Gurukiran: ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಪ್ರಶಸ್ತಿ

Share the Article

Gurukiran: ಚಲನಚಿತ್ರ ಸಂಗೀತ ಕ್ಷೇತ್ರದಲ್ಲಿನ ಅದ್ವಿತೀಯ ಸಾಧನೆಯನ್ನು ಗುರುತಿಸಿ ಬೆಂಗಳೂರು ವಿಶ್ವವಿದ್ಯಾನಿಲಯವು ಕರಾವಳಿ ಮೂಲದ ಹೆಸರಾಂತ ಸಂಗೀತ ನಿರ್ದೇಶಕ ಗುರುಕಿರಣ್ (Gurukiran) ಅವರಿಗೆ ಗೌರವ ಡಾಕ್ಟರೇಟ್ ಘೋಷಣೆ ಮಾಡಿದೆ.

ಸದ್ಯ ಬೆಂಗಳೂರು ವಿಶ್ವವಿದ್ಯಾನಿಲಯದಿಂದ ಸೆಪ್ಟೆಂಬ‌ರ್ 10 ರಂದು ಗೌರವ ಡಾಕ್ಟರೇಟ್ ಗುರುಕಿರಣ್ ಅವರಿಗೆ ನೀಡಿ ಗೌರವಿಸಲಿದೆ ಎಂಬ ಮಾಹಿತಿ ಲಭ್ಯವಾಗಿದೆ. ಕನ್ನಡ ಚಿತ್ರರಂಗದ ಸಂಗೀತ ಕ್ಷೇತ್ರದಲ್ಲಿ ಸಾಧನೆ ಮಾಡಿರುವ ಗುರುಕಿರಣ್‌ ಇನ್ನು ಮುಂದೆ ಡಾಕ್ಟರ್ ಗುರುಕಿರಣ್‌ ಆಗಲಿದ್ದು, ಅಭಿಮಾನಿಗಳಿಗೆ ಸಂತಸ ತಂದಿದೆ.

ಗುರುಕಿರಣ್ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ದೊರೆತ ಗೌರವ ನನ್ನ ಮೇಲಿನ ಜವಾಬ್ದಾರಿಯನ್ನು ಹೆಚ್ಚಿಸಿದೆ’ ಎಂದು ಗುರುಕಿರಣ್ ಪ್ರತಿಕ್ರಿಯಿಸಿದ್ದಾರೆ.

Leave A Reply