Muniratna: ಬಿಜೆಪಿ ಶಾಸಕ ಮುನಿರತ್ನಗೆ ನ್ಯಾಯಾಂಗ ಬಂಧನ: ಜಾಮೀನು ಅರ್ಜಿ ಅರ್ಜಿ ವಿಚಾರಣೆ ವಜಾ
Muniratna: ಬಿಜೆಪಿ ಶಾಸಕ ಮುನಿರತ್ನ (Muniratna) ಅವರನ್ನು ಈಗಾಗಲೇ ಲಂಚ ಹಾಗೂ ಜಾತಿ ನಿಂದನೆ ಆರೋಪದ ಅಡಿ ದಾಖಲಾಗಿದ್ದ ಪ್ರಕರಣ ಸಂಬಂಧ ಮುನಿರತ್ನ ಅವರನ್ನು ಕೋಲಾರ ಜಿಲ್ಲೆ ಮುಳಬಾಗಿಲು ತಾಲೂಕಿನ ನಂಗಲಿ ಎಂಬಲ್ಲಿ ವೈಯ್ಯಾಲಿಕಾವಲ್ ಪೊಲೀಸರು ಶನಿವಾರ ವಶಕ್ಕೆ ಪಡೆದು, ಬಂಧಿಸಿದ್ದರು.
ನಂತರ ಬಂಧನಕ್ಕೊಳಗಾಗಿದ್ದ ಮುನಿರತ್ನರನ್ನು ಎರಡು ದಿನ ಪೊಲೀಸರ ವಶಕ್ಕೆ ನೀಡಿ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ಭಾನುವಾರ ಆದೇಶಿಸಿತ್ತು. ಈ ಕುರಿತು ಇದೀಗ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು (ಸೆ 17) ಆದೇಶ ಹೊರಡಿಸಿದೆ.
ಹಿರಿಯ ವಕೀಲ ಅಶೋಕ್ ಹಾರ್ನಳ್ಳಿ ಅವರು ಬಿಜೆಪಿ ಶಾಸಕ ಮುನಿರತ್ನ ಪರವಾಗಿ ವಾದ ಮಂಡಿಸಿದ್ದು, ಪ್ರಕರಣದ ವಿಚಾರಣೆ ನಡೆಸಿದ ಕೋರ್ಟ್, ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿದೆ. ಸದ್ಯ ಜಾಮೀನು ವಿಚಾರಣೆಯನ್ನು ನಾಳೆಗೆ (ಬುಧವಾರ) ಮುಂದೂಡಿದೆ ಎಂದು ತಿಳಿದು ಬಂದಿದೆ.