Mangaluru: ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಜೈನರ ಆಕ್ರೋಶ – ಮನೆಗೆ ನುಗ್ಗುವುದಾಗಿ ಎಚ್ಚರಿಕೆ

Mangaluru: ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟು ಮಾಡಿ ಅಪಮಾನಗೊಳಿಸಿ ಗಲಭೆಗೆ ಹುನ್ನಾರ ನಡೆಸುತ್ತಿರುವ, ರಾಷ್ಟ್ರೀಯ ಸಮಗ್ರತೆಗೆ ಬಾಧಕವಾಗುವ ಅಪರಾಧವನ್ನು ಎಸಗುತ್ತಿದ್ದಾರೆಂದು ಆರೋಪಿಸಿ ಮಹೇಶ್ ಶೆಟ್ಟಿ ತಿಮರೋಡಿ(Mahesh Shetty Timarodi) ವಿರುದ್ಧ ಜೈನರು ಆಕ್ರೋಶ ವ್ಯಕ್ತಪಡಿಸಿ, ಪ್ರತಿಭಟನೆ ನಡೆಸಿದ್ದು ಮನೆಗೆ ನುಗ್ಗುವುದಾಗಿ ಎಚ್ಚರಿಕೆ ನೀಡಿದ್ದಾರೆ.

ಹೌದು, ಬೆಳ್ತಂಗಡಿಯಲ್ಲಿ(Belthangady) ನಡೆದ ಗಣೇಶೋತ್ಸವದಲ್ಲಿ ಮಹೇಶ್ ಶೆಟ್ಟಿ ತಿಮರೋಡಿ ಅವರು ಜೈನ್ ಸಮುದಾಯವನ್ನು ನಿಂದಿಸಿದ್ದಾರೆ ಎಂದು ಆರೋಪಿಸಿ ಭಾರತೀಯ ಜೈನ್ ಮಿಲನ್ ನೇತೃತ್ವದಲ್ಲಿ ಬುಧವಾರ ಮಂಗಳೂರಿನ ಮಿನಿ ವಿಧಾನಸೌಧ ಎದುರು ನಡೆದ ಜೈನ್ ಸಮುದಾಯದ ಬೃಹತ್ ಪ್ರತಿಭಟನೆ ನಡೆಯಿತು. ಅಲ್ಲದೆ ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಕೇಸು ದಾಖಲಿಸಿ ಕಾನೂನು ಕ್ರಮ ಕೈಗೊಳ್ಳುವಂತೆ ಮಂಗಳೂರಿನ ಭಾರತೀಯ ಜೈನ್ ಮಿಲನ್ ಸಂಘಟನೆ ಪೊಲೀಸ್ ಇಲಾಖೆ ಹಾಗೂ ರಾಜ್ಯ ಸರ್ಕಾರವನ್ನು ಒತ್ತಾಯಿಸಿದೆ.

ನಗರದ ಕ್ಲಾಕ್ ಟವರ್ ಮುಂಭಾಗದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದ ಜೈನ್ ಮಿಲನ್ ವಲಯಾಧ್ಯಕ್ಷ ಸುದರ್ಶನ್ ಜೈನ್ ಅವರು, ಶಾಂತಿ ಕದಡುವಂತಹ ವ್ಯಕ್ತಿಗಳನ್ನು ಪೊಲೀಸರು ಬಂಧಿಸಬೇಕು. ಧರ್ಮ ಧರ್ಮಗಳ ಮಧ್ಯೆ ಮೈನಸು ಮೂಡಿಸುವಂತಹ ಕುಕುತ್ಯವನ್ನು ಮಾಡಿರೋದು ಕಾನೂನು ರೀತಿಯ ಅಪರಾಧವಾಗಿದೆ. ಹಾಗಾಗಿ ಪೊಲೀಸರು ಇಂತಹ ವ್ಯಕ್ತಿಗಳ ವಿರುದ್ಧ ಕಠಿಣ ಕ್ರಮತೆಗೆದುಕೊಳ್ಳಬೇಕೆಂದರು.

ಬಳಿಕ ಮಾತನಾಡಿದ ಮಾಜಿ ಅಧ್ಯಕ್ಷ ಪುಷ್ಪರಾಜ್ ಜೈನ್ ಅವರು ‘ತಿಮರೋಡಿ ವಿರುದ್ಧ ಬೆಳ್ತಂಗಡಿ ಸೇರಿದಂತೆ ವಿವಿಧ ಭಾಷೆಗಳಲ್ಲಿ ದೂರು ನೀಡಿದ್ರೂ ಪೊಲೀಸರು ಕಾನೂನು ಕ್ರಮ ಕೈಗೊಳ್ಳದೇ ಇರುವುದು ದುರಾದೃಷ್ಟಕರವಾಗಿದೆ. ಮುಂದಿನ ದಿನಗಳಲ್ಲಿ ಇಂತಹ ಹೇಳಿಕೆ ನೀಡಿದ್ರೆ, ಹಿಂದೂ ಮುಖಂಡರು ಹಾಗೂ ಜೈನ್ ಸಮುದಾಯದ ನೇತೃತ್ವದಲ್ಲಿ ಮನೆಗೆ ನುಗ್ಗುವ ಅನಿವಾರ್ಯ ಬರಬಹುದು ಎಂದು ಎಚ್ಚರಿಕೆ ನೀಡಿದರು.

Leave A Reply

Your email address will not be published.