Weather Report: ಕರ್ನಾಟಕದಲ್ಲಿ ಸೆ.22ರಿಂದ 25 ರವರೆಗೆ ಹವಾಮಾನ ಮುನ್ಸೂಚನೆ ಇಂತಿದೆ!
Weather Report: ಕಾಸರಗೋಡು ಸೇರಿದಂತೆ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಸೆಪ್ಟೆಂಬರ್ 22ರಿಂದ ಮೋಡದ ವಾತಾವರಣದೊಂದಿಗೆ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ (Weather Report) ಇದೆ.
ಇನ್ನು ಮಲೆನಾಡುಗಳಾದ, ಕೊಡಗು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದು, ಉಳಿದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆ ಇರಲಿದೆ. ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಿರುವ ಪ್ರದೇಶಗಳಲ್ಲಿ ಅಲ್ಲಲ್ಲಿ ಒಂದೆರಡು ಸಾಮಾನ್ಯ ಮಳೆಯ ಮುನ್ಸೂಚನೆ ಇದ್ದರೆ, ಉಳಿದ ಭಾಗಗಳಲ್ಲಿ ಮೋಡ ಅಥವಾ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ. ಅಂತೆಯೇ ಹಾಸನದಲ್ಲಿ ಮೋಡ ಅಥವಾ ಅಲ್ಲಲ್ಲಿ ತುಂತುರು ಮಳೆಯ ಮುನ್ಸೂಚನೆ ಇದೆ. ಒಟ್ಟಿನಲ್ಲಿ 22ರಿಂದ ಮಳೆ ಜಾಸ್ತಿಯಾಗುವ ಲಕ್ಷಣಗಳಿದ್ದು, ಮುಂದಿನ 4 ಅಥವಾ 5 ದಿನಗಳವರೆಗೂ ಮುಂದುವರಿಯುವ ಲಕ್ಷಣಗಳಿವೆ.
ಇನ್ನು ಒಳನಾಡುಗಳಾದ ಉತ್ತರ ಒಳನಾಡಿನ ಹಾವೇರಿ, ಧಾರವಾಡ, ಬೆಳಗಾವಿ, ಬಾಗಲಕೋಟೆ, ಗದಗ, ಕೊಪ್ಪಳ, ಬಳ್ಳಾರಿ, ರಾಯಚೂರು, ಯಾದಗಿರಿ, ಕಲಬುರ್ಗಿ, ವಿಜಯಪುರ ಹಾಗೂ ಬೀದರ್ ಜಿಲ್ಲೆಗಳ ಅಲ್ಲಲ್ಲಿ ಮಳೆಯ ಮುನ್ಸೂಚನೆ ಇದೆ.
ಅದಲ್ಲದೆ ದಕ್ಷಿಣ ಒಳನಾಡಿನ ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಗಳ ಒಂದೆರಡು ಕಡೆ ತುಂತುರು ಮಳೆಯ ಮುನ್ಸೂಚನೆ ಇದೆ . ಸದ್ಯ ಸೆಪ್ಟೆಂಬರ್ 22ರಿಂದ 25ರ ತನಕ ಉತ್ತರ ಹಾಗೂ ದಕ್ಷಿಣ ಒಳನಾಡು ಅಲ್ಲಲ್ಲಿ ಉತ್ತಮ ಮಳೆಯ ಮುನ್ಸೂಚನೆ ಇದೆ.