Arrest BJP leaders: ಬಿಜೆಪಿಯ ರಾಶಿ ರಾಶಿ ಭ್ರಷ್ಟರ ವಿರುದ್ಧ ಪ್ರಧಾನಿ ಮೋದಿ ಕ್ರಮ ಕೈಗೊಳ್ಳಲಿ – ಸಿಎಂ ಸಿದ್ದರಾಮಯ್ಯ‌ ಆಗ್ರಹ

Share the Article

Arrest BJP leaders: ಬಿಜೆಪಿ ಪಕ್ಷದಲ್ಲಿಯೇ(BJP Party) ಬಹಳ ಭ್ರಷ್ಟಾಚಾರಿಗಳಿದ್ದು, ಪ್ರಧಾನಿ ಮೋದಿಯವರು(PM Modi) ಅವರ ಮೇಲೆ ಮೊದಲು ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ(CM Siddaramaiah) ತಿಳಿಸಿದರು.

ಪ್ರದಾನಿ ಮೋದಿಯವರು ಹರಿಯಾಣದ ಪ್ರಚಾರ ಭಾಷಣದಲ್ಲಿ ರಾಜ್ಯದ ಮುಡಾ ವಿಚಾರವನ್ನು ಪ್ರಸ್ತಾಪಿಸುತ್ತಾರೆ ಎಂಬುದಕ್ಕೆ ಪ್ರತಿಕ್ರಯಿಸುತ್ತಾ, ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು ಮೋದಿಯವರು ಮಣಿಪುರದ ಹಿಂಸೆಯ ಬಗ್ಗೆ ಮಾತನಾಡುವುದೂ ಇಲ್ಲ , ಅಲ್ಲಿಗೆ ಭೇಟಿಯೂ ನೀಡಲಿಲ್ಲವೇಕೆ? ಎಂದು ಪ್ರಶ್ನಿಸಿದರು.

ಸುಳ್ಳು ಹೇಳಿಕೆಗಳಿಗೆ ಉತ್ತರ ನೀಡುವುದಿಲ್ಲ
ಕುಮಾರಸ್ವಾಮಿ ಪತ್ರಿಕಾ ಗೋಷ್ಟಿಯಲ್ಲಿ ನೀಡಿರುವ ಹೇಳಿಕೆ ಬಗ್ಗೆ ಪತ್ರಕರ್ತರು ಕೇಳಿದ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ಕುಮಾರಸ್ವಾಮಿಯವರ ಎಲ್ಲ ಹೇಳಿಕೆಗಳು ಸುಳ್ಳಿನಿಂದ ಕೂಡಿದ್ದು, ಅವರ ಎಲ್ಲ ಮಾತಿಗೆ ಪ್ರತಿಕ್ರಿಯೆ ನೀಡುವುದು ಅವಶ್ಯಕತೆಯಿಲ್ಲ ಎಂದರು.  ಪೊನ್ನಣ್ಣ ನವರು ನನ್ನ ಕಾನೂನು ಸಲಹೆಗಾರರಾಗಿರುವುದರಿಂದ , ಪ್ರತಿದಿನ ಅವರಿಂದ ಕಾನೂನಿನ ಚರ್ಚೆ ನಡೆಸುತ್ತೇನೆ ಎಂದರು.

Leave A Reply