Home News Nandini Ghee: ಕರ್ನಾಟಕದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆಗೆ ಆದೇಶ- ಧಾರ್ಮಿಕ ದತ್ತಿ ಇಲಾಖೆ

Nandini Ghee: ಕರ್ನಾಟಕದ ದೇಗುಲದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆಗೆ ಆದೇಶ- ಧಾರ್ಮಿಕ ದತ್ತಿ ಇಲಾಖೆ

KMFGhee
image source: News 9live.com

Hindu neighbor gifts plot of land

Hindu neighbour gifts land to Muslim journalist

Nandini Ghee: ತಿರುಪತಿ ಲಡ್ಡುವಿನಲ್ಲಿ ಪ್ರಾಣಿಗಳ ಕೊಬ್ಬು ಬಳಕೆ ಮಾಡಲಾಗುತ್ತಿರುವ ಕುರಿತು ಸ್ಫೋಟಕ ವಿಷಯ ಬಹಿರಂಗವಾಗುತ್ತಿದ್ದಂತೆ ಇದು ರಾಜಕೀಯ ವಾಗ್ಯುದ್ಧಕ್ಕೂ ವೇದಿಕೆ ಆಗಿದೆ. ಕರ್ನಾಟಕದ ದತ್ತಿ ಇಲಾಖೆ ಕೂಡಾ ಇದೀಗ ದೇವಸ್ಥಾನಗಳಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಕೆ ಮಾಡುವಂತೆ ಆದೇಶ ಹೊರಡಿಸಲಾಗಿದೆ.

ಮುಜರಾಯಿ ಮತ್ತು ಸಾರಿಗೆ ಇಲಾಖೆ ಸಚಿವ ರಾಮಲಿಂಗಾರೆಡ್ಡಿ ಅವರು ಈ ಕುರಿತು ಸುತ್ತೋಲೆ ಹೊರಡಿಸಿದ್ದು, ಧಾರ್ಮಿಕ ದತ್ತಿ ಇಲಾಖೆ, ದೇವಸ್ಥಾನದ ಸೇವೆಗಳಿಗೆ, ದೀಪಗಳಿಗೆ, ಪ್ರಸಾದ ತಯಾರಿಕೆ ಮತ್ತು ದಾಸೋಹ ಭವನದಲ್ಲಿ ಕಡ್ಡಾಯವಾಗಿ ನಂದಿನಿ ತುಪ್ಪ ಬಳಸಲು ಸೂಚಿಸಿದ್ದಾರೆ.

ತಿರುಪತಿ ತಿಮ್ಮಪ್ಪನ ಲಡ್ಡು ತಯಾರಿಕೆಗೆ ಕರ್ನಾಟಕ ನಂದಿನಿ ತುಪ್ಪ ಬಳಕೆ ಮಾಡಲಾಗುತ್ತಿದೆ. ಆದರೆ ಜಗನ್‌ ರೆಡ್ಡಿ ಸರಕಾರದ ಅವಧಿಯಲ್ಲಿ ನಾಲ್ಕು ವರ್ಷ ನಂದಿನಿ ತುಪ್ಪ ತಿರುಪತಿಗೆ ಸರಬರಾಜು ಆಗಿಲ್ಲ. ಹೀಗಾಗಿ ಇದಕ್ಕೂ ನಮಗೂ ಸಂಬಂಧವಿಲ್ಲ ಎಂದು ನಿನ್ನೆ ಕೆಎಂಎಫ್‌ ಸ್ಪಷ್ಟನೆ ನೀಡಿತ್ತು.