Actor Darshan: ಕೊನೆಗೂ ದರ್ಶನ್ ಮನವಿಗೆ ಒಪ್ಪಿದ ಹೈಕೋರ್ಟ್; ಮಾಧ್ಯಮಗಳಿಗೆ ನಿರ್ಬಂಧ
Actor darshan: ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ, ಹಾಗೂ ಮಾಧ್ಯಮದಲ್ಲಿ ಈ ಕೇಸ್ ಸಂಬಂಧ ಪಟ್ಟಂತೆ ಹಲವು ಗೊಂದಲ ಸೃಷ್ಟಿ ಆಗಿದೆ.
ಅಲ್ಲದೆ ಪೊಲೀಸರು ಈಗಾಗಲೇ ತನಿಖೆಯನ್ನು ಪೂರ್ಣಗೊಳಿಸಿದ್ದು, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದಾರೆ. ಸದ್ಯ ಚಾರ್ಜ್ಶೀಟ್ನಲ್ಲಿ ಕೊಲೆಯ ಬಗೆಗಿನ ಮಾಹಿತಿ, ಸಾಕ್ಷ್ಯಗಳು ಸೇರಿದಂತೆ ಹಲವು ಅಂಶಗಳನ್ನು ಉಲ್ಲೇಖಿಸಲಾಗಿದ್ದು ಈ ಮಾಹಿತಿ ಕೂಡಾ ಸಾಮಾಜಿಕ ಜಾಲತಾಣಗಳಲ್ಲಿ ವರದಿ ಆಗುತ್ತಲೇ ಇವೆ.
ಈ ಬಗ್ಗೆ ಸೋಮವಾರ ನಟ ದರ್ಶನ್ (Actor darshan) ಪರ ವಕೀಲರು ಚಾರ್ಜ್ಶೀಟ್ನಲ್ಲಿದ್ದ ಮಾಹಿತಿ ಸೋರಿಕೆಯಾಗಿದ್ದು, ಅವುಗಳ ಪ್ರಸಾರಕ್ಕೆ ತಡೆ ಕೊಡಬೇಕು ಎಂದು ಹೈಕೋರ್ಟ್ಗೆ ರಿಟ್ ಅರ್ಜಿ ಸಲ್ಲಸಿದ್ದರು. ಈ ಕುರಿತು ಇಂದು ಆದೇಶವನ್ನು ಪ್ರಕಟಿಸಿದ್ದು, ದರ್ಶನ್ ಮನವಿಯನ್ನು ಪುರಸ್ಕರಿಸಿ ಮಾಧ್ಯಮಗಳ ಮೇಲೆ ನಿರ್ಬಂಧ ವಿಧಿಸಿದೆ.
ಹೇಮಂತ್ ಚಂದನ್ ಗೌಡರ್ ಅವರಿದ್ದ ಏಕಸದಸ್ಯ ಪೀಠವು ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಸಲ್ಲಿರುವ ಚಾರ್ಜ್ಶೀಟ್ನಲ್ಲಿರುವ ಗೌಪ್ಯ ಮಾಹಿತಿಯನ್ನು ಪ್ರಸಾರ, ಪ್ರಕಟ ಅಥವಾ ಹಂಚಿಕೆ ಮಾಡದಂತೆ ವಿದ್ಯುನ್ಮಾನ, ಮುದ್ರಣ & ಸಾಮಾಜಿಕ ಮಾಧ್ಯಮಗಳಿಗೆ ಹೈಕೋರ್ಟ್ ನಿರ್ಬಂಧ ವಿಧಿಸಿ ಆದೇಶಿಸಿದೆ.
ಒಂದು ವೇಳೆ ನ್ಯಾಯಾಲಯದ ಆದೇಶ ಉಲ್ಲಂಘನೆ ಮಾಡಿದರೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕೇಂದ್ರ ಮಾಹಿತಿ ಮತ್ತು ಪ್ರಸಾರ ಇಲಾಖೆಗೆ ಹೈಕೋರ್ಟ್ ನಿರ್ದೇಶನ ಕೊಟ್ಟಿದೆ. ಈ ಆದೇಶವನ್ನು ಪ್ರತಿವಾದಿ ಮಾಧ್ಯಮಗಳಿಗೆ ರವಾನಿಸಲು ಕೇಂದ್ರ ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ.