Karnataka High Court: ಸಿಎಂ ಅರ್ಜಿ ವಜಾ : ಸತ್ಯಕ್ಕೆ ಜಯ ಸಿಕ್ಕಿದೆ ಎಂದ ದೂರುದಾರ ಸ್ನೇಹಮಯಿ ಕೃಷ್ಣ
Karnataka High Court: ಸಿಎಂ ಸಿದ್ದರಾಮಯ್ಯ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ವಜಾಗೊಳಿಸಿದೆ. ಸಿಎಂ ಅವರು ನಾಳೆ ಕೇರಳ ಪ್ರವಾಸ ಮಾಡಲಾಗಿದ್ದಾರೆ. ದೂರುದಾರ ಸ್ನೇಹಮಯಿ ಕೃಷ್ಣ ಇದೀಗ ಹೈಕೋರ್ಟ್ ಆದೇಶದ ಕುರಿತು ಪ್ರತಿಕ್ರಿಯೆ ನೀಡಿದ್ದಾರೆ. ” ಸತ್ಯಕ್ಕೆ ಜಯ ಸಿಕ್ಕಿದೆ” ಎಂದು ಹೇಳಿದ್ದಾರೆ.
ಸಿಎಂ ಸಲ್ಲಿಸಿದ್ದ ಅರ್ಜಿಯನ್ನು ಹೈಕೋರ್ಟ್ ತಿರಸ್ಕರಿಸಿದೆ. ರಾಜ್ಯಪಾಲರು ಕಾನೂನು ಬದ್ಧವಾಗಿ ಅನುಮತಿ ನೀಡಿರುವುದಾಗಿ, ಈ ರಾಜ್ಯಪಾಲರ ಆದೇಶವನ್ನು ಹೈಕೋರ್ಟ್ ಎತ್ತಿಹಿಡಿದಿದೆ. ರಾಜ್ಯಪಾಲರ ಆದೇಶ ಕಾನೂನು ಬದ್ಧವಾಗಿದೆ ಎಂದು ಹೇಳಿದೆ.
ಹೈಕೋರ್ಟ್‌ನ ಈ ತೀರ್ಪನ್ನು ಸ್ವಾಗತ ಮಾಡುತ್ತೇವೆ ಎಂದು ದೂರುದಾರ ಸ್ನೇಹಮಯಿ ಕೃಷ್ಣ ಮಾಧ್ಯಮಗಳಿಗೆ ಹೇಳಿದ್ದಾರೆ.