Home News C M Siddaramaiah: ‘ಒಂದು ದೇಶ, ಒಂದು ಚುನಾವಣೆ ಜಾರಿಯಾಗಬೇಕಾದ್ರೆ ಮೊದಲು ಇವೆಲ್ಲವೂ ಆಗಬೇಕು’ ಎಂದ...

C M Siddaramaiah: ‘ಒಂದು ದೇಶ, ಒಂದು ಚುನಾವಣೆ ಜಾರಿಯಾಗಬೇಕಾದ್ರೆ ಮೊದಲು ಇವೆಲ್ಲವೂ ಆಗಬೇಕು’ ಎಂದ ಸಿಎಂ ಸಿದ್ದರಾಮಯ್ಯ – ಏನದು?

Hindu neighbor gifts plot of land

Hindu neighbour gifts land to Muslim journalist

C M Siddaramaiah: ಪ್ರಧಾನಿ ನರೇಂದ್ರ ಮೋದಿ(PM Modi) ಸರ್ಕಾರದ ಕೆಲವು ಮಹತ್ವಾಕಾಂಕ್ಷಿ ಯೋಜನೆಗಳಲ್ಲಿ ‘ಒನ್ ನೇಷನ್-ಒನ್ ಎಲೆಕ್ಷನ್’ ಯೋಜನೆ ತುಂಬಾ ಪ್ರಮುಖವಾದುದು. ಇದೀಗ ಕೇಂದ್ರ ಗೃಹ ಸಚಿವ ಅಮಿತ್ ಶಾ(Amitj Shah) ಅವರು ‘ಒನ್ ನೇಷನ್-ಒನ್ ಎಲೆಕ್ಷನ್’ ಜಾರಿ ಬಗ್ಗೆ ಬಿಗ್ಅಪ್ಡೇಟ್ ನೀಡಿದ್ದು ಎನ್ ಡಿಎ(NDA) ಸರ್ಕಾರದ 3ನೇ ಅವಧಿಯಲ್ಲೇ ಒಂದು ದೇಶ ಒಂದು ಚುನಾವಣೆ ನೀತಿ ಜಾರಿಗೆ ತರಲಾಗುವುದು. ಇದಕ್ಕೆ ಎಲ್ಲ ಮೈತ್ರಿ ಪಕ್ಷಗಳ ಬೆಂಬಲ ಇದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸ್ಪಷ್ಟಪಡಿಸಿದ್ದಾರೆ.

ಅಲ್ಲದೆ ನಿನ್ನೆ ನಡೆದ ಕೇಂದ್ರ ಸಚಿವ ಸಂಪುಟದಲ್ಲಿ ಈ ‘ಒಂದು ದೇಶ-ಒಂದು ಚುನಾವಣೆಗೆ’ ಅನುಮೋದನೆಯೂ ದೊರೆತಿದೆ. ಈ ಬೆನ್ನಲ್ಲೇ ಕೇಂದ್ರದ ನಡೆಗೆ ವಿರೋಧ ಪಕ್ಷಗಳು ಭಾರೀ ವಿರೋಧ ವ್ಯಕ್ತಪಡಿಸಿವೆ. ಈ ಯೋಜನೆ ಜಾರಿಯಾಗಲು ಸಾಧ್ಯವೇ ಇಲ್ಲ ಎಂದು ಕಟುವಾಗಿ ಟೀಕಿಸಿವೆ. ಅಂತೆಯೇ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ಕೂಡ ಈ ಯೋಜನೆಯನ್ನು ಲೇವಡಿ ಮಾಡಿದ್ದು, ಇದು ಜಾರಿಯಾಗಬೇಕಾದರೆ ಏನೆಲ್ಲಾ ಆಗಬೇಕು ಎಂಬುದರ ಬಗ್ಗೆ ಮಾತನಾಡಿದ್ದಾರೆ.

ಹೌದು, ಇಡೀ ದೇಶದಲ್ಲಿ ಒಂದೇ ಬಾರಿ ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳನ್ನು ನಡೆಸುವ ಶಕ್ತಿ-ಸಾಮರ್ಥ್ಯ ನಮ್ಮ ಈಗ ಇರುವ ಚುನಾವಣಾ ಆಯೋಗಕ್ಕೆ ಇಲ್ಲ. ಇದಕ್ಕಾಗಿ ನಮ್ಮ ಚುನಾವಣಾ ವ್ಯವಸ್ಥೆಯನ್ನು ದುಪ್ಪಟ್ಟು ಪ್ರಮಾಣದಲ್ಲಿ ವಿಸ್ತರಿಸಬೇಕಾಗುತ್ತದೆ. ಇವೆಲ್ಲವೂ ಅವಸರದಿಂದ ಮಾಡುವ ಕೆಲಸ ಅಲ್ಲ. ಹೊಸ ಚುನಾವಣಾ ವ್ಯವಸ್ಥೆ ಜಾರಿಗೆ ಬರಬೇಕಾದರೆ ಮೊದಲು ಪ್ರಜಾಪ್ರತಿನಿಧಿ ಕಾಯ್ದೆಗೆ ತಿದ್ದುಪಡಿ ಮಾಡಬೇಕಾಗಿದೆ. ಇದರ ಜೊತೆಗೆ ಸಂವಿಧಾನದ ಕನಿಷ್ಠ ಐದು ಪರಿಚ್ಛೇದಗಳಿಗೆ ತಿದ್ದುಪಡಿ ತರಬೇಕಾಗಿದೆ. ಈಗಿನ ವ್ಯವಸ್ಥೆಯಲ್ಲಿ ಸಂವಿಧಾನ ತಿದ್ದುಪಡಿಗೆ ಬೇಕಾದಷ್ಟು ಸದಸ್ಯರ ಸಂಖ್ಯೆಯನ್ನು ಹೊಂದಿಸಿಕೊಳ್ಳುವುದು ಎನ್‌ಡಿಎಗೆ ಸಹ ಸಾಧ್ಯವಿಲ್ಲ. ಇವೆಲ್ಲವೂ ನರೇಂದ್ರ ಮೋದಿ ಅವರ ಸರ್ಕಾರಕ್ಕೆ ಗೊತ್ತಿದ್ದರೂ ಕೇವಲ ಜನರಲ್ಲಿ ಗೊಂದಲವನ್ನು ಹುಟ್ಟುಹಾಕಿ ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಈ ಪ್ರಸ್ತಾವವನ್ನು ಸಚಿವ ಸಂಪುಟ ಅಂಗೀಕರಿಸಿದೆ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಇನ್ನು ಈ ಕುರಿತು ಟ್ವೀಟ್ ಮಾಡಿದ ಅವರು ‘ಒಂದು ಸರ್ಕಾರದ ಆದ್ಯತೆಗಳು ಏನಿರಬೇಕೆಂಬ ಸಾಮಾನ್ಯ ಜ್ಞಾನವೂ ಕೇಂದ್ರ @BJP4India ಸರ್ಕಾರಕ್ಕಾಗಲಿ, ಪ್ರಧಾನಮಂತ್ರಿಯವರಿಗಾಗಲಿ ಇದ್ದ ಹಾಗೆ ಕಾಣುವುದಿಲ್ಲ. ದೇಶಾದ್ಯಂತ ನಿರುದ್ಯೋಗ ತಾಂಡವವಾಡುತ್ತಿದೆ, ಹಣದುಬ್ಬರದಿಂದ ದೇಶದ ಆರ್ಥಿಕತೆ ತತ್ತರಿಸುತ್ತಿದೆ. ಅಗತ್ಯವಸ್ತುಗಳ ಬೆಲೆ ಏರಿಕೆಯಿಂದ ಜನ ಬವಣೆಪಡುತ್ತಿದ್ದಾರೆ. ದೇಶಾದ್ಯಂತ ಕಾನೂನು ಸುವ್ಯವಸ್ಥೆ ಮೇಲಿನ ನಿಯಂತ್ರಣ ತಪ್ಪಿಹೋಗಿದ್ದು, ದಲಿತರು ಮತ್ತು ಮಹಿಳೆಯರ ಮೇಲೆ ದೌರ್ಜನ್ಯಗಳು ಮಿತಿಮೀರಿ ಹೋಗುತ್ತಿದೆ. ಈ ಬಗ್ಗೆ ಯೋಚನೆ ಮಾಡಲು ಕೂಡಾ ಪುರುಸೊತ್ತಿಲ್ಲದ ಪ್ರಧಾನ ಮಂತ್ರಿಗಳು ‘‘ಒಂದು ದೇಶ ಒಂದು ಚುನಾವಣೆ’’ ಎಂಬ ಗಿಮಿಕ್ ಮೂಲಕ ಜನರ ಗಮನವನ್ನು ಬೇರೆ ಕಡೆ ಸೆಳೆದು ತಮ್ಮ ವೈಫಲ್ಯವನ್ನು ಮುಚ್ಚಿಹಾಕಲು ಹೊರಟಿದ್ದಾರೆ’ ಎಂದು ಹೇಳಿದ್ದಾರೆ.