಾಜ್ ಅವರ ಪ್ರತಿಮೆ(Chatrapati Shivaji Maharaj Statue) ಒಂದು ವರ್ಷದಲ್ಲೇ ಉರುಳಿಬಿದ್ದು ಸಂಚಲನ ಸೃಷ್ಟಿಸಿತ್ತು. ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ(PM Modi) ಅವರು ಶುಕ್ರವಾರ ತಲೆಬಾಗಿ ಕ್ಷಮೆಯಾಚಿಸಿದ್ದಾರೆ.

ಪಾಲ್ಘಾರ್‌ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ಪ್ರಧಾನಿ ಮೋದಿ “ನಾನು ಇಲ್ಲಿಗೆ ಬಂದಿಳಿದ ತಕ್ಷಣ, ಪ್ರತಿಮೆ ಕುಸಿತದ ಬಗ್ಗೆ ನಾನು ಮೊದಲು ಶಿವಾಜಿ ಮಹಾರಾಜರಲ್ಲಿ ಕ್ಷಮೆಯಾಚಿಸಿದ್ದೇನೆ. ಛತ್ರಪತಿ ಶಿವಾಜಿ ಮಹಾರಾಜರು ನಮ್ಮ ಪಾಲಿಗೆ ಕೇವಲ ಒಂದು ಹೆಸರು ಅಥವಾ ರಾಜನಲ್ಲ. ಅವರು ನಮಗೆ ದೇವರು. ಛತ್ರಪತಿ ಶಿವಾಜಿ ಮಹಾರಾಜ್ ಅವರನ್ನು ತಮ್ಮ ದೇವರು ಎಂದು ಪರಿಗಣಿಸಿದವರಿಗೆ ಮತ್ತು ತೀವ್ರ ಘಾಸಿಗೊಂಡವರಿಗೆ ನಾನು ನನ್ನ ಶಿರಬಾಗಿ ಕ್ಷಮೆ ಯಾಚಿಸುತ್ತೇನೆ. ನಮ್ಮ ಮೌಲ್ಯಗಳು ವಿಭಿನ್ನ. ನಮಗೆ ನಮ್ಮ ದೇವರಿಗಿಂತ ದೊಡ್ಡದು ಯಾವುದೂ ಇಲ್ಲ” ಎಂದು ಹೇಳಿದ್ದಾರೆ.

ಏನಿದು ಘಟನೆ?
2023ರ ಡಿಸೆಂಬರ್‌ 4ರಂದು ಭಾರತೀಯ ನೌಕಾಪಡೆಯ ದಿನಾಚರಣೆ ವೇಳೆ ಪ್ರಧಾನಿ ಮೋದಿ ಈ ಭವ್ಯ ಪ್ರತಿಮೆಯನ್ನು ಮೋದಿ ಅನಾವರಣಗೊಳಿಸಿದ್ದರು. ಆದರೆ ಮಾಲ್ವಾನ್‌ನ ರಾಜ್‌ಕೋಟ್ ಕೋಟೆಯಲ್ಲಿನ ಈ 35 ಅಡಿ ಉದ್ದದ ಮರಾಠ ರಾಜನ ಪ್ರತಿಮೆ ಕಳೆದ ಸೋಮವಾರ ಮಧ್ಯಾಹ್ನ 1 ಗಂಟೆ ಸುಮಾರಿಗೆ ಕುಸಿದಿದುಬಿದ್ದಿದೆ. ಹೀಗಾಗಿ ಮೋದಿ ಈ ಕುರಿತು ಕ್ಷಮೆ ಕೇಳಿದ್ದಾರೆ.

Leave A Reply

Your email address will not be published.