Mangaluru: ಈದ್ ಮಿಲಾದ್ ದಿನ ಮಸೀದಿ ಮೇಲೆ ಕಲ್ಲು ತೂರಾಟ – ಮಂಗಳೂರಿನ ಆರು ಮಂದಿ ಬಂಧನ !!
Mangaluru ಹೊರವಲಯದ ಸುರತ್ಕಲ್ ಕಾಟಿಪಳ್ಳ 3ನೆ ಬ್ಲಾಕ್ ನಲ್ಲಿರುವ ಬದ್ರಿಯಾ ಜುಮಾ ಮಸೀದಿ(Badriya Juma mosque)ಗೆ ದುಷ್ಕರ್ಮಿಗಳು ಭಾನುವಾರ(ಸೆ.15) ರಾತ್ರಿ 11ರ ಸುಮಾರಿಗೆ ಕಲ್ಲು ತೂರಾಟ ನಡೆಸಿ ವಿಕೃತಿ ಮೆರಿದಿದ್ದರು. ಈ ಆರೋಪದ ಮೇಲೆ ಆರು ಮಂದಿಯನ್ನು ಮಂಗಳೂರು ನಗರ ಪೊಲೀಸರು ಸೋಮವಾರ ಬಂಧಿಸಿದ್ದಾರೆ.
ಹೌದು, ಸುರತ್ಕಲ್‌ನ ಕಾನಕಟ್ಲ ನಿವಾಸಿ ಭರತ್ ಶೆಟ್ಟಿ(26), ಸುರತ್ಕಲ್‌ನ ಕಾನಕಟ್ಲ ನಿವಾಸಿ ಚೆನ್ನಪ್ಪ ಶಿವಾನಂದ ಚಲವಾದಿ(19), ನಿತಿನ್ ಹಡಪದ(22), ಸುರತ್ಕಲ್‌ನ ಚೇಳಾರು ನಿವಾಸಿ ಸುಜಿತ್ ಶೆಟ್ಟಿ(23) ವರ್ಷ, ಹೊಸಬೆಟ್ಟು ಗ್ರಾಮದ ಅಣ್ಣಪ್ಪ(24) ಮತ್ತು ಕಾಟಿಪಳ್ಳದ ಪ್ರೀತಂ ಶೆಟ್ಟಿ(34) ಬಂಧಿತ ಆರೋಪಿಗಳು.
ಕಾಟಿಪಳ್ಳದ 3ನೇ ಬ್ಲಾಕ್‌ನಲ್ಲಿರುವ ಮಜಿದುಲ್ಲಾ ಹುದಾಜುಮ್ಮ ಮಸೀದಿಯ ಅಧ್ಯಕ್ಷ ಕೆ ಎಚ್ ಅಬ್ದುಲ್ ರಹಿಮಾನ್ ನೀಡಿದ ದೂರಿನ ಪ್ರಕಾರ, ನಿನ್ನೆ ರಾತ್ರಿ 9.50ರ ಸುಮಾರಿಗೆ ಮಸೀದಿಯ ಹಿಂಬದಿಯ ಜನತಾ ಕಾಲೋನಿಯ ಸಮಾಧಿ ಕಡೆಯಿಂದ ಎರಡು ಬೈಕ್‌ಗಳಲ್ಲಿ ಆಗಮಿಸಿದ ದುಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿದ್ದರು. ಎರಡು ಬೈಕ್ ಗಳಲ್ಲಿ ಬಂದ ನಾಲ್ಕು ಮಂದಿ ದುಷ್ಕರ್ಮಿಗಳು ಮಸೀದಿಗೆ ಕಲ್ಲು ತೂರಾಟ ನಡೆಸಿ ಪರಾರಿಯಾಗಿದ್ದರು. ಇದರಿಂದ ಮಸೀದಿಯ ಕಿಟಕಿಗಳಿಗೆ ಹಾನಿಯಾಗಿತ್ತು.
ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು, ಇನ್ಸ್ ಪೆಕ್ಟರ್ ಮಹೇಶ್ ಪ್ರಸಾದ್ ನೇತೃತ್ವದಲ್ಲಿ ಆರೋಪಿಗಳ ಪತ್ತೆಗೆ ವಿಶೇಷ ತಂಡ ರಚಿಸಿದ್ದರು. ನಿನ್ನೆ ಬೆಳಗ್ಗೆ ಕದ್ರಿ ಮಂಜುನಾಥ ದೇವಸ್ಥಾನದ ರಸ್ತೆ ಬಳಿ ಆರೋಪಿಗಳನ್ನು ಬಂಧಿಸಲಾಗಿದೆ.