CM Siddaramaiah: ‘ಪ್ರಧಾನಿ ಮೋದಿಯನ್ನು ಕರ್ನಾಟಕಕ್ಕೆ ಕರೆಸಿ ಸನ್ಮಾನ ಮಾಡುತ್ತೇವೆ’ – ಸಿದ್ದರಾಮಯ್ಯ ಘೋಷಣೆ !! ಏನಿದು ಹೊಸ ಪ್ಲಾನ್?

CM Siddaramaiah: ಪ್ರಧಾನಿ ಮೋದಿ ಅವರನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಏರ್ಪಡಿಸುವುದಾಗಿ ಸಿಎಂ ಸಿದ್ದರಾಮಯ್ಯ(CM Siddaramaiah) ಹೇಳಿದ್ದಾರೆ. ಅರೆ.. ಇದೇನು ಮೋದಿಯವರನ್ನು ಹಾಗೂ ಅವರ ಸರ್ಕಾರವನ್ನು ಸಮಯ ಸಿಕ್ಕಾಗೆಲ್ಲಾ ಟೀಕಿಸುವ ಸಿದ್ದರಾಮಯ್ಯ, ಇದ್ದಕ್ಕಿದ್ದಂತೆ ಹೀಗೆಕಂದ್ರು ಎಂದು ಯೋಚಿಸ್ತಿದ್ದೀರಾ? ಹಾಗಿದ್ರೆ ಇಲ್ಲಿದೆ ನೋಡಿ ಅಸಲಿ ವಿಚಾರ.

ರಾಜ್ಯದಲ್ಲಿ ಮುಡಾ ಹಗರಣ(Muda Scam) ದೊಡ್ಡ ಮಟ್ಟದಲ್ಲಿ ಸದ್ದುಮಾಡುತ್ತಿದೆ. ಹೈಕೋರ್ಟ್ ತೀರ್ಪು ಬಂದ ಬಳಿಕವಂತೂ ಇದರ ಕಾವು ಬಾರೀ ಜೋರಾಗಿದೆ. ಜೊತೆಗೆ ಸಿದ್ದರಾಮಯ್ಯ ಬುಡ ಅಲುಗಾಡಿದೆ. ಸಿದ್ದು ಕುಣಿಕೆಯನ್ನು ಇದು ಜೋರಾಗಿ ಬಿಗಿಯುತ್ತಿದೆ. ಈ ವಿಚಾರಕ್ಕೆ ಪ್ರಧಾನಿ ಮೋದಿ ಕೂಡ ಎಂಟ್ರಿಕೊಟ್ಟಿದ್ದು ತಮ್ಮ ಭಾಷಣಗಳಲ್ಲಿ ಸಿದ್ದರಾಮಯ್ಯರನ್ನು ಉಲ್ಲೇಖಿಸಿ ಕುಟುಕಿದ್ದಾರೆ. ಹೀಗಾಗಿ ಮುಡಾ ಹಗರಣ ಪ್ರಸ್ತಾಪಿಸಿ ತಮ್ಮನ್ನು ಟೀಕಿಸಿದ ಪ್ರಧಾನಿ ಮೋದಿ(PM Modi) ಅವರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಿರುಗೇಟು ಕೊಟ್ಟಿದ್ದಾರೆ.

ಭ್ರಷ್ಟಾಚಾರದ ಆರೋಪದ ಕಳಂಕ ಮೆತ್ತಿಕೊಂಡಿಲ್ಲದ ಒಬ್ಬನೇ ಒಬ್ಬ ನಾಯಕನನ್ನು ಕರ್ನಾಟಕದ ಬಿಜೆಪಿಯಲ್ಲಿ ತೋರಿಸಿದರೆ, ಮೋದಿ ಅವರನ್ನು ಕರ್ನಾಟಕಕ್ಕೆ ಗೌರವದಿಂದ ಕರೆಸಿ ಸಾರ್ವಜನಿಕ ಸನ್ಮಾನ ಕಾರ್ಯಕ್ರಮ ಏರ್ಪಡಿಸುವುದಾಗಿ ಸವಾಲು ಹಾಕಿದ್ದಾರೆ. ದೂರದ ಊರಲ್ಲಿ ಕೂತು ಗಾಳಿಯಲ್ಲಿ ಗುಂಡು ಹೊಡೆಯಬೇಡಿ, ನೇರಾನೇರ ಚರ್ಚೆ ಮಾಡಲು ನೀವು ಸಿದ್ದ ಇದ್ದರೆ ನಾನು ಸದಾ ಸಿದ್ದ ಎಂದು ಪಂಥಾಹ್ವಾನ ನೀಡಿದ್ದಾರೆ.

ಈ ಕುರಿತು ಸುದೀರ್ಘ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ‘ಗಣಿಗಾರಿಕೆಗೆ ಕಾನೂನುಬಾಹಿರವಾಗಿ ಭೂಮಿ ಮಂಜೂರು ಮಾಡಿರುವ, ನೂರಾರು ಕೋಟಿ ರೂಪಾಯಿ ಹಗರಣದ ಆರೋಪ ಎದುರಿಸುತ್ತಿರುವ ಹೆಚ್‌ಡಿ ಕುಮಾರಸ್ವಾಮಿ ಅವರನ್ನು ಕೇಂದ್ರ ಸಂಪುಟಕ್ಕೆ ಸೇರಿಸಿಕೊಂಡಿರುವ ನಿಮಗೆ ಇತರರ ವಿರುದ್ಧ ಭ್ರಷ್ಟಾಚಾರದ ಆರೋಪ ಮಾಡುವಾಗ ಆತ್ಮಸಾಕ್ಷಿಯೂ ಚುಚ್ಚುವುದಿಲ್ಲವೇ? ಈ ಹಗರಣಕ್ಕೆ ಸಂಬಂಧಿಸಿದಂತೆ ನ್ಯಾಯಾಲಯಕ್ಕೆ ಆರೋಪ ಪಟ್ಟಿ ಸಲ್ಲಿಸಲು ಕರ್ನಾಟಕದ ಲೋಕಾಯುಕ್ತರು ಕೋರಿರುವ ಅನುಮತಿ ಬಗ್ಗೆ ಘನತೆವೆತ್ತ ರಾಜ್ಯಪಾಲರು ಕಣ್ಣುಮುಚ್ಚಿಕೊಂಡಿರುವುದೇಕೇ? ಅವರ ಮೇಲೆ ಒತ್ತಡ ಹೇರುತ್ತಿರುವರು ಯಾರು? ಎಂದಿದ್ದಾರೆ.

ಇಷ್ಟೇ ಅಲ್ಲದೆ ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹುದ್ದೆಯನ್ನು ಎರಡುವರೆ ಸಾವಿರ ಕೋಟಿ ರೂಪಾಯಿಗಳಿಗೆ ಹರಾಜು ಹಾಕಿ ಹಣ ಪೀಕಿದ್ದಾರೆ ಎಂಬ ಆರೋಪವನ್ನು ಸ್ವಪಕ್ಷದ ನಾಯಕರಿಂದಲೇ ಎದುರಿಸುತ್ತಿರುವ ಪ್ರಧಾನಿ ಮೋದಿ ಅವರಿಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ? ತಮ್ಮ ಪಕ್ಷದ ಮುಖ್ಯಮಂತ್ರಿ ಹುದ್ದೆಯನ್ನು ಮಾರಾಟ ಮಾಡಲಾಗಿದೆ ಎಂದು ರಾಜ್ಯದ ಬಿಜೆಪಿ ಶಾಸಕರೊಬ್ಬರು ಬಹಿರಂಗವಾಗಿ ಆರೋಪಿಸಿದ್ದರೂ ಅವರ ಮೇಲೆ ಕ್ರಮ ಇಲ್ಲ. ದಿನ ಬೆಳಗಾದರೆ ಭ್ರಷ್ಟಾಚಾರದ ಆರೋಪದ ಕೆಸರೆರಚಾಟದಲ್ಲಿ ತೊಡಗಿರುವ ಬಿಜೆಪಿ ಶಾಸಕರ ವಿರುದ್ಧವೂ ಯಾವ ಕ್ರಮವೂ ಇಲ್ಲ. ನರೇಂದ್ರ ಮೋದಿ ಅವರೇ ಈ ಮೌನಕ್ಕೆ, ಈ ನಿಷ್ಕ್ರೀಯತೆಗೆ ಏನು ಕಾರಣ? ಈ ಭ್ರಷ್ಟಾಚಾರದಲ್ಲಿ ನೀವೂ ಭಾಗಿದಾರರೆಂದು ತಿಳಿದುಕೊಳ‍್ಳಬಹುದೇ? ಎಂದು ಪ್ರಶ್ನೆ ಮಾಡಿದ್ದಾರೆ.

Leave A Reply

Your email address will not be published.