ಶನಿವಾರ, 24 ಅಕ್ಟೋಬರ್ 2026

BPL Card: ಬಿಪಿಎಲ್‌ ಕಾರ್ಡ್‌ದಾರರಿಗೆ ಗುಡ್‌ನ್ಯೂಸ್‌

BPL Card: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನಗದು ಬದಲಿಗೆ ಕಿಟ್‌ ವಿತರಿಸಲು ರಾಜ್ಯ ಸರಕಾರ ನಿರ್ಧಾರ ಮಾಡಿದೆ. ಈ ವ್ಯವಸ್ಥೆ ಅಕ್ಟೋಬರ್‌ ತಿಂಗಳಿಂದ ಜಾರಿಗೆ ಬರಲಿದೆ.

APL-BPL Card

BPL Card: ಅನ್ನಭಾಗ್ಯ ಯೋಜನೆಯಡಿ ಫಲಾನುಭವಿಗಳಿಗೆ ನಗದು ಬದಲಿಗೆ ಕಿಟ್‌ ವಿತರಿಸಲು ರಾಜ್ಯ ಸರಕಾರ ನಿರ್ಧಾರ ಮಾಡಿದೆ. ಈ ವ್ಯವಸ್ಥೆ ಅಕ್ಟೋಬರ್‌ ತಿಂಗಳಿಂದ ಜಾರಿಗೆ ಬರಲಿದೆ. ಹಾಗಾಗಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಅಕ್ಕಿಯ ಜೊತೆ ಅಡುಗೆ ಎಣ್ಣೆ, ಬೇಳೆ, ಸಕ್ಕರೆ ಸಿಗಲಿದೆ.

ಬಿಪಿಎಲ್‌ ಕಾರ್ಡ್‌ ಫಲಾನುಭವಿಗಳಿಗೆ 5 ಕೆಜಿ ಅಕ್ಕಿಯ ಜೊತೆಗೆ 170 ರೂ. ಡಿಬಿಟಿ ಮೂಲಕ ಪಾವತಿ ಮಾಡಲಾಗುತ್ತಿದೆ. ಹಾಗಾಗಿ ಮುಂದಿನ ತಿಂಗಳಿನಿಂದ 5 ಕೆಜಿ ಅಕ್ಕಿ ಜೊತೆಗೆ ಬೇಳೆ, ಅಡುಗೆ ಎಣ್ಣೆ, ಸಕ್ಕರೆ ಜೊತೆಗೆ ಇತರ ಸಾಮಾಗ್ರಿಗಳಿರುವ ಫುಡ್‌ ಕಿಟ್‌ ವಿತರಿಸಲು ನಿರ್ಧಾರ ಮಾಡಲಾಗಿದೆ.

ಆಹಾರ ಇಲಾಖೆ ಈ ಕುರಿತು ಸಿದ್ಧತೆ ಮಾಡುತ್ತಿದೆ. ಗುರುವಾರ ಸಿಎಂ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಈ ಕುರಿತ ಪ್ರಸ್ತಾವನೆಗೆ ಅನುಮೋದನೆ ದೊರೆಯುವ ಸಾಧ್ಯತೆ ಇದೆ.

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ