Drug Trafficking: ಪೇನ್ ಕಿಲ್ಲರ್ ಮಾತ್ರೆಗಳ ದಂಧೆ, ನಿಯಂತ್ರಣಕ್ಕೆ ಕ್ರಮ: ಡಾ. ಜಿ.ಪರಮೇಶ್ವರ್
Drug Trafficking: ಹಿಂದಿನ ವರ್ಷಗಳಿಗೆ ಹೋಲಿಸಿದರೆ, ರಾಜ್ಯದಲ್ಲಿ ಡ್ರಗ್ಸ್ ದಂಧೆಯನ್ನು (Drug Trafficking) ತೀವ್ರ ಹತೋಟಿಗೆ ತಂದಿದ್ದೇವೆ. ಪ್ರಕರಣಗಳ ಸಂಖ್ಯೆ ಕಡಿಮೆಯಾಗಿವೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ (G Parameshwar) ತಿಳಿಸಿದ್ದಾರೆ.
ಅಲ್ಲದೇ ಸುದ್ದಿಗಾರರೊಂದಿಗೆ ಮಾತನಾಡಿದ ಪರಮೇಶ್ವರ್ ಅವರು, ಡ್ರಗ್ಸ್ ದಂಧೆಯನ್ನು ಹತ್ತಿಕ್ಕಲು ಸಾಕಷ್ಟು ಪ್ರಯತ್ನ ಮಾಡಿದ್ದೇವೆ. ಈಗ ಮೆಡಿಕಲ್ ಶಾಪ್‌ಗಳಲ್ಲಿ ಸಿಗುತ್ತಿರುವ ನೋವು ನಿವಾರಕ ಮಾತ್ರೆಗಳಿಂದ (Pain Killer Tablets) ನಮಗೆ ಆತಂಕವಿದೆ. ಇದೊಂದು ದಂಧೆ ತರ ಮಾರ್ಪಟ್ಟಿದೆ. ಪೇನ್ ಕಿಲ್ಲರ್ ಮಾತ್ರೆಗಳನ್ನು ಬೇರೆಬೇರೆ ಕಂಪನಿಗಳು ತಯಾರಿಸುತ್ತಿವೆ. ಅದು ಈಗ ಸುಲಭವಾಗಿ ಕೈಗೆ ಸಿಗುತ್ತಿವೆ. ಯಾವ ರೀತಿ ನಿಯಂತ್ರಿಸಬೇಕು ಎಂಬುದರ ಕುರಿತು ಚರ್ಚಿಸಲು ಮುಖ್ಯಮಂತ್ರಿಯವರು ಸಭೆ ಕರೆದಿದ್ದಾರೆ ಎಂದು ತಿಳಿಸಿದರು.
ಇನ್ನು ನೋವು ನಿವಾರಕ ಮಾತ್ರೆಗಳನ್ನು ಮೆಡಿಸಿನ್ ಅಂತ ಮಾರಾಟ ಮಾಡಲಾಗುತ್ತಿದೆ. ವೈದ್ಯರು ಪ್ರಿಸ್‌ಕ್ರೈಬ್ ಮಾಡಿರುವುದನ್ನು ಸುಲಭವಾಗಿ ಪಡೆಯಲಾಗುತ್ತಿದೆ. ಆದ್ರೆ ಇದಕ್ಕೆ ಕಾನೂನು ಬೇರೆ ಇದೆ. ಈ ಕುರಿತು ಡ್ರಗ್ ಕಂಟ್ರೋಲರ್ಸ್‌ಗಳಿಗೆ ಯಾವ ರೀತಿ ಹೇಳಬೇಕಾಗುತ್ತದೆ ಎಂಬುದರ ಕುರಿತು ಚರ್ಚಿಸಲಾಗುವುದು ಎಂದರು.