Udupi: ಉಡುಪಿ ನೇಜಾರು ಕೊಲೆ ಪ್ರಕರಣ; ತಡೆಯಾಜ್ಞೆ ತೆರವು; ವಿಚಾರಣೆಗೆ ಆದೇಶ

Udupi: ನೇಜಾರು ತಾಯಿ ಮತ್ತು ಮಕ್ಕಳ ಬರ್ಬರ ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ತಡೆಯಾಜ್ಞೆಯನ್ನು ತೆರವುಗೊಳಿಸಿ ಆ.30 ರಂದು ಆದೇಶ ಹೊರಡಿಸಲಾಗಿದೆ.

ಹೈಕೋರ್‌ ನ್ಯಾಯಮೂರ್ತಿ ಮುಹಮ್ಮದ್‌ ನವಾಜ್‌, ಉಡುಪಿಯ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದಲ್ಲಿ ಈ ಪ್ರಕರಣದ ವಿಚಾರಣೆಯಲ್ಲಿ ಮುಂದುವರಿಸಲು ನಿರ್ದೇಶನ ನೀಡಿದ್ದಾರೆ.

ಜಿಲ್ಲಾ ನ್ಯಾಯಾಲಯದಲ್ಲಿ ನಡೆಯುತ್ತಿರುವ ಈ ಪ್ರಕರಣದ ವಿಚಾರಣೆಯನ್ನು ಬೆಂಗಳೂರಿನ ಸೆಷನ್ಸ್‌ ನ್ಯಾಯಾಲಯಕ್ಕೆ ವರ್ಗಾವಣೆ ಮಾಡುವಂತೆ ಪ್ರಕರಣದ ಆರೋಪಿ ಬೆದರಿಕೆ ಇರುವ ಕಾರಣ ಅರ್ಜಿ ಸಲ್ಲಿಕೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ ಉಡುಪಿ ನ್ಯಾಯಾಲಯದಲ್ಲಿ ನಡೆಯುತ್ತಿರುವ ಈ ಪ್ರಕರಣದ ವಿಚಾರಣೆಗೆ ತಡೆಯಾಜ್ಞೆ ನೀಡಿತ್ತು.

ಇದೀಗ ಈ ತಡೆಯಾಜ್ಞೆಯನ್ನು ಹೈಕೋರ್ಟ್‌ ತೆರವುಗೊಳಿಸಿದ್ದು, ವಿಚಾರಣೆಯನ್ನು ಮುಂದುವರಿಸಲು ಉಡುಪಿ ಜಿಲ್ಲಾ ನ್ಯಾಯಾಲಯಕ್ಕೆ ಅನುಮತಿ ನೀಡಿ ಆದೇಶ ನೀಡಲಾಗಿದೆ.

ಉಡುಪಿಯ ಹಿರಿಯಡ್ಕ ಜೈಲಿನಿಂದ ಬೆಂಗಳೂರು ಸೆಂಟ್ರಲ್‌ ಜೈಲಿಗೆ ಜೀವ ಬೆದರಿಕೆಯ ಕಾರಣದಿಂದ ಈಗಾಗಲೇ ವರ್ಗಾವಣೆ ಮಾಡಲಾಗಿದೆ. ಆರೋಪಿ ಈಗ ಬೆಂಗಳೂರಿನ ಕೇಂದ್ರ ಕಾರಾಗೃಹದಲ್ಲಿದ್ದಾನೆ. ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸುವಾಗ ಜೀವ ಬೆದರಿಕೆ ಎದುರಾಗುತ್ತದೆ ಎಂಬ ತಪ್ಪು ಗ್ರಹಿಕೆ ಮಾಡಲಾಗಿದೆ. ಈ ಕಾರಣದಿಂದ ನ್ಯಾಯಾಲಯದ ವಿಚಾರಣೆಯನ್ನು ತಡೆಹಿಡಿಯಲು ಆಗುವುದಿಲ್ಲ. ವಿಡಿಯೋ ಕಾನ್ಫೆರೆನ್ಸ್‌ ಮೂಲಕ ಕೂಡಾ ಆರೋಪಿಯನ್ನು ಜಿಲ್ಲಾ ನ್ಯಾಯಾಲಯಕ್ಕೆ ಹಾಜರುಪಡಿಸಬಹುದು ಎಂದು ವರದಿಯಾಗಿದೆ.

Leave A Reply

Your email address will not be published.