Women CM: ಮುಂದಿನ CM ಯೋಗ ಒಬ್ಬ ಮಹಿಳೆಗೆ: ಕೋಡಿಶ್ರೀ ಭವಿಷ್ಯ ನುಡಿಗೆ ಲಕ್ಷ್ಮೀ ಹೆಬ್ಬಾಳ್ಕರ್ ಹೇಳಿದ್ದೇನು?

Share the Article

Women CM: ರಾಜ್ಯದಲ್ಲಿ ಮುಡಾ ಹಗರಣ ದಲ್ಲಿ ಸಿಲುಕಿರುವ ಸಿಎಂ ಸಿದ್ದರಾಮಯ್ಯ ಬದಲಾವಣೆಗೆ ವಿರೋಧ ಪಕ್ಷಗಳು ಆಗ್ರಹಿಸುತ್ತಾ ಬಂದಿದ್ದು, ಇದರ ಬೆನ್ನಲ್ಲೆ ಆಗಸ್ಟ್ ತಿಂಗಳಲ್ಲಿ ಮಾತನಾಡಿದ್ದ ಕೋಡಿಮಠದ ಶಿವಾನಂದ ಶಿವಯೋಗಿ ಸ್ವಾಮೀಜಿಗಳು, ರಾಜ್ಯದಲ್ಲಿ ಮುಂದಿನ ಸಿಎಂ ಮಹಿಳೆ (Women CM) ಆಗುತ್ತಾರೆ ಎಂದು ಭವಿಷ್ಯ ನುಡಿದಿದ್ದರು.

ಸಾಮಾನ್ಯವಾಗಿ ಕೋಡಿ ಶ್ರೀಗಳ ಭವಿಷ್ಯ ಹೆಚ್ಚಾಗಿ ನಿಜವಾಗುತ್ತದೆ. ಆದಕಾರಣ ಕೋಡಿಮಠದ ಶ್ರೀಗಳು ನೀಡಿರುವ ಹೇಳಿಕೆಯನ್ನು ಟ್ಯಾಗ್ ಮಾಡುತ್ತಿರುವ ಲಕ್ಷ್ಮೀ ಹೆಬ್ಬಾಳ್ಕರ್ ಬೆಂಬಲಿಗರು, ರಾಜ್ಯಕ್ಕೆ ಮಹಿಳಾ ಸಿಎಂ ನಮ್ಮ ಬೆಳಗಾವಿ ಚೆನ್ನಮ್ಮ, ಮುಂದಿನ ಸಿಎಂ ಬೆಳಗಾವಿಯ ಲಕ್ಷ್ಮೀ ಅಕ್ಕಾ ಎಂದು ಪೋಸ್ಟ್ ಮಾಡುತ್ತಿದ್ದಾರೆ.

ಆದ್ರೆ ಈ ನಡುವೆ ಕೋಡಿಶ್ರೀಗಳ ಭವಿಷ್ಯ ಕುರಿತು ಪ್ರತಿಕ್ರಿಯೆ ನೀಡಿರುವ ಲಕ್ಷ್ಮೀ ಹೆಬ್ಬಾಳ್ಕರ್ ಅವರು, ಮುಡಾ ಹಗರಣ ಬಗ್ಗೆ ಸುಳ್ಳು ದಾಖಲೆ ಕೊಟ್ಟು ಬಿಜೆಪಿಯವರು ಮೋಸದ ಹುನ್ನಾರ ಮಾಡುತ್ತಿದ್ದಾರೆ. ಈ ವಿಚಾರವಾಗಿ ನಾನು ಏನೂ ಮಾತನಾಡಲ್ಲ, ಪಕ್ಷದಲ್ಲಿ ಹೈಕಮಾಂಡ್, ಶಾಸಕಾಂಗ ಅಂತ ಇದೆ. ಇದು ಗಲ್ಲಿಯಲ್ಲಿ ಮಾತನಾಡುವ ವಿಚಾರ ಅಲ್ಲ ಎಂದು ಹೇಳಿದ್ದಾರೆ.

Leave A Reply